Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯ...

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Oct 2025 5:21 PM IST
share
ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

ಮಂಗಳೂರು, ಅ.8: ದೇಶದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿಯವರ ಮೇಲೆ ಶೂ ಎಸೆದ ಸನಾತನಿಯ ದುಷ್ಕ್ರತ್ಯವನ್ನು ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಆಕ್ರೋಶದ ಹಿನ್ನೆಲೆಯಲ್ಲಿ ನಗರದ ಕ್ಲಾಕ್‌ಟವರ್ ಬಳಿ ಬುಧವಾರ ರೈತ, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಜನಪರ ಸಮಾನ ಮನಸ್ಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಭಾರತ ವಕೀಲರ ಸಂಘಟನೆಯ ಜಿಲ್ಲಾಧ್ಯಕ್ಷ ಯಶವಂತ ಮರೋಳಿ ಮಾತನಾಡಿ ‘ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ತೂರಿರುವುದು ಆಕ್ರೋಶಿತನೊಬ್ಬನ ತಕ್ಷಣದ ಪ್ರತಿಕ್ರಿಯೆ ಅಲ್ಲ. ಇದರ ಹಿಂದೆ ವ್ಯವಸ್ಥಿತವಾದ ಪಿತೂರಿ ಇದೆ. ಚಪ್ಪಲಿ ತೂರಿದ ವ್ಯಕ್ತಿ ಬಲಪಂಥೀಯ ಸಿದ್ದಾಂತ, ಸಂಘಟನೆಗಳ ಜೊತೆಗೆ ಗುರುತಿಸಿಕೊಂಡಾತ. ಆರ್‌ಎಸ್ ಎಸ್‌ಗೆ ನೂರು ವರ್ಷ ತುಂಬಿರುವ ಸಂದರ್ಭ ನಡೆಯುತ್ತಿರುವ ಕಾರ್ಯಕ್ರಮಗಳು, ಹೊರಡುತ್ತಿರುವ ಸಂದೇಶಗಳು, ಮೋದಿ ನೇತೃತ್ವದ ಸರಕಾರ ನಾಣ್ಯ, ಅಂಚೆ ಚೀಟಿ ಬಿಡುಗಡೆ ಮಾಡಿ ನೀಡಿರುವ ಹೇಳಿಕೆಗಳಿಗೂ, ಚಪ್ಪಲಿ ತೂರಿದ ವ್ಯಕ್ತಿ ಘಟನೆಯ ತರುವಾಯ ನೀಡಿದ ಹೇಳಿಕೆಗಳಿಗೂ ಸಂಬಂಧ ಇದೆ ಎಂದರು.

ಭಾರತದ ಪ್ರಜಾಪ್ರಭುತ್ವ, ಜಾತ್ಯತೀತತೆ, ಸಂವಿಧಾನದ ಘನತೆಯನ್ನು ಘಾಸಿಗೊಳಿಸುವ ದುರುದ್ದೇಶದ ಭಾಗವಾಗಿಯೆ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಕಡೆಗೆ ಚಪ್ಪಲಿ ತೂರಲಾಗಿದೆ, ಈ ಹುನ್ನಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಎಐಟಿಯುಸಿ ಜಿಲ್ಲಾ ನಾಯಕರಾದ ಬಿ ಶೇಖರ್ ಮಾತನಾಡಿ, ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ತೂರಿದ ಘಟನೆಯ ಹಿಂದೆ ಸಂಘ ಪರಿವಾರದ ಶಕ್ತಿಗಳ ಪಿತೂರಿ ಅಡಗಿದೆ. ಘಟನೆಯ ತರುವಾಯ ಸಾಮಾಜಿಕ ಜಾಲತಾಣಗಳಲ್ಲಿ ಬಲಪಂಥೀಯರು ನ್ಯಾಯಮೂರ್ತಿಯ ವಿರುದ್ದ ಸೃಷ್ಟಿಸಿ ಹರಿಯ ಬಿಡುತ್ತಿರುವ ದ್ವೇಷ ಪೂರಿತ ಕತೆಗಳು ಘಟನೆಯಲ್ಲಿ ಸಂಘ ಪರಿವಾರದ ಪಾತ್ರವನ್ನು ಎತ್ತಿತೋರಿಸುತ್ತದೆ ಎಂದರು.

ದೇಶದ ಸಂವಿಧಾನವನ್ನೇ ಅಪ್ರಸ್ತುತಗೊಳಿಸುವ, ಬಲಪ್ರಯೋಗದ ಮೂಲಕ ಸನಾತನ ಮನುವಾದವನ್ನು ದೇಶದ ಮೇಲೆ ಅಘೋಷಿತವಾಗಿ ಹೇರುವ ಈ ಷಡ್ಯಂತ್ರವನ್ನು ಪ್ರಜಾಪ್ರಭುತ್ವವಾದಿಗಳು ಒಗ್ಗಟ್ಟಿನಿಂದ ಎದುರಿಸಬೇಕಿದೆ ಎಂದು ಹೇಳಿದರು

ದಲಿತ ಚಳುವಳಿಯ ಹಿರಿಯ ನಾಯಕರಾದ ಎಂ.ದೇವದಾಸ್ ರವರು ಮಾತನಾಡಿ, ಭಾರತದ ಸಂವಿಧಾನ, ಪ್ರಜಾಪ್ರಭುತ್ವವು ದಮನಿತ ಸಮುದಾಯಗಳಿಗೆ ಅವಕಾಶ ಒದಗಿಸುತ್ತಿರುವುದು, ಸರ್ವೋಚ್ಚ ನ್ಯಾಯಾಲಯದ ಉನ್ನತ ಪೀಠಗಳಲ್ಲಿ ವಂಚಿತ ಸಮುದಾಯಗಳು, ದಲಿತ ಜಾತಿಗಳಿಂದ ಬಂದವರು ಕುಳಿತುಕೊಳ್ಳುವುದು ಸನಾತನವಾದಿಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಜೀವ ವಿರೋಧಿ, ಅಸಮಾನತೆ, ಜಾತಿ ತಾರತಮ್ಯ ಪ್ರತಿಪಾದಿಸುವ ಮನುವಾದವನ್ನು ಹಿಂಬಾಗಿಲ ಮೂಲಕ ತರಲು ಈ ಸನಾತನವಾದಿಗಳು ಯತ್ನಿಸುತ್ತಿದ್ದಾರೆ. ಅದರ ಭಾಗವಾಗಿಯೇ ದಲಿತ ಸಮುದಾಯದಿಂದ ಬಂದಿರುವ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಸನಾತನಿಯೊಬ್ಬ ಚಪ್ಪಲಿ ತೂರಿದ್ದಾನೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಪ್ರತಿಭಟನೆಯನ್ನುದ್ದೇಶಿಸಿ ಸಮುದಾಯ ಸಂಘಟನೆಯ ರಾಜ್ಯ ನಾಯಕರಾದ ವಾಸುದೇವ ಉಚ್ಚಿಲ್,ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಮುಖಂಡರಾದ ಶೇಖರ್ ವಾಮಂಜೂರು,ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಮಾತನಾಡಿದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ಸೀತಾರಾಮ ಬೇರಿಂಜ, ವಿ ಕುಕ್ಯಾನ್,ಮಂಜಪ್ಪ ಪುತ್ರನ್,ರಮೇಶ್ ಉಳ್ಳಾಲ, ರಾಮಚಂದ್ರ ಬಬ್ಬುಕಟ್ಟೆ,ಯೋಗೀಶ್ ಜಪ್ಪಿನಮೊಗರು,ಪ್ರಮೀಳಾ ಶಕ್ತಿನಗರ, ಕೃಷ್ಣ ತಣ್ಣೀರುಬಾವಿ, ನವೀನ್ ಕೊಂಚಾಡಿ,ಕರಿಯ ಕೆ,ಕೃಷ್ಣ ಇನ್ನಾ, ಪ್ರಮೋದಿನಿ ಕಲ್ಲಾಪು, ಫ್ಲೇವಿ ಕ್ರಾಸ್ತಾ ಅತ್ತಾವರ,ಡಾ.ಪೌಲಿ ಟೀಚರ್,ತಯ್ಯುಬ್ ಬೆಂಗರೆ, ಪ್ರಭಾಕರ ಕಾಫಿಕಾಡ್, ರಾಕೇಶ್ ಕುಂದರ್, ವಿಲಾಸಿನಿ, ಅಸುಂತ ಡಿಸೋಜ, ರಿಝ್ವಾನ್ ಹರೇಕಳ, ರಝಾಕ್ ಮುಡಿಪು, ಅಬೂಬಕರ್ ಜೆಲ್ಲಿ, ಮನೋಜ್ ವಾಮಂಜೂರು, ಹೊನ್ನಯ್ಯ ಅಮೀನ್,ಮಂಜುಳಾ ವಾಮಂಜೂರು, ಲತಾ ಲಕ್ಷ್ಮಣ್ ಜಗದೀಶ್ ಬಜಾಲ್, ಸಾಧಿಕ್ ಮುಲ್ಕಿ, ವಿಶ್ವನಾಥ ಮಂಜನಾಡಿ, ನಾರಾಯಣ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X