Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾಜಿ ಪತ್ರಕರ್ತ ಶ್ರೀನಿವಾಸನ್...

ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್‌ರಿಂದ ಬೈಕ್ ಯಾನ: ಸರಕಾರಿ ಶಾಲೆಗಳ ಎಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ15 Oct 2025 6:56 PM IST
share
ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್‌ರಿಂದ ಬೈಕ್ ಯಾನ: ಸರಕಾರಿ ಶಾಲೆಗಳ ಎಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ

ಮಂಗಳೂರು, ಅ.15: ಸರಕಾರಿ ಶಾಲೆಯ ವಿದ್ಯಾರ್ಥಿಗಳು ಭವಿಷ್ಯದ ಸಮಸ್ಯೆಗಳನ್ನು ಎದುರಿಸುವಂತೆ ಸದೃಢ ರಾಗಿಸುವ ಆಶಯದೊಂದಿಗೆ ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ರಾಜ್ಯಾದ್ಯಂತ ಸಂಚರಿಸುವ ಯಾನ ಆರಂಭಿಸುತ್ತಿದ್ದಾರೆ.

’ಡ್ರೀಮ್ಸ್ ಆನ್ ವೀಲ್ಸ್’ ಎಂಬ ವಿಶಿಷ್ಟ ಯೋಜನೆಯೊಂದಿಗೆ ಆರಂಭವಾಗಿರುವ ಈ ಪ್ರಯಾಣದ ವೇಳೆ ಅವರು ರಾಜ್ಯದ ವಿವಿಧ ಸರಕಾರಿ ಶಾಲೆಗಳ 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ’ಕೌಶಲ ವೃದ್ಧಿ, ಪರೀಕ್ಷಾ ಸಿದ್ಧತೆ ಮತ್ತು ವೃತ್ತಿಬದುಕಿನ ಅವಕಾಶಗಳು’ ಎಂಬ ವಿಷಯವಾಗಿ ಸಂವಾದ-ಸಂವಹನ ನಡೆಸಲಿದ್ದಾರೆ.

ರಾಜ್ಯದ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿರುವ ಆತ್ಮವಿಶ್ವಾಸದ ಕೊರತೆಯೊಂದಿಗೆ ಪಿಯುಸಿ ಹಂತವನ್ನು ಪ್ರವೇಶಿಸುವ ಅವಕಾಶವಂಚಿತ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುವಲ್ಲಿ ನೆರವಾಗುವ ಈ ವಿನೂತನ ಯೋಜನೆ ಯನ್ನು ಸಾಕಾರಗೊಳಿಸುವುದಕ್ಕಾಗಿ, ಅವರು ತನ್ನ ಬೈಕ್‌ನಲ್ಲಿ ಸಂಚರಿಸಲಿದ್ದಾರೆ.

ಮೂರು ತಿಂಗಳಲ್ಲಿ ರಾಜ್ಯದ 31 ಜಿಲ್ಲೆಗಳ ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ತಲಾ 90 ನಿಮಿಷಗಳ 62 ಸಂವಾದ ಕಾರ್ಯಕ್ರಮವನ್ನು ನಡೆಸುವ ಮೂಲಕ ಸುಮಾರು 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪುವ ಯೋಜನೆಯಿದೆ ಎಂದು ನಂದಗೋಪಾಲ್ ಮಾಹಿತಿ ನೀಡಿದ್ದಾರೆ.

ಈ ಯೋಜನೆಯ ಉದ್ದೇಶವು ಸಂವಾದ ಕಾರ್ಯಕ್ರಮದ ಪರಿಧಿಯಾಚೆಗೆ ವಿಸ್ತರಿಸಿಕೊಂಡಿರುವಂತದ್ದು. ರಾಜ್ಯ ದಲ್ಲಿರುವ ಸರಕಾರಿ ಶಾಲೆಗಳ ಪ್ರಸಕ್ತ ಸನ್ನಿವೇಶ, ಶೈಕ್ಷಣಿಕ ಸಂರಚನೆ ಹಾಗೂ ಅಧ್ಯಾಪಕರ ಸಾಮರ್ಥ್ಯಗಳ ವಿಮರ್ಶಾತ್ಮಕ ಅಧ್ಯಯನ ಮತ್ತು ಮೌಲ್ಯಮಾಪನದ ಉದ್ದೇಶವೂ ಇದೆ ಎಂದು ತಿಳಿಸಿದ್ದಾರೆ.

16 ವರ್ಷಗಳ ಹಿಂದೆ ನಂದಗೋಪಾಲ್ ಮತ್ತವರ ಪತ್ನಿ ಸಚಿತಾ ದಂಪತಿಯು ಉದ್ಯೋಗವನ್ನು ತೊರೆದು ಮಕ್ಕಳ ಸಹಜ ಕಲಿಕೆಯನ್ನು ಉತ್ತೇಜಿಸುವ ’ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್’ ಎಂಬ ಸಂಸ್ಥೆಯೊಂದನ್ನು ಮುನ್ನಡೆ ಸುತ್ತಿದ್ದಾರೆ. ಪ್ರಸಕ್ತ ಶಿಕ್ಷಣ ವ್ಯವಸ್ಥೆಯನ್ನು ಮೌಲಿಕವಾಗಿಸುವ ತರಬೇತಿ ಮಾಡ್ಯೂಲ್‌ಗಳು, ಅಭಿಯಾನಗಳು, ಶೈಕ್ಷಣಿಕ ಕಾರ್ಯಕ್ರಮಗಳು ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಸರಕಾರಿ ಶಾಲಾ ಶಿಕ್ಷಣದ ಕುರಿತಾದ ಕಾಳಜಿ, ಪತ್ರಿಕೋದ್ಯಮ ರಂಗದ ಅನುಭವಗಳು ಹಾಗೂ ತನ್ನ ಸಾಹಸ ಪ್ರಿಯತೆಗಳ ಹಿನ್ನೆಲೆಯು ಈ ಯಾನದ ಯೋಜನೆಗೆ ಪ್ರೇರಣೆಯಾಗಿವೆ. ಸುಮಾರು 4,000 ಕಿ.ಮೀ. ದೂರವನ್ನು ಕ್ರಮಿಸುವ ಮೂಲಕ ಸಮಸ್ಯೆಯನ್ನು ತಲಸ್ಪರ್ಶಿಯಾಗಿ ಅರಿತುಕೊಳ್ಳುವ ಇಚ್ಛೆಯಿದೆ ಎಂದು ನಂದಗೋಪಾಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X