Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿಗೆ ಟೆಕ್ನಾಲಜಿ ಪಾರ್ಕ್ ಮಂಜೂರು :...

ಮಂಗಳೂರಿಗೆ ಟೆಕ್ನಾಲಜಿ ಪಾರ್ಕ್ ಮಂಜೂರು : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ10 Oct 2025 8:27 PM IST
share
ಮಂಗಳೂರಿಗೆ ಟೆಕ್ನಾಲಜಿ ಪಾರ್ಕ್ ಮಂಜೂರು : ಸಚಿವ ದಿನೇಶ್ ಗುಂಡೂರಾವ್
ಕೆಸಿಸಿಐ ಜೊತೆ ಸಂವಾದ

ಮಂಗಳೂರು, ಅ.10: ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ವಾಣಿಜ್ಯ ಹಬ್ ಆಗುವ ಪೂರ್ಣ ಸಾಮರ್ಥ್ಯ ಮಂಗಳೂರಿಗೆ ಇದೆ. ಅಲ್ಲದೆ ಹೂಡಿಕೆದಾರರು ಕೂಡ ಮಂಗಳೂರನ್ನು ಗುರುತಿಸಿದ್ದಾರೆ. ಅದಕ್ಕೆ ಪೂರಕವಾಗಿ ರಾಜ್ಯ ಸರಕಾರವು ಮಂಗಳೂರಿಗೆ 135 ಕೋ.ರೂ. ವೆಚ್ಚದಲ್ಲಿ ಟೆಕ್ನಾಲಜಿ ಪಾರ್ಕ್ ಮಂಜೂರು ಮಾಡಿದೆ. ಅದನ್ನು ಶೀಘ್ರ ಕಾರ್ಯ ಗತಗೊಳಿಸಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ನಗರದ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಸಿಸಿಐ)ಯ ವತಿಯಿಂದ ಚೇಂಬರ್ಸ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಂಗಳೂರಿನ ವಿಶಿಷ್ಟ ಸಂಸ್ಕೃತಿ, ಆಹಾರ-ವಿಹಾರ, ಪರಂಪರೆ, ಜನಜೀವನ ಎಲ್ಲವೂ ಆಕರ್ಷಿಸುವಂತಿದೆ. ಹಾಗಾಗಿ ಮಂಗಳೂರನ್ನು ಜಾಗತಿಕ ನಗರವನ್ನಾಗಿ ರೂಪಿಸಬೇಕಿದೆ. ಸಾಕಷ್ಟು ಅವಕಾಶಗಳಿದ್ದರೂ ಈವರೆಗೆ ಅದರ ಸಮರ್ಪಕ ಬಳಕೆ ಆಗಿಲ್ಲ. ಪ್ರವಾಸೋದ್ಯಮ, ಮೂಲಸೌಕರ್ಯಗಳನ್ನು ಮತ್ತಷ್ಟು ಸುಧಾರಿಸಬೇಕಿದೆ ಎಂದರು.

ಮಂಗಳೂರಿನ ಸಮಗ್ರ ಯೋಜನೆಗಳನ್ನು ಒಳಗೊಂಡ ಮಾಸ್ಟರ್ ಪ್ಲಾನ್ (ಮಹಾಯೋಜನೆ) ಶೀಘ್ರ ಬಿಡುಗಡೆ ಮಾಡಲಾಗುವುದು. ಅದಕ್ಕೆ ನಾಗರಿಕರು ಯಾವುದೇ ತಿದ್ದುಪಡಿಗಳಿದ್ದರೆ ಸೂಚಿಸಬಹುದು ಎಂದು ಸಚಿವ ಗುಂಡೂರಾವ್ ತಿಳಿಸಿದರು.

ಕೆಸಿಸಿಐ ಅಧ್ಯಕ್ಷ ಪಿ.ಬಿ.ಅಹ್ಮದ್ ಮುದಸ್ಸರ್ ಸ್ವಾಗತಿಸಿ, ಕೆಸಿಸಿಐ ಪರವಾಗಿ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.

*ಬೈಕಂಪಾಡಿಯಲ್ಲಿನ ಕೈಗಾರಿಕಾ ಪ್ರದೇಶದ ರಸ್ತೆಗಳ ಅಭಿವೃದ್ಧಿಗೊಳಿಸುವಂತೆ ಉದ್ಯಮಿಗಳಾದ ಅರುಣ್ ಪಡಿಯಾರ್, ಬಿ.ಎ. ನಝೀರ್ ಮನವಿ ಮಾಡಿದರು. ಉದ್ಯಮಿ ಯತೀಶ್ ಬೈಕಂಪಾಡಿ ಮಾತನಾಡಿ, ಪದೇ ಪದೇ ಕರಾವಳಿ ಸಮುದ್ರಕೊರೆತಕ್ಕೆ ತುತ್ತಾಗುವುದರಿಂದ ಕೃತಕ ರೀಫ್ ನಿರ್ಮಾಣದಂತಹ ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು ಸಲಹೆ ನೀಡಿದರು. ಆತ್ಮಿಕಾ ಅಮೀನ್ ಮಾತನಾಡಿದರು.

ಉಪಾಧ್ಯಕ್ಷ ದಿವಾಕರ್ ಪೈ ಕೊಚ್ಚಿಕಾರ್, ಕಾರ್ಯದರ್ಶಿಗಳಾದ ಅಶ್ವಿನ್ ರೈ ಮಾರೂರು, ಜೀತನ್ ಅಲೆನ್ ಸಿಕ್ವೇರ ಉಪಸ್ಥಿತರಿದ್ದರು. ಮೈತ್ರೇಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X