Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಳ್ವಾಸ್ ಕಾನೂನು ಕಾಲೇಜು ವತಿಯಿಂದ ವಿಶೇಷ...

ಆಳ್ವಾಸ್ ಕಾನೂನು ಕಾಲೇಜು ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Oct 2025 8:46 PM IST
share
ಆಳ್ವಾಸ್ ಕಾನೂನು ಕಾಲೇಜು ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ : ವಿದ್ಯಾರ್ಥಿಗಳು ಮನರಂಜನೆ ಅಥವಾ ಸ್ನೇಹಿತರ ಪ್ರಭಾವದಿಂದಲೂ ಡ್ರಗ್ಸ್ ವ್ಯಸನದ ಬಲೆಗೆ ಬೀಳಬಹುದು ಈ ಬಗ್ಗೆ ಜಾಗೃತೆ ವಹಿಸಿ. ಬಹುಪಾಲು ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ಕಿರುಕುಳವು ಪರಿಚಿತರ ಅಥವಾ ಕುಟುಂಬದವರಿಂದಲೇ ನಡೆಯುತ್ತದೆ. ಇಂತಹ ಸಂದರ್ಭದಲ್ಲಿ ಧೈರ್ಯದಿಂದ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಗತ್ಯ ಎಂದು ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸಲಹೆ ನೀಡಿದ್ದಾರೆ.

ಅವರು ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆದ ‘ಸೈಬರ್ ಕ್ರೈಮ್, ಡ್ರಗ್ ಟ್ರಾಫಿಕಿಂಗ್ ಹಾಗೂ ಸೋಶಿಯಲ್ ಆ್ಯಂಡ್ ಲೀಗಲ್ ಇಂಪ್ಲಿಕೇಶನ್ಸ್’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುತ್ತಿದ್ದರು.

ಮಾದಕ ವಸ್ತುಗಳ ಮೂಲಕ ಯುವ ಜನರನ್ನು ತಪ್ಪು ದಾರಿಗೆ ಎಳೆಯುವ ಹಾಗೂ ಕೋಮು ಸೌಹಾರ್ದತೆಯನ್ನು ಕೆಡಿಸುವ ಕೆಲಸವಾಗುತ್ತಿದೆ. ಸೈಬರ್ ಅಪರಾಧಗಳು ಇಂದು ಅತ್ಯಂತ ಸಂಕೀರ್ಣ ಹಾಗೂ ಕಾನೂನು ಜಾರಿಗೆ ಅತಿ ದೊಡ್ಡ ಸವಾಲಾಗಿ ಪರಿಣಮಿಸಿವೆ. ವಂಚಕರು ಈಗ ಅಸಲಿಯಂತೆ ಕಾಣುವ, ನಕಲಿ ಹೂಡಿಕೆ ವೆಬ್‌ಸೈಟ್ ಲಿಂಕ್‌ ಗಳನ್ನು ಸೃಷ್ಟಿಸುತ್ತಿದ್ದಾರೆ. ಜನರು ಅವುಗಳ ಮೇಲೆ ಕ್ಲಿಕ್ ಮಾಡಿದಾಗ ನಕಲಿ ಅಪ್ಲಿಕೇಶನ್ ಡೌನ್‌ಲೋಡ್ ಆಗಿ, ಜನರು ಅದನ್ನು ನಿಜವೆಂದು ನಂಬಿ ನಿರಂತರವಾಗಿ ಹಣ ಹೂಡುತ್ತಾರೆ. ಈ ಹಣ ವಂಚಕರ ‘ಮ್ಯೂಲ್ ಅಕೌಂಟ್’ (ಬೇರೊಬ್ಬರ ಹೆಸರಿನಲ್ಲಿ ತೆರೆಯಲಾದ ಆದರೆ ಸೈಬರ್ ವಂಚಕರಿಂದ ನಿಯಂತ್ರಿಸಲ್ಪಡುವ ಬ್ಯಾಂಕ್ ಖಾತೆ) ಗಳಿಗೆ ವರ್ಗಾಯಿಸಲಾಗುತ್ತದೆ. ಈ ಖಾತೆಗಳು ಹಲವು ರಾಜ್ಯಗಳಲ್ಲಿ ಹರಡಿರುವುದರಿಂದ ಹಣದ ವರ್ಗಾವಣೆಯನ್ನು ಪತ್ತೆಹಚ್ಚುವುದು ಕಷ್ಟವಾಗುತ್ತದೆ. ನಂತರ ಈ ಹಣವನ್ನು ನಗದಾಗಿ ಬದಲಾಯಿಸಿ ಬಿಟ್‌ಕಾಯಿನ್‌ಗೆ ಪರಿವರ್ತಿಸಿ ವಿದೇಶಗಳಿಗೆ ಕಳುಹಿಸುತ್ತಾರೆ ಎಂದು ನುಡಿದರು.

ಸರಕಾರದ ಗೃಹ ಸಚಿವಾಲಯ ಸೈಬರ್ ಅಪರಾಧಗಳ ವಿರುದ್ಧ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ದೇಶದೊಳಗೆ ಕಾರ್ಯನಿರ್ವಹಿಸುವ ವಂಚಕರನ್ನು ಬಂಧಿಸಿ, ಹಣವನ್ನು ವಾಪಸು ಪಡೆಯಲು ಪ್ರಯತ್ನಿಸಲಾಗುತ್ತದೆ. ಈ ನೆಲೆಯಲ್ಲಿ ಗ್ರಾಹಕರಿಗೆ ‘1930’ ಸೈಬರ್ ಕ್ರೈಮ್ ಹೆಲ್ಪ್‌ ಲೈನ್‌ ನಂಬರ್ ಸಹಕಾರಿಯಾಗಿದೆ. ವಂಚನೆಗೊಳಗಾದವರು ಶೀಘ್ರವಾಗಿ ಈ ಹೆಲ್ಪ್‌ ಲೈನ್‌ ಗೆ ಮಾಹಿತಿ ನೀಡಿದರೆ, ಖಾತೆಗಳನ್ನು ಸ್ಥಗಿತಗೊಳಿಸಿ ಮತ್ತು ಹಣ ವಾಪಸು ಪಡೆಯಲು ಸಾಧ್ಯ ಎಂದರು.

ಈ ಸಂದರ್ಭ ಅಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಕುರಿಯನ್, ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ, ಅಳ್ವಾಸ್ ಕಾನೂನು ಕಾಲೇಜಿನ ಪ್ರಾಚಾರ್ಯ ಮಹಾಂತೇಶ್ ಜಿ.ಎಸ್., ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ನಿಶಾಂತ್ ಅತಿಥಿಗಳನ್ನು ಪರಿಚಯಿಸಿದರು. ಸಾಧನಾ ಜಿ.ಎಸ್, ಕಾಯ೯ಕ್ರಮ ನಿರೂಪಿಸಿದರು. ನಿಷಿ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X