Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೀಪಾವಳಿ ತುಳುವ ನೆಲದ ಸಂಸ್ಕೃತಿಯ...

ದೀಪಾವಳಿ ತುಳುವ ನೆಲದ ಸಂಸ್ಕೃತಿಯ ಪ್ರತಿಬಿಂಬ : ಕಿಶೋರ್ ಕುಮಾರ್ ಶೇಣಿ

ವಾರ್ತಾಭಾರತಿವಾರ್ತಾಭಾರತಿ22 Oct 2025 6:18 PM IST
share
ದೀಪಾವಳಿ ತುಳುವ ನೆಲದ ಸಂಸ್ಕೃತಿಯ ಪ್ರತಿಬಿಂಬ : ಕಿಶೋರ್ ಕುಮಾರ್ ಶೇಣಿ
ತುಳು ಅಕಾಡೆಮಿಯಿಂದ 'ದೀಪಾವಳಿ ಪರ್ಬದ ಐಸಿರ' ಕಾರ್ಯಕ್ರಮ

ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ 'ದೀಪಾವಳಿ ಪರ್ಬದ ಐಸಿರ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೀಪಾವಳಿ ಹಬ್ಬದ ಆಚರಣೆ ಪ್ರಯುಕ್ತ ಹಂಡೆಗೆ ಅಲಂಕಾರ ಮಾಡಿ ನೀರು ತುಂಬಿಸುವುದು, ಎಣ್ಣೆ ಹಚ್ಚಿ ಸ್ನಾನ ಮಾಡುವುದು, ಗೋಪೂಜೆ ನಡೆಸುವುದು, ಬಲಿಯೇಂದ್ರನನ್ನು ಕರೆಯುವ ಆಚರಣೆಗಳು ತುಳು ನೆಲದ ಸಂಸ್ಕೃತಿ ಯನ್ನು ಸಾದರಪಡಿಸುತ್ತದೆ ಎಂದು ಕಿಶೋರ್ ಕುಮಾರ್ ಶೇಣಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ಪ್ರಾಕೃತಿಕವಾಗಿ ಕೈಗೂಡದ ಹಾಗೂ ಈಡೇರದ ಕರೆಗಳ ಮೂಲಕ ಬಲಿಯೇಂದ್ರನನ್ನು ಆಹ್ವಾನಿಸುವ ಕಥನಗಳು ಸೃಷ್ಟಿಯಾಗಿರುವ ಹಿನ್ನಲೆಯ ಬಗ್ಗೆ ಜಿಜ್ಞಾಸೆ ನಡೆಯಬೇಕಾಗಿದೆ. ತುಳುವಾಲ ಬಲಿಯೇಂದ್ರನ ಐತಿಹ್ಯ ಏನು ಎನ್ನುವುದನ್ನು ತಿಳಿದುಕೊಳ್ಳಬೇಕಾಗಿದೆ ಹಾಗೂ ಮನುಷ್ಯ ಪ್ರಯತ್ನದ ಮೂಲಕ ಕೈಗೂಡುವಂತಹ ಕೆಲಸಗಳನ್ನು ಪೂರೈಸಿ, ಬಲಿಯೇಂದ್ರನನ್ನು ಕರೆಯೋಣ ಎಂದು ಆಶಯ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಜಗದೀಶ್ ಬಾಳ ಅವರು ಮಾತನಾಡಿ, ತುಳುನಾಡಿನ ಆಚರಣೆಗಳಲ್ಲಿನ ವೈವಿಧ್ಯತೆ, ವಿಶಿಷ್ಟತೆ ಹಾಗೂ ಸಾಮರಸ್ಯವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಅಕಾಡೆಮಿ ಸದಸ್ಯರಾದ ಬೂಬ ಪೂಜಾರಿ, ಉದ್ಯಾವರ ನಾಗೇಶ್ ಕುಮಾರ್, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಜಯಶ್ರೀ ಉಪಸ್ಥಿತರಿದ್ದರು.

ಈ ಸಂದರ್ಭ ನಡೆದ ಕವಿಗೋಷ್ಠಿಯಲ್ಲಿ ಅನಿತಾ ಪಿಂಟೊ, ಸೌಮ್ಯ ಪ್ರವೀಣ್, ಸುಲೋಚನಾ ನವೀನ್, ಶಮೀಮ್ ಕುಟ್ಟಿಕಳ ಅವರು ಕೊಂಕಣಿ, ಕನ್ನಡ, ತುಳು, ಬ್ಯಾರಿ ಭಾಷೆಯಲ್ಲಿ ಕವಿತೆಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ದೀಪಾವಳಿ ನೃತ್ಯ ಸಂಭ್ರಮ ಹಾಗೂ ಪದರಂಗಿತ ಕಾರ್ಯಕ್ರಮ ನಡೆಯಿತು.

ಶ್ರೇಯಾ ಸ್ವಾಗತಿಸಿದರು. ಕೃಪಾ ನಿರೂಪಿಸಿದರು. ಪೂಜಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X