ಸ್ವಾಸ್ಥ್ಯ ಸಮಾಜ ನಿರ್ಮಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ: ಡಾ.ಎಸ್.ಎಲ್. ಭೋಜೇಗೌಡ

ಮಂಗಳೂರು: ಸ್ವಾಸ್ಥ್ಯ ಸಮಾಜ ನಿರ್ಮಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ. ನಾಡು ಕಟ್ಟುವ ಪಠ್ಯ ಗಳನ್ನು ಮಾಡಬೇಕಾಗಿದೆ ಇಂತಹ ವಿಚಾರದಲ್ಲಿ ರಾಜಕೀಯ ಸಲ್ಲದು ಎಂದು ವಿಧಾನ ಪರಿಷತ್ ಸದಸ್ಯ ಡಾ.ಎಸ್.ಎಲ್. ಭೋಜೇ ಗೌಡ ತಿಳಿಸಿದ್ದಾರೆ.
ಅವರು ರವಿವಾರ ನಗರದ ಒಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಆಡಳಿತ ಮಂಡಳಿಗಳ ಸಂಘ,ರಿ.(ಕುಪ್ಮಾ) ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾ ಡುತ್ತಾ, ಸರಕಾರಿ ಶಿಕ್ಷಣ ಸಂಸ್ಥೆಗಳಿಗೂ ಉತ್ತಮ ಸೌಲಭ್ಯಗಳನ್ನು ನೀಡುತ್ತಾ,ಪೂರ್ಣ ಪ್ರಮಾಣದ ಶಿಕ್ಷಕರನ್ನು ನೇಮಿಸಿ ಗುಣಮಟ್ಟ ವನ್ನು ಉನ್ನತೀಕರಿಸಬೇಕಾಗಿದೆ ಎಂದರು.
ಮಾಹಿತಿ ಹಕ್ಕು ಕಾರ್ಯ ಕರ್ತರ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಗುರಿ ಮಾಡಿ ಕಿರುಕುಳ ನೀಡುವುದು ಸರಿಯಲ್ಲ ಎಂದು ಭೋಜೇ ಗೌಡರು ಟೀಕಿಸಿದ್ದಾರೆ.
ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾ ಡುತ್ತಾ,ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕುಪ್ಮಾ ಸಂಘಟನೆಗಳನ್ನು ವಿಸ್ತರಿಸಿ ಸಂಘಟ ನೆಯನ್ನು ಬಲಿಷ್ಠಗೊಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ವಿವಿಧ ಹಂತದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶೇ.60ರಷ್ಟು ಶಿಕ್ಷಣ ನೀಡುತ್ತಿವೆ.ಇಂತಹ ಸನ್ನಿವೇಶದಲ್ಲಿ ಸರಕಾರ ಖಾಸಗಿ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದರು.
ಜಿಲ್ಲೆಯ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ದಕ್ಷಿಣ ಕನ್ನಡ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ರಾಜೇಶ್ವರಿ ಎಚ್ ಎಚ್ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ಮಹತ್ವದ ಪಾತ್ರವಹಿ ಸುತ್ತಾ ಬಂದಿದೆ ಎಂದು ಶ್ಲಾಘಿಸಿದರು.
ಸಮಾರಂಭದಲ್ಲಿ ಕುಪ್ಮಾ ರಾಜ್ಯ ಸಮಿತಿಯ ಗೌರವಾಧ್ಯಕ್ಷ ಕೆ.ರಾಧಾಕೃಷ್ಣ ಶೆಣೈ, ಡಾ.ಎಂ.ಬಿ. ಪುರಾಣಿಕ್, ಡಾ.ಕೆ.ಸಿ. ನಾಯ್ಕ್, ರಾಜ್ಯ ಸಮಿತಿಯ ಕಾರ್ಯದರ್ಶಿ ಪ್ರೊ.ನರೇಂದ್ರ ಎಲ್ ನಾ ಉಪಸ್ಥಿತರಿದ್ದರು.
ಜಿಲ್ಲಾ ಅಧ್ಯಕ್ಷ ಯುವ ರಾಜ ಜೈನ್ ಸ್ವಾಗತಿಸಿದರು. ಸುನಿಲ್ ಪಲ್ಲಮಜಲು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಡಾ.ಮಂಜುನಾಥ ಎಸ್ ರೇವಣ್ಕರ್ ವಂದಿಸಿದರು.







