ಕೋಟೆಪುರ: ಮೀನಿನ ಆಹಾರ ತಯಾರಿಕಾ ಸಂಸ್ಕರಣಾ ಘಟಕ ಗೋದಾಮು ಬೆಂಕಿಗಾಹುತಿ

ಉಳ್ಳಾಲ: ಕೋಟೆಪುರದಲ್ಲಿರುವ ಮೀನಿನ ಆಹಾರ ತಯಾರಿಕ ಸಂಸ್ಕರಣಾ ಘಟಕದ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ಕೋಟ್ಯಂತರ ರೂ. ನಷ್ಟ ಉಂಟಾಗಿದೆ.
ಎಚ್.ಕೆ.ಖಾದರ್ ಹಾಜಿ ಎಂಬವರಿಗೆ ಸೇರಿದ ಎಂಎಂಪಿ ಫಿಶ್ ಫುಡ್ ಗೋದಾಮು ಬೆಂಕಿ ಅವಘಡಕ್ಕೆ ಒಳಗಾಗಿದೆ. ಸಂಜೆ ವೇಳೆ ಗೋದಾಮಿನ ಒಳಗೆ ಬೆಂಕಿ ಕಾಣಿಸಿಕೊಂಡು ಒಮ್ಮಿಂದೊಮ್ಮೆಲೇ ಸುತ್ತಲೂ ಹರಿದಾಡಿದೆ. ಬೆಂಕಿಯ ಕೆನ್ನಾಲೆ ಹೊರಗೂ ಆವರಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ನಂತರ ಮಂಗಳೂರಿನಿಂದ ಅಗ್ನಿ ಶಾಮಕ ದಳದ ವಾಹನ ಬಂದು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿದ್ದರು. ಇದರಿಂದ ಒಂದೂವರೆ ಕೋಟಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
Next Story





