Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಂಟಾಕ್ ವತಿಯಿಂದ ವನ್ಯಜೀವಿ ಸಂರಕ್ಷಣೆ...

ಇಂಟಾಕ್ ವತಿಯಿಂದ ವನ್ಯಜೀವಿ ಸಂರಕ್ಷಣೆ ಬಗ್ಗೆ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ19 Oct 2025 6:04 PM IST
share
ಇಂಟಾಕ್ ವತಿಯಿಂದ ವನ್ಯಜೀವಿ ಸಂರಕ್ಷಣೆ ಬಗ್ಗೆ ಉಪನ್ಯಾಸ

ಮಂಗಳೂರು, ಅ.19: ಭಾರತೀಯ ಕಲೆ ಮತ್ತು ಪರಂಪರೆ ಸಂಸ್ಥೆಯಾದ ಇಂಟಾಕ್‌ನ ಮಂಗಳೂರು ಘಟಕವು ಱಮಾನವ ಪ್ರಾಬಲ್ಯದ ಭೂದೃಶ್ಯದಲ್ಲಿ ವನ್ಯಜೀವಿ ಸಂರಕ್ಷಣೆೞ ಕುರಿತು ವನ್ಯಜೀವಿ ಸಂರಕ್ಷಣಾವಾದಿ ಪ್ರವೀಣ್ ಭಾರ್ಗವ್‌ರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇತ್ತೀಚೆಗೆ ನಗರದ ಕೊಡಿಯಾಲ್‌ಗುತ್ತು ಕಲಾಕೇಂದ್ರದಲ್ಲಿ ಆಯೋಜಿಸಿತ್ತು.

ದೇಶದ ವನ್ಯಜೀವಿ ಮತ್ತು ಅರಣ್ಯ ಸಂರಕ್ಷಣೆಯ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಮಾತನಾಡಿದ ಪ್ರವೀಣ್ ಭಾರ್ಗವ್ ಭಾರತದಲ್ಲಿ ಸುಮಾರು 4 ಲಕ್ಷ ಚದರ ಕಿ.ಮೀ. ಭೂಭಾಗ ಅಂದರೆ ದೇಶದ ಸುಮಾರು ಶೇ.12 ಪ್ರದೇಶ, ದಟ್ಟ ಅಥವಾ ಮಧ್ಯಮ ದಟ್ಟತೆಯ ಅರಣ್ಯಗಳನ್ನು ಹೊಂದಿವೆ. ಇದರಲ್ಲಿ ಕೇವಲ 1.67 ಲಕ್ಷ ಚದರ ಕಿ.ಮೀ. ಅಂದರೆ ಶೇ.4 ಭಾಗ ಮಾತ್ರ ವನ್ಯಜೀವಿಗಳಿಗೆ ಮೀಸಲಾದ ಸಂರಕ್ಷಿತ ಪ್ರದೇಶಗಳಾಗಿವೆ ಎಂದು ಹೇಳಿದರು.

ಪ್ರಮುಖ ವನ್ಯಜೀವಿಗಳ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿದ ಅವರು ಭಾರತದಲ್ಲಿ ಪ್ರಸಕ್ತ ಸುಮಾರು 2,500ರಿಂದ 2,900 ಹುಲಿಗಳು, 3,000ರಿಂದ 4,000 ಸಿಂಗಳೀಕ ಕೋತಿಗಳು, 300ರಿಂದ 400 ಸಿಂಹಗಳು, 25,000ರಿಂದ 27,000 ಆನೆಗಳು ಇವೆ ಎಂದರು.

ಅರಣ್ಯ ಪ್ರದೇಶಗಳ ವಿಭಜನೆಯೇ ಸಂರಕ್ಷಣೆಗೆ ಅತಿದೊಡ್ಡ ಅಡಚಣೆಯಾಗಿದೆ.ಕಾನೂನು ರೂಪಿಸುವುದಕ್ಕಿಂತ ಅರಣ್ಯ ವಿಭಜನೆಯನ್ನು ತಡೆಯುವ ಅಗತ್ಯವಿದೆ. ಪಶ್ಚಿಮ ಘಟ್ಟಗಳಾದ್ಯಂತ ಅಡ್ಡವಾಗಿ ಕತ್ತರಿಸುವ ಬೃಹತ್ ಮೂಲಸೌಕರ್ಯ ಯೋಜನೆಗಳು ಕಾಡುಪ್ರಾಣಿಗಳ ವಾಸ ಸ್ಥಳಗಳಿಗೆ ಭಾರೀ ಹಾನಿ ಮಾಡಿವೆ. ಅಸ್ತಿತ್ವದಲ್ಲಿರುವ ಮೂಲಸೌಕರ್ಯವನ್ನು ಸಮರ್ಪಕವಾಗಿ ಬಳಸಿದಲ್ಲಿ ಪರಿಸರ ಮತ್ತು ಆರ್ಥಿಕತೆಗೆ ಲಾಭವಾಗುತ್ತದೆ. ಇದು ಅಭಿವೃದ್ಧಿಗೆ ವಿರೋಧವಲ್ಲ. ಸಮತೋಲಿತ ಪರಿಹಾರಗಳನ್ನು ಕಂಡು ಹಿಡಿಯುವ ವಿಚಾರವಾಗಿದೆ ಎಂದು ಪ್ರವೀಣ್ ಭಾರ್ಗವ್ ಹೇಳಿದರು.

ಅಕ್ರಮ ವನ್ಯಜೀವಿ ದಂಧೆಯು ಮಾದಕ ವಸ್ತುಗಳ ದಂಧೆಯ ನಂತರದ ಅತಿದೊಡ್ಡ ಅಕ್ರಮ ವ್ಯವಹಾರವಾಗಿದೆ. ಇದನ್ನು ನಿಯಂತ್ರಿಸಲು ವಿಶಿಷ್ಟ ಕಾರ್ಯಪಡೆಯ ಅಗತ್ಯವಿದೆ. ವಿಪರ್ಯಾಸವೆಂದರೆ ನೈಸರ್ಗಿಕ ಸಂಪತ್ತು ಮತ್ತು ಜೀವನಾಡಿಯಾಗಿರುವ ನದಿಗಳನ್ನು ರಕ್ಷಿಸಲು ಭಾರತದಲ್ಲಿ ನಿರ್ದಿಷ್ಟವಾದ ಯಾವುದೇ ಕಾನೂನು ಇಲ್ಲ. ಕೇವಲ ಮರಗಳನ್ನು ರಕ್ಷಿಸುವುದನ್ನು ಬಿಟ್ಟು, ಸಮಗ್ರ ಸಂರಕ್ಷಣಾ ಮಾದರಿಯ ದೃಷ್ಟ್ಟಿಕೋನದಿಂದ ವನ್ಯಜೀವಿ ಸಂರಕ್ಷಣೆ ಯನ್ನು ನೋಡಬೇಕಾಗಿದೆ ಎಂದು ಪ್ರವೀಣ್ ಭಾರ್ಗವ್ ಹೇಳಿದರು.

ಇಂಟಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಸ್ ಬಸು, ಸಹ-ಸಂಚಾಲಕ ನಿರೇನ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X