Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ಕೌಟ್ಸ್ ಆ್ಯಂಡ್ ಗೈಡ್ಸ್‌: ರಾಷ್ಟ್ರ...

ಸ್ಕೌಟ್ಸ್ ಆ್ಯಂಡ್ ಗೈಡ್ಸ್‌: ರಾಷ್ಟ್ರ ಮಟ್ಟದ ‘ಮೆಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Oct 2025 9:22 PM IST
share
ಸ್ಕೌಟ್ಸ್ ಆ್ಯಂಡ್ ಗೈಡ್ಸ್‌: ರಾಷ್ಟ್ರ ಮಟ್ಟದ ‘ಮೆಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್’ ಕಾರ್ಯಕ್ರಮ

ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರು ರವಿವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ ರಾಷ್ಟ್ರ ಮಟ್ಟದ ‘ಮೆಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್ 2023’ ಹಾಗೂ ರಾಷ್ಟ್ರಪತಿ ಪುರಸ್ಕಾರ -2016 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧಿಕಾರಿಗಳ ನಿಲುವಿನ ಬಗ್ಗೆ ವಿಷಾಧ ವ್ಯಕ್ತ ಪಡಿಸಿದ ಅವರು ಈ ರೀತಿಯ ನಿರ್ಲಕ್ಷ್ಯದ ನಡುವೆ ನಾನು ನನ್ನ ಸೇವೆಯನ್ನು ಹೇಗೆ ಮುಂದುವರಿಸಲಿ ಅಥವಾ ನನ್ನ ಸಹೋದ್ಯೋಗಿಗಳನ್ನು ಹೇಗೆ ಪ್ರೇರೇಪಿಸಲಿ ಎಂಬುದು ನನ್ನನ್ನು ಪ್ರಶ್ನೆಯಾಗಿ ಕಾಡುತ್ತಿದೆ ಎಂದರು.

ರಾಜ್ಯ ಘಟಕದ ಪ್ರಮುಖ ಸಾಧನೆಗಳನ್ನು ವಿವರಿಸಿದ ಅವರು, ಮೂಡಬಿದಿರೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಕಾರದಲ್ಲಿ ನಡೆದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ 90 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ, ಎಲ್ಲರಿಂದಲೂ ಪ್ರಶಂಸೆಗೆ ಪಾತ್ರವಾದ ಸನ್ನಿವೇಶವನ್ನು ನೆನಪಿಸಿಕೊಂಡರು. ಕೋವಿಡ್-19 ಸಮಯದಲ್ಲಿ ಕರ್ನಾಟಕ ಘಟಕವು ಒಂದು ಕೋಟಿ ಮಾಸ್ಕ್ಗಳನ್ನು ವಿತರಿಸಿತ್ತು. ಅಲ್ಲದೆ ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಮಲೆ ಮಹದೇಶ್ವರ, ಹಾಸನಾಂಬಾ, ಸಿದ್ಧೇಶ್ವರ ಸ್ವಾಮಿ ಜಾತ್ರೆ ಹಾಗೂ ಉಡುಪಿ ಪರ್ಯಾಯದ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಅಮೂಲ್ಯ ಸೇವೆ ಸಲ್ಲಿಸಿದ್ದನ್ನು ಉಲ್ಲೇಖಿಸಿದರು. ಡಾ ಮೋಹನ್‌ರ ಮುಂದಾಳ ತ್ವದಲ್ಲಿ ಮೂಡುಬಿದಿರೆ ಹಾಗೂ ಗುರುಪುರದಂತಹ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಸುಸಜ್ಜಿತ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಭವನ ಮೂಡಿಬಂದಿದೆ. ಇಂತಹ ಅತ್ಯಮೂಲ್ಯ ಕೊಡುಗೆಗಳಿದ್ದರೂ, ರಾಷ್ಟ್ರೀಯ ಕಚೇರಿ ಯಿಂದ ಯಾವುದೇ ಪ್ರಶಂಸೆ ದೊರಕುತ್ತಿಲ್ಲ. ಇಂತಹ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಉತ್ಸಾಹ ಕುಂಠಿತವಾಗುತ್ತಿದೆ ಎಂದರು.

ರಾಷ್ಟ್ರಪತಿ ಪ್ರಶಸ್ತಿ ಪರೀಕ್ಷೆ ಕಳೆದ ಕೆಲವು ವರ್ಷಗಳಿಂದ ನಡೆಯದಿರುವುದನ್ನು ಅವರು ಖಂಡಿಸಿದರು. ಈ ಪ್ರಶಸ್ತಿ ವಿಶೇಷವಾಗಿ ವೃತ್ತಿಪರ ಕೋರ್ಸಗಳಾದ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ವಿದ್ಯಾರ್ಥಿಗಳಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿತ್ತು. ಇದರಿಂದಾಗಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ನಷ್ಟವಾಗಿದೆ ಎಂದರು.

ಸ್ಕೌಟ್ ಗಿಂತ ಉತ್ತಮ ಸಿದ್ಧಾಂತ ಮತ್ತೊಂದಿಲ್ಲ. ಯುವಜನತೆ ಈ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸ ಬೇಕು. ವೇದ, ಪುರಾಣ ಮತ್ತು ಸನಾತನ ಧರ್ಮದ ಸಾರವೇ ಸ್ಕೌಟ್ಸ್ ಮತ್ತು ಗೈಡ್ಸ್ನ ಸೇವಾ ಸಿದ್ಧಾಂತ ಎಂದರು.

ಅಂತರರಾಷ್ಟ್ರೀಯ ಆಯುಕ್ತ (ಸ್ಕೌಟ್ಸ್) ಮಧುಸೂಧನ ಅವಲ ಮಾತನಾಡಿ, ಸ್ಕೌಟ್ ಹಾಗೂ ಗೈಡ್ ನಾಯಕ ನಾದವನು ಯಾವುದನ್ನಾದರೂ ಸಾಧಿಸಬಹುದು, ಆದರೆ ಎಲ್ಲರೂ ಸ್ಕೌಟ್ ಹಾಗೂ ಗೈಡ್ ನಾಯಕನಾಗಲೂ ಸಾಧ್ಯವಿಲ್ಲ. ಸ್ಕೌಟಿಂಗ್ ಮತ್ತು ಗೈಡಿಂಗ್ ಸಮುದ್ರದ ತೀರದಂದೆ — ಅದು ಒಳ್ಳೆಯದಾಗಲಿ ಕೆಟ್ಟದಾಗಲಿ ಎಲ್ಲವನ್ನೂ ಸ್ಪರ್ಶಿಸುತ್ತದೆ. ಅನುಭವವೇ ನಮ್ಮ ಶಿಕ್ಷಕ. ಸ್ಕೌಟ್ಸ್ ಹಾಗೂ ಗೈಡ್ಸ್ ವಿನಮ್ರತೆ, ಪ್ರಾಮಾಣಿಕತೆ, ನಿಷ್ಠೆ ಮತ್ತು ವಿಶ್ವಾಸಾರ್ಹತೆಯ ಗುಣಗಳಿಂದ ವಿಶಿಷ್ಟತೆಯನ್ನು ಪಡೆಯಲು ಸಾಧ್ಯ ಎಂದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನವದೆಹಲಿಯ ಮಾಜಿ ನಿರ್ದೇಶಕ ಕೃಷ್ಣಸ್ವಾಮಿ ಮಾತನಾಡಿ ನಮ್ಮ ಅಗತ್ಯ 200 ಗ್ರಾಂ ಅಟ್ಟಾ(ಆಹಾರ) ಇದ್ದರೂ ನಾವು ಅರಮನೆ ಕಟ್ಟುವ ಹುಮ್ಮಸ್ಸಿನಲ್ಲಿ ತೊಡಗಿದ್ದೇವೆ. ಇದರಿಂದ ಪ್ರಯೋಜ ನವಿಲ್ಲ. ಶಾಂತಿ ಸಂಪತ್ತಿನಿಂದಲ್ಲ, ಮೌಲ್ಯ ಹಾಗೂ ಸೇವೆಯಿಂದ ನಿರ್ಮಾಣವಾಗುತ್ತದೆ ಎಂದರು.

ದೇಶದಾದ್ಯಂತ ರಾಷ್ಟ್ರಪತಿ ಪ್ರಶಸ್ತಿಗೆ(2016) ಆಯ್ಕೆಯಾದ 48 ಜನರಲ್ಲ್ಲಿ 30 ಮಂದಿ ಹಾಗೂ ಮೆಸೆಂಜರ್ ಆಫ್ ಪೀಸ್ ಸ್ಟಾರ್ ಪ್ರಶಸ್ತಿಗೆ(2023) ಆಯ್ಕೆಯಾದ 48 ಜನರಲ್ಲಿ 21 ಜನರು ಈ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್, ಅನಲೆಂದ್ರ ಶರ್ಮಾ, ಶ್ರೀನಿವಾಸ್ ಕಿಣಿ, ಪ್ರಥಿಮ್ ಕುಮಾರ್, ವಿಮಲಾ ರಂಗಯ್ಯ, ಫೆಲ್ಸಿ ಫೆರ್ನಾಂಡಿಸ್, ಮೋಹಿನಿ ರಾಮಚಂದ್ರನ್, ಸುಫಲಾ, ಭರತ್‌ರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೋವರ್ ಲೀಡರ್ ಅಭಿನೇಷ್ ಕುಮಾರ್ ಕರ‍್ಯಕ್ರಮ ನಿರೂಪಿಸಿದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X