ತುಳು ಸಾಹಿತ್ಯ ಓದಿನ ಮೂಲಕ ಸಾಂಸ್ಕೃತಿಕ ಬದುಕಿನ ಪರಿಚಯ: ಭಾಸ್ಕರ್ ರೈ ಕುಕ್ಕುವಳ್ಳಿ

ಮಂಗಳೂರು, ಅ.17: ತುಳು ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ತುಳು ಭಾಷೆಯ ಹಾಗೂ ತುಳುನಾಡಿನ ಸಾಂಸ್ಕೃತಿಕ ಬದುಕಿನ ಪರಿಚಯ ಮಾಡಿಕೊಳ್ಳಲು ಸಾಧ್ಯವಾಗಲಿದೆ. ರಾಮಾಯಣ ಕಾಲದಿಂದ ಇಂದಿನ ಕಾಲ ಘಟ್ಟದ ತನಕದ ಜ್ಞಾನ ಪರಂಪರೆಯ ಅರಿವನ್ನು ಓದಿನ ಮೂಲಕ ನಮ್ಮದಾಗಿಸಿಕೊಳ್ಳಲು ಸಾಧ್ಯವಿದೆ ಎಂದು ನಿವೃತ್ತ ಉಪನ್ಯಾಸಕ ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯು ತಲಪಾಡಿಯ ಶಾರದಾ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಅಭಿಯಾನದ ಹತ್ತನೆ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾರದಾ ಕಾಲೇಜಿನ ಪ್ರಾಂಶುಪಾಲ ಡಾ.ಮೀನ ಜೆ. ಪಣಿಕ್ಕರ್ ಮಾತನಾಡಿ ದರು. ತುಳು ಅಕಾಡಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಸ್ಕತ್ ತುಳುಕೂಟದ ಮಾಜಿ ಅಧ್ಯಕ್ಷ ದಯಾನಂದ ಕಾವೂರು, ಶಾರದಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾದ್ಯಾಪಕಿ ಅಮಿತಾ ಆಳ್ವ, ವಿದ್ಯಾರ್ಥಿ ಸಂಚಾಲಕಿ ವರ್ಷ ವಿ.ಎಸ್. ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ಪಾಂಗಾಳ ಬಾಬು ಕೊರಗ ಕಾರ್ಯಕ್ರಮ ನಿರೂಪಿಸಿದರು.
ಶಾರದಾ ಕಾಲೇಜಿನ ವಿದ್ಯಾರ್ಥಿಗಳು ಅಕಾಡಮಿಯ ಗ್ರಂಥಾಲಯದಲ್ಲಿ ತುಳು ಕೃತಿಗಳನ್ನು ಓದಿ ಸಮಾರೋಪ ಕಾರ್ಯಕ್ರಮದಲ್ಲಿ ಅನಿಸಿಕೆ ವ್ಯಕ್ತಪಡಿಸಿದರು.







