ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಮೇಲೆ ಶೂ ಎಸೆತ ಖಂಡನೀಯ: ಪದ್ಮರಾಜ್ ಪೂಜಾರಿ

ಮಂಗಳೂರು: ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿರುವ ಕೃತ್ಯ ಖಂಡನೀಯ ಎಂದು ಕಾಂಗ್ರೆಸ್ ಧುರೀಣ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ನ್ಯಾಯಮೂರ್ತಿಯವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆಯಲಾಗಿದ್ದು, ಸನಾತನ ಧರ್ಮ ವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಎಂಬುದು ಅತ್ಯಂತ ಆಘಾತಕಾರಿ ಸಂಗತಿ. ಮನುವಾದಿಗಳ ಮನಸ್ಥಿತಿ ಯಾವ ರೀತಿ ಇದೆ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಹೇಳಿದ್ದಾರೆ.
ಈ ಘಟನೆ ಬಗ್ಗೆ ಕೇಂದ್ರ ಸರಕಾರದ ನಿಲುವೇನು? ಪ್ರಧಾನಿ, ಗೃಹಮಂತ್ರಿ ಹಾಗು ಕಾನೂನು ಸಚಿವರು ಏನು ಉತ್ತರ ಕೊಡುತ್ತಾರೆ? ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ವಕೀಲನೇ ಈ ರೀತಿಯ ಕೃತ್ಯ ಎಸಗಿರುವುದು ಗಂಭೀರ ವಿಷಯ. ಪರಿಸ್ಥಿತಿ ಎಲ್ಲಿಯವರೆಗೆ ತಲುಪಬಹುದು ಎಂಬುದು ಊಹಿಸಲಸಾಧ್ಯ. ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ ಅವರಿಗೆ ಕೇಂದ್ರ ಸರಕಾರ ಮತ್ತಷ್ಟು ರಕ್ಷಣೆ ನೀಡಬೇಕು. ಅಸಹಿಷ್ಣುತೆಯನ್ನು ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮೂಲಕ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.





