ದೇರಳಕಟ್ಟೆ : ಯುನಿವೆಫ್ ನಿಂದ ಸೀರತ್ ಸಮಾವೇಶ

ಮಂಗಳೂರು: ಯುನಿವೆಫ್ ಕರ್ನಾಟಕ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ "ಅರಿಯಿರಿ ಮನುಕುಲದ ಪ್ರವಾದಿಯನ್ನು" ಅಭಿಯಾನದ ಸೀರತ್ ಸಮಾವೇಶವು ದೇರಳಕಟ್ಟೆಯ ಸಿಟಿ ಗ್ರೌಂಡ್ ನಲ್ಲಿ ಜರಗಿತು.
ಮುಖ್ಯ ಅತಿಥಿಯಾಗಿ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸಾಯನ್ಸ್ ಇದರ ಪ್ರಾಂಶುಪಾಲ ಜನಾಬ್ ಇಕ್ಬಾಲ್ ಅಹ್ಮದ್ ಯು.ಟಿ. ಭಾಗವಹಿಸಿದ್ದರು. ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮುಖ್ಯ ಭಾಷಣ ಮಾಡಿದರು.
ಅಭಿಯಾನ ಸಂಚಾಲಕ ಯು. ಕೆ. ಖಾಲಿದ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಕಾರ್ಯಕ್ರಮ ಸಂಚಾಲಕ ಮುಹಮ್ಮದ್ ಸೈಫುದ್ದೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿರಾಜುಲ್ ಹಸನ್ ಕಿರಾಅತ್ ಪಠಿಸಿದರು. ದೇರಳಕಟ್ಟೆ ಶಾಖಾಧ್ಯಕ್ಷ ಅಬ್ದುರ್‍ರಹ್ಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
Next Story





