ಮಂಗಳೂರು| ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಆರೋಪಿಯಿಂದ ದುರ್ವರ್ತನೆ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಅ.2ರಂದು ರಾತ್ರಿ ಮದ್ಯ ಸೇವಿಸಿ ಕಾರು ಚಲಾಯಿಸಿ ಪೊಲೀಸ ರೊಂದಿಗೆ ದುರ್ವರ್ತನೆ ತೋರಿಸಿದ್ದ ಆರೋಪಿ ಶಿವಪ್ರಸಾದ್ ಕರ್ಕೇರ ಎಂಬಾತ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಮೂರನೇ ಆರೋಪಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ರೌಡಿಶೀಟರ್ ಕೂಡ ಆಗಿರುವ ಈತ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್ ತಡೆದು ನಿಲ್ಲಿಸಲು ಯತ್ನಿಸಿದಾಗ ನಿಲ್ಲಿಸಿರಲಿಲ್ಲ. ಈ ವೇಳೆ ಕಾನ್‌ಸ್ಟೆಬಲ್ ತನ್ನ ಮೊಬೈಲ್‌ನಿಂದ ಕಾರಿನ ಹಿಂಭಾಗಕ್ಕೆ ಬಡಿದ ಪರಿಣಾಮ ಕಾರಿನ ಗಾಜು ಒಡೆದಿತ್ತು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಯಾಗಿತ್ತು ಎಂದು ಅವರು ತಿಳಿಸಿದ್ದಾರೆ.
Next Story





