Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಐಎಂಎ ರಾಜ್ಯ ಘಟಕದ ಚುನಾವಣೆ: ಡಾ. ಕುಲಾಲ್...

ಐಎಂಎ ರಾಜ್ಯ ಘಟಕದ ಚುನಾವಣೆ: ಡಾ. ಕುಲಾಲ್ ಅವಿರೋಧ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ18 Oct 2025 7:15 PM IST
share
ಐಎಂಎ ರಾಜ್ಯ ಘಟಕದ ಚುನಾವಣೆ: ಡಾ. ಕುಲಾಲ್ ಅವಿರೋಧ ಆಯ್ಕೆ

ಮಂಗಳೂರು: ನೂರು ವರ್ಷಗಳ ಸಂಭ್ರಮದಲ್ಲಿ ಇರುವ ಭಾರತೀಯ ವೈದ್ಯಕೀಯ ಸಂಘಟನೆ ವಿಶ್ವದಲ್ಲಿಯೇ ಅತಿ ದೊಡ್ಡ ಹಾಗು ಅತೀ ಪ್ರಭಾವಶಾಲಿ ಸರಕಾರೇತರ ಸಂಸ್ಥೆ. ಇದು ಭಾರತದ ಪ್ರತೀ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಗಳಲ್ಲಿ ಶಾಖೆಗಳನ್ನ ಹೊಂದಿರುವುದಲ್ಲದೇ ವಿಶ್ವದ ಹಲವು ರಾಷ್ಟ್ರಗಳಲ್ಲಿ ತನ್ನ ಸುಮಾರು 2500 ರಷ್ಟು ಶಾಖೆಯನ್ನ ಹೊಂದಿದ್ದು, ಅದರ ಕರ್ನಾಟಕ ರಾಜ್ಯ ಶಾಖೆಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಮಂಗಳೂರು ಭಾರತೀಯ ಸಂಘದ ಮಾಜಿ ಅಧ್ಯಕ್ಷ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ ಅಂತ ರಾಜ್ಯ ಸಂಘಟನೆಯ ಪ್ರಕಟಣೆ ತಿಳಿಸಿದೆ.

ಕಳೆದ 2 ಎರಡು ದಶಕಗಳಿಂದ ಐಎಂಎ ಯ ಜೊತೆ ಸಂಘಟನಾತ್ಮಕವಾಗಿ ಜೋಡಿಸಿಕೊಂಡು ದುಡಿಯುತ್ತಿರುವ ಡಾ ಕುಲಾಲ್ ದ ಕ ಜಿಲ್ಲೆ, ಕರಾವಳಿ ಮಲೆನಾಡು ಹಾಗು ಮೈಸೂರು ವಿಭಾಗ ಗಳಲ್ಲಿ ಪರಿಣಾಮಕಾರಿ ನಾಯಕತ್ವ ನೀಡಿ, ಸ್ಥಳೀಯ ಶಾಖಾ ಅಧ್ಯಕ್ಷ, ಪ್ರಾದೇಶಿಕ ಅಧ್ಯಕ್ಷ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಸಂಚಾಲಕ, ಸಂಯೋಜಕ , ರಾಜ್ಯ ಕೇಂದ್ರ ಹಾಗೂ ರಾಷ್ಟ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ದುಡಿದು ಸಾಕಷ್ಟು ಜನಾನುರಾಗಿ ಆಗಿರುವ ಇವರು ರಾಜ್ಯದ ಕನ್ನಡ ವೈದ್ಯ ಬರಹಗಾರರ ಬಳಗವನ್ನ ಹುಟ್ಟು ಹಾಕಿ, ವೈದ್ಯ ಸಾಹಿತಿಗಳನ್ನ ಸಂಘಟಿಸಿ 2020 ರಲ್ಲಿ ಮಂಗಳೂರಲ್ಲಿ ಪ್ರಥಮ ವೈದ್ಯರ ಸಾಹಿತ್ಯ ಸಮ್ಮೇಳನ ಆಯೋಜಿಸಿ ಚಾಲನೆ ಕೊಟ್ಟವರು. ಹಲವಾರು ವೈದ್ಯ ಹಾಗು ಕುಟುಂಬ ವೈದ್ಯರ ಸಮ್ಮೇಳನ ನಡೆಯಿಸಿದವರು. ಸಂಘಟನೆ, ವೈದ್ಯಕೀಯ ಸೇವೆ, ಬರಹ, ಭಾಷಣ ,ಸಾಮಾಜಿಕ ಹೋರಾಟ ಗಳಿಂದ ಚಿರಪರಿಚಿತರಾಗಿರುವ ಇವರಿಗೆ ಐಎಂಎ ಜೀವಮಾನದ ಸಾಧನೆಗೆ ಕೊಡುವ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಡಾ ಬಿ ಸಿ ರಾಯ್ ಗೌರವ ಪುರಸ್ಕಾರ ಪಡೆದ ಅತಿ ಕಿರಿಯ ವಯಸ್ಸಿನ ವೈದ್ಯರು ಎಂಬ ಖ್ಯಾತಿ ಇದೆ. ಕೆಎಂಸಿ ಯ ಹಳೆ ವಿದ್ಯಾರ್ಥಿ ಆಗಿರುವ ಶ್ರೀಯುತರು ಶ್ರೀನಿವಾಸ್ ಸಂಸ್ಥೆಯಲ್ಲಿ ದುಡಿದು ಈಗ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಅ. 25 ರಂದು ಗಂಗಾವತಿಯಲ್ಲಿ ಜರುಗುವ 81 ನೇ ಐಎಂಎ ರಾಜ್ಯ ಸಮ್ಮೇಳನದಲ್ಲಿ ಅವರು ಅಧಿಕಾರ ಸ್ವೀಕರಿಸ ಲಿದ್ದು, ಹಿರಿಯ ನಾಯಕರಾದ ಅವರಿಗೆ ಬೆಳಗಾವಿ ವಿಭಾಗದ ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ವೈದ್ಯರನ್ನ ಸಂಘಟಿಸಿ ಸಂಘಟನೆಯನ್ನ ಮತ್ತಷ್ಟು ಬಲಪಡಿ ಸುವ ಜವಾಬ್ದಾರಿ ಹಾಗೂ ಉಸ್ತುವಾರಿಗಳನ್ನ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X