Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಮಾಜಿಕ ಆರ್ಥಿಕ ಸಮೀಕ್ಷೆ| ಕ್ಷೇತ್ರ...

ಸಾಮಾಜಿಕ ಆರ್ಥಿಕ ಸಮೀಕ್ಷೆ| ಕ್ಷೇತ್ರ ಶಿಕ್ಷಣಾಧಿಕಾರಿ, ಶಿಕ್ಷಕರಿಗೆ ನೀಡಲಾದ ನೋಟೀಸು ಹಿಂಪಡೆಯಲು ಬೋಜೇಗೌಡ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Oct 2025 5:56 PM IST
share
ಸಾಮಾಜಿಕ ಆರ್ಥಿಕ ಸಮೀಕ್ಷೆ| ಕ್ಷೇತ್ರ ಶಿಕ್ಷಣಾಧಿಕಾರಿ, ಶಿಕ್ಷಕರಿಗೆ ನೀಡಲಾದ ನೋಟೀಸು ಹಿಂಪಡೆಯಲು ಬೋಜೇಗೌಡ ಆಗ್ರಹ

ಮಂಗಳೂರು, ಅ.6: ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಸಂದರ್ಭ ವಿನಾ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕರಿಗೆ ನೀಡಲಾದ ನೋಟಿಸ್‌ನ್ನು ವಾಪಸ್ ಪಡೆಯಬೇಕು. ಈಗಾಗಲೇ ಗಣತಿ ಪೂರ್ಣಗೊಳಿಸಿದ ಸ್ಥಳಗಳನ್ನು ಪಟ್ಟಿಯಿಂದ ತೆಗೆದುಹಾಕಿ ಸಮರ್ಪಕ ಗಣತಿಗೆ ಅವಕಾಶ ಮಾಡಿಕೊಡಬೇಕು ಎಂದು ದ.ಕ. ಜಿಲ್ಲಾಡಳಿತವನ್ನು ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಒತ್ತಾಯಿಸಿದ್ದಾರೆ.

ಮಂಗಳೂರಿನ ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣತಿ ಕಾರ್ಯವನ್ನು ವಿಳಂಬವಾಗಿ ನಡೆಸಲು ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯಾವುದೇ ಗಣತಿ ಕಾರ್ಯಗಳಿಗೆ ಶಿಕ್ಷಕರನ್ನು ಬಳಕೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕೂಡ ಶಿಕ್ಷಕರನ್ನು ಬಳಕೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಇದರ ಹೊರತೂ ದ.ಕ. ಜಿಲ್ಲೆಯಲ್ಲಿ ಯಥೇಚ್ಛವಾಗಿ ಶಿಕ್ಷಕರನ್ನು ಬಳಸಲಾಗುತ್ತಿದೆ.

ಶಿಕ್ಷಕರಿಗೆ ಮಧ್ಯರಾತ್ರಿ ಕರೆ ಮಾಡಿ ಹಿರಿಯ ಅಧಿಕಾರಿಗಳು ಜವಾಬ್ದಾರಿ ಹಂಚಿಕೆ ಮಾಡುತ್ತಿದ್ದಾರೆ. ನಸುಕಿನ ಜಾವ 6 ಗಂಟೆಗೆ ಕರೆ ಮಾಡಿ ಗಣತಿಗೆ ಮೊಬೈಲ್‌ನಲ್ಲಿ ಲಾಗಿನ್ ಆಗುವಂತೆ ಒತ್ತಡ ಹೇರುತ್ತಿದ್ದಾರೆ. ಗಣತಿ ಪೂರ್ಣಗೊಂಡ ಮನೆಗಳ ಪಟ್ಟಿಯನ್ನು ಅಳಿಸಿ ಹಾಕದೆ ಪದೇ ಪದೇ ಅದನ್ನೇ ಸೇರಿಸಿ ನೀಡುವುದರಿಂದ ಗಣತಿದಾರರು ಮತ್ತೆ ಅದೇ ಮನೆಗಳಿಗೆ ಹೋಗಿ ಬರುವಂತಾಗಿದೆ. ಗೂಗಲ್ ಮ್ಯಾಪ್ ಕೂಡ ಅಸಮರ್ಪಕವಾಗಿ ನಮೂದಾಗುತ್ತಿದ್ದು, ಸೂಚಿಸಿದ ಮನೆಗಿಂತ ಅಧಿಕ ಮನೆಗಳನ್ನು ತೋರಿಸುತ್ತಿದೆ. ಹೀಗಾಗಿ ಈ ಗಣತಿ ಕಾರ್ಯ ಅಸಮರ್ಪಕವಾಗಿದ್ದು, ಅವೈಜ್ಞಾನಿಕ ದಿಂದ ಕೂಡಿದೆ. ಅನಾರೋಗ್ಯಪೀಡಿತರನ್ನೂ ಗಣತಿಗೆ ಸೇರಿಸಿಕೊಳ್ಳುವ ಮೂಲಕ ಮಾನವೀಯತೆ ಮರೆತಂತೆ ಜಿಲ್ಲಾಡಳಿತ ವರ್ತಿಸಿದೆ ಎಂದು ಬೋಗೌಡ ಆರೋಪಿಸಿದರು.

ಅ. 27 ರಿಂದ ಜಾತಿ ಗಣತಿ ಆರಂಭಿಸುವಂತೆ ಸರ್ಕಾರ ಸೂಚನೆ ನೀಡಿದೆ. ಆದರೆ ಮಂಗಳೂರಲ್ಲಿ ಜಿಲ್ಲಾಡಳಿತ ಸಮೀಕ್ಷಾ ಮೇಲ್ವಿಚಾರಕರನ್ನು ಒಂದು ವಾರ ವಿಳಂಬವಾಗಿ ನೇಮಕ ಮಾಡಿದೆ. ಈಗ ಕಂದಾಯ ಹಾಗೂ ಇನ್ನಿತರ ಇಲಾಖೆಗಳ ಹೊರತು ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರನ್ನೂ ಗಣತಿ ಕಾರ್ಯಕ್ಕೆ ಸೇರ್ಪಡೆಗೊಳಿಸಲಾಗಿದೆ. ಆದರೂ ನಿಗದಿತ ಅವಧಿಯಲ್ಲಿ ಮುಕ್ತಾಯಗೊಳ್ಳುವ ಸೂಚನೆ ಕಾಣಿಸುತ್ತಿಲ್ಲ. ವಿನಾ ಕಾರಣ ಗೊಂದಲಗಳನ್ನು ಹುಟ್ಟುಹಾಕುವ ಮೂಲಕ ಜಿಲ್ಲಾಡಳಿತ ಗಣತಿ ಪ್ರಕ್ರಿಯೆಯನ್ನು ಆರಂಭದಿಂದಲೇ ಗಂಭೀರವಾಗಿ ಪರಿಗಣಿಸದಿರು ವುದೇ ಇದಕ್ಕೆಲ್ಲ ಕಾರಣವಾಗಿದೆ. ಹಾಗಾಗಿ ಇದಕ್ಕೆ ಕಾರಣಕರ್ತ ಹೆಚ್ಚುವರಿ ಜಿಲ್ಲಾಧಿಕಾರಿ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿರುವುದಾಗಿ ಭೋಜೇ ಗೌಡ ಹೇಳಿದರು.

ಡಿಸಿ, ಎಡಿಸಿ ಭೇಟಿ ಮಾಡಿದ ಬೋಜೇಗೌಡ

ಸುದ್ದಿಗೋಷ್ಠಿ ನಡೆಸಿದ ಬಳಿಕ ವಿಧಾನ ಪರಿಷತ್ ಸದಸ್ಯ ಬೋಜೇ ಗೌಡರು ನೇರವಾಗಿ ಜಿಲ್ಲಾಧಿಕಾರಿಗಳ ಚೇಂಬರ್‌ಗೆ ತೆರಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ವಿಳಂಬ, ಶಿಕ್ಷಕರನ್ನು ಸತಾಯಿಸುವುದು ಸೇರಿದಂತೆ ಗಣತಿದಾರರಿಗೆ ಜಿಲ್ಲಾಡಳಿತ ಕಿರುಕುಳ ನೀಡುತ್ತಿದೆ ಇತ್ಯಾದಿ ಗಂಭೀರ ಆರೋಪಗಳ ಬಗ್ಗೆ ಡಿಸಿ ಹಾಗೂ ಎಡಿಸಿ ಜೊತೆ ಅರ್ಧ ಗಂಟೆಗೂ ಹೆಚ್ಚುಕಾಲ ಅವರು ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೋಜೇಗೌಡ, ಗಣತಿ ಪೂರ್ಣಗೊಂಡವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು ಮಾತುಕತೆ ಬಳಿಕ ಜಿಲ್ಲಾಡಳಿತ ಸಮ್ಮತಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಶಿಕ್ಷಕರಿಗೆ ನೋಟಿಸ್ ನೀಡಿದರೂ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಜಿಲ್ಲಾಡಳಿತ ಭರವಸೆ ನೀಡಿದೆ. ಇನ್ನು ಬಾಕಿ ಉಳಿದ ದಿನ ಗಳಲ್ಲಿ ಕ್ಷಿಪ್ರವಾಗಿ ಗಣತಿ ಕಾರ್ಯ ಮುಕ್ತಾಯಗೊಳಿಸಲು ಎಲ್ಲ ರೀತಿಯ ಮಾರ್ಗದರ್ಶನ ಮಾಡುವುದಾಗಿ ಜಿಲ್ಲಾಧಿಕಾರಿ ಸಮ್ಮಿತಿಸಿದ್ದಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X