Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾ ಕಚೇರಿಯಲ್ಲಿ ಜನನ-ಮರಣ ಪ್ರಮಾಣ ಪತ್ರ...

ಮನಪಾ ಕಚೇರಿಯಲ್ಲಿ ಜನನ-ಮರಣ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಸರತಿ!

ವಾರ್ತಾಭಾರತಿವಾರ್ತಾಭಾರತಿ23 Oct 2025 5:29 PM IST
share
ಮನಪಾ ಕಚೇರಿಯಲ್ಲಿ ಜನನ-ಮರಣ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಸರತಿ!

ಮಂಗಳೂರು, ಅ. 23: ಲಾಲ್‌ಬಾಗ್‌ನ ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಪ್ರವೇಶ ದ್ವಾರದಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ಉದ್ದದ ಸರತಿ ಸಾಲು. ಕಳೆದ ಮೂರು ದಿನಗಳಿಂದ ದೀಪಾವಳಿ ರಜೆ ಹಾಗೂ ಅದಕ್ಕೂ ಮುಂಚಿತವಾಗಿ ಸುಮಾರು 10 ದಿನಗಳ ಕಾಲ ಕಚೇರಿ ಸಿಬ್ಬಂದಿ ಕೂಡಾ ಆರ್ಥಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಪರಿಣಾಮ ಗುರುವಾರ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಕಚೇರಿಗೆ ಅರ್ಜಿ ಸಲ್ಲಿಕೆಗೆ ಆಗಮಿಸಿದ್ದರು. ಬಹುತೇಕ ಹಿರಿಯ ನಾಗರಿಕರೂ ಅರ್ಧ ತಾಸಿಗೂ ಅಧಿಕ ಕಾಲ ಸರತಿಯಲ್ಲಿ ನಿಂತು ಪರದಾಡಿದರು.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಮನೆ ಮನೆ ಆರ್ಥಿಕ ಸಾಮಾಜಿಕ ಸಮೀಕ್ಷೆ ಕಾರ್ಯ ಇತ್ತೀಚೆಗೆ ನಡೆದಿತ್ತು. ಇದರಲ್ಲಿ ಶಿಕ್ಷಕರು ಸಹಿತ ಪಾಲಿಕೆಯ ಸಿಬಂದಿಯೂ ಭಾಗವಹಿಸಿದ್ದರು. ಪಾಲಿಕೆಯ ಡಾಟಾ ಎಂಟ್ರಿ ಆಪರೇಟರ್ ಗಳು, ಕಿರಿಯ ಎಂಜಿನಿಯರ್ ಗಳು ಸಹಿತ ಪಾಲಿಕೆಯ ಹಲವು ಸಿಬಂದಿಗಳು ಇದರಲ್ಲಿ ತೊಡಗಿಸಿಕೊಂಡಿದ್ದರು. ಹೀಗಾಗಿ ಕಳೆದ ಹಲವು ದಿನಗಳಿಂದ ಜನನ-ಮರಣ ಪ್ರಮಾಣ ಪತ್ರ ಪಡೆಯುವ ಕೌಂಟರ್ ಸಿಬಂದಿ ಇಲ್ಲದೆ ಬಂದ್ ಆಗಿತ್ತು. ಈ ಸೇವೆ ವ್ಯತ್ಯಯವಾಗಿತ್ತು. ಹೀಗಾಗಿ ಅರ್ಜಿ ಸಲ್ಲಿಸಲು ಬಂದ ಜನರು ಕೌಂಟರ್ ಬಂದ್ ಆದ ಹಿನ್ನೆಲೆಯಲ್ಲಿ ವಾಪಾಸಾಗಿದ್ದರು.

ಮಂಗಳವಾರದಿಂದ ಸಿಬಂದಿ ಪಾಲಿಕೆ ಕರ್ತವ್ಯಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವವರ ಕ್ಯೂ ದೊಡ್ಡದಿತ್ತು. ಒಂದೇ ದಿನ ಸುಮಾರು 300ಕ್ಕೂ ಅಧಿಕ ಮಂದಿ ಆಗಮಿಸಿದ್ದರು. ಗುರುವಾರವೂ ಇಷ್ಟೇ ಸಂಖ್ಯೆಯಲ್ಲಿ ಸಾರ್ವಜನಿ ಕರು ಆಗಮಿಸಿದ ಕಾರಣದಿಂದ ಕ್ಯೂ ಪಾಲಿಕೆ ಮುಂಭಾಗದವರೆಗೆ ಇತ್ತು.

‘ನಾನು ಸುಮಾರು ಮುಕ್ಕಾಲು ಗಂಟೆಯಿಂದ ಸರತಿಯಲ್ಲಿ ಕಾಯುತ್ತಿದ್ದೇನೆ. ನನ್ನಂತೆಯೇ ಅದೆಷ್ಟೋ ಜನರು ತಮ್ಮ ಕೆಲಸ ಬಿಟ್ಟು ಇದಕ್ಕಾಗಿ ಆಗಮಿಸಿದ್ದಾರೆ. ಆದರೆ ಇಲ್ಲಿ ಕ್ಯೂ ನಿಂತು ನಿಂತು ಸಾಕಾಗಿದೆ. ಅಧಿಕಾರಿಗಳು ಸಾರ್ವಜನಿ ಕರಿಗೆ ಪೂರಕ ಮಾಹಿತಿಯನ್ನೇ ನೀಡುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಕೇಳುವವರೇ ಇಲ್ಲ ಎಂದು ಅರ್ಜಿದಾರರೊಬ್ಬರು ದೂರಿದರು.

ಜನನ-ಮರಣ ಪ್ರಮಾಣ ಪತ್ರ ಪಡೆಯುವಲ್ಲಿ ಸಾರ್ವಜನಿಕರು ಗಂಟೆಗಟ್ಟಲೆ ಕಾದು ಸಂಕಟ ಎದುರಿಸುತ್ತಿದ್ದ ವಿಷಯ ತಿಳಿದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಅಧಿಕಾರಿ/ಸಿಬಂದಿ ಜತೆಗೆ ಚರ್ಚೆ ನಡೆಸಿದರು. ಜನನ/ಮರಣ ನೋಂದಣಿಯನ್ನು ಕಂಪ್ಯೂಟರ್ ನಲ್ಲಿಯೇ ನೋಂದಣಿ ಮಾಡಬೇಕಾಗುತ್ತದೆ. ಕಾಗದದ ಮೂಲಕ ನೀಡಲು ನಿಯಮದಲ್ಲಿ ಅವಕಾಶ ಇಲ್ಲ. ಜತೆಗೆ ಸರ್ವರ್ ಸಮಸ್ಯೆ ಕೂಡ ಇದೆ ಎಂಬ ಮಾಹಿತಿ ಪಡೆದ ಐವನ್ ಡಿಸೋಜಾ, ಜನರು ಹೊರಭಾಗದಲ್ಲಿ ತಾಸುಗಟ್ಟಲೆ ಕ್ಯೂ ನಿಲ್ಲುವ ಬದಲು ದಿನಕ್ಕೆ ಇಂತಿಷ್ಟು ಎಂಬಂತೆ ಟೋಕನ್ ವ್ಯವಸ್ಥೆ ಕಲ್ಪಿಸಿ ಅವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿ, ಸಿಬ್ಬಂದಿಗೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X