Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ಥಳೀಯ ಭಾಷೆ ಕಲಿತರೆ ಕರ್ತವ್ಯ...

ಸ್ಥಳೀಯ ಭಾಷೆ ಕಲಿತರೆ ಕರ್ತವ್ಯ ನಿರ್ವಹಣೆಗೆ ಅನುಕೂಲ: ಸುಧೀರ್ ಕುಮಾರ್ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ28 Oct 2025 6:44 PM IST
share
ಸ್ಥಳೀಯ ಭಾಷೆ ಕಲಿತರೆ ಕರ್ತವ್ಯ ನಿರ್ವಹಣೆಗೆ ಅನುಕೂಲ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು, ಅ.28: ಕರ್ತವ್ಯ ನಿರ್ವಹಿಸುವ ಸ್ಥಳದ ಸ್ಥಳೀಯ ಭಾಷೆ ಕಲಿತಾಗ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ. ಇದು ಕರ್ತವ್ಯ ನಿರ್ವಹಣೆಗೂ ಸಾಕಷ್ಟು ನೆರವಾಗಲಿದೆ ಎಂದು ನಗರ ಪೊಲೀಸ್ ಆಯುಕ್ತ ಮತ್ತು ವಿಶೇಷ ಕಾರ್ಯಪಡೆ (ಎಸ್‌ಎಎಫ್)ಯ ಡಿಐಜಿಪಿ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಿಶೇಷ ಕಾರ್ಯಪಡೆ ಮಂಗಳೂರು ವತಿಯಿಂದ ವಿಶೇಷ ಕಾರ್ಯಪಡೆ ಸಿಬ್ಬಂದಿಗಾಗಿ ಆಯೋಜಿಸಲಾಗಿರುವ 20 ದಿನಗಳ ತುಳು ಕಲಿಕಾ ಶಿಬಿರ ಮತ್ತು ಸಂಸ್ಕೃತಿ ಪರಿಚಯ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದ.ಕ ಮತ್ತು ಉಡುಪಿ ಭಾಗದಲ್ಲಿ ಸ್ಥಳೀಯ ಭಾಷೆಗಳು ಹೆಚ್ಚಾಗಿ ಬಳಕೆಯಾಗುತ್ತವೆ. ಹಾಗಾಗಿ ಇಲ್ಲಿಗೆ ಕರ್ತವ್ಯಕ್ಕೆ ಬರುವ ಪೊಲೀಸರಿಗೆ ಕೆಲವೊಂದು ಸಮಸ್ಯೆಯಾಗುತ್ತದೆ. ನಾವು ನಮ್ಮವರು ಎನ್ನುವ ಭಾವನೆ ಬರುವುದಿಲ್ಲ. ಸ್ಥಳೀಯರು ಕೂಡಾ ನಮ್ಮವರು ಎಂದು ಒಪ್ಪಿಕೊಳ್ಳುವುದಿಲ್ಲ. ಅಂತಹ ಸಂದರ್ಭದಲ್ಲಿ ಭಾಷೆಯನ್ನು ಕಲಿಯುವು ದರಿಂದ ಸಂಸ್ಕೃತಿಯ ಪರಿಚಯವೂ ಆಗಿ, ನಾವೂ ಅವರೊಳಗೆ ಒಬ್ಬರಾಗುತ್ತೇವೆ. ಇದು ಅಪರಾಧ ತನಿಖೆಯ ಸಂದರ್ಭದಲ್ಲೂ ಇಲಾಖೆಗೆ ನೆರವಾಗುತ್ತದೆ ಎಂದರು.

ಹಿಂದೆ ಈ ಭಾಗದಲ್ಲಿ ಎಲ್ಲರೂ ಒಟ್ಟಿಗೆ ಒಂದೇ ಶಾಲೆಯಲ್ಲಿ ಕಲಿತ್ತಿದ್ದರು. ಇದರಿಂದ ಒಬ್ಬರ ಭಾಷೆಯನ್ನು ಇನ್ನೊಬ್ಬ ರಿಗೆ ಕಲಿಯಲು ಅವಕಾಶವಾಗುತ್ತಿತ್ತು. ತುಳು, ಬ್ಯಾರಿ, ಕೊಂಕಣಿ ಹೀಗೆ ಎಲ್ಲ ಭಾಷೆಗಳು ಎಲ್ಲರಿಗೂ ಗೊತ್ತಿತ್ತು. ಪ್ರಸ್ತುತ ಜಾತಿ, ಧರ್ಮದ ಶಿಕ್ಷಣ ಸಂಸ್ಥೆಗಳು ರಚನೆಯಾಗಿ, ಆಯಾ ಧರ್ಮ, ಜಾತಿಯವರು ಮಾತ್ರ ಅಲ್ಲಿಗೆ ಸೇರ್ಪಡೆ ಗೊಳ್ಳುತ್ತಿದ್ದಾರೆ. ಇದರಿಂದ ಇತರ ಭಾಷೆಗಳು ಅರ್ಥವಾಗದೆ ಏನು ಮಾತನಾಡಿದರೂ ಅದನ್ನು ತಪ್ಪಾಗಿ ತಿಳಿಯುವ ಪ್ರಮೇಯ ಬಂದೊದಗಿದೆ ಎಂದರು.

ಜಿಲ್ಲೆಯಲ್ಲಿ ಶೇ.98ರಷ್ಟು ಮಂದಿ ಅವರ ಪಾಡಿಗೆ ಅವರು ಇದ್ದಾರೆ. ಏನೇ ಸಮಸ್ಯೆ ಬಂದರೂ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಶೇ.2ರಲ್ಲಿ ಶೇ.1ರಷ್ಟು ಮಂದಿ ಅಪರಾಧಿಕ ಮನಸ್ಥತಿಯವರು. ಇವರು ಶೇ.98ರಷ್ಟಿರುವ ಜನರನ್ನು ಹೆದರಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಉಳಿದ ಶೇ.1 ಪೊಲೀಸರಾಗಿದ್ದು, ಅವರು ಶೇ.98ರಷ್ಟು ಮಂದಿ ಧೈರ್ಯ ಹೇಳುವ ಕೆಲಸ ಮಾಡಬೇಕು. ಅವರಿಗೆ ಅವರದೇ ಆದ ಭಾಷೆಯಲ್ಲಿ ಹೇಳಿದರೆ ಅರ್ಥವಾಗುತ್ತದೆ. ಅವರ ನೋವು ತಿಳಿಯಬೇಕಾದರೆ ನಾವು ಅವರ ಭಾಷೆ ಕಲಿಯಬೇಕು ಎಂದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಿ, ಉದ್ಘಾಟಿಸಿ, ತುಳು ಕಲಿತು ತುಳುವಿನಲ್ಲಿ ವ್ಯವಹರಿಸುವುದರಿಂದ ತುಳುವಿಗೆ ಇನ್ನಷ್ಟು ಆದ್ಯತೆ ದೊರೆಯಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ಭಾಷೆ ಕಲಿಕೆಯು ಊರಿನ ಸಾಂಸ್ಕೃತಿಕ ಬದುಕಿನ ಪರಿಚಯವನ್ನು ನೀಡುತ್ತದೆ ಎಂದರು.

ವಿಶೇಷ ಕಾರ್ಯಪಡೆ ಪ್ರಭಾರ ಪೊಲೀಸ್ ಉಪ ಅಧೀಕ್ಷಕ ಬೆಳ್ಳಿಯಪ್ಪ ಕೆ.ಯು., ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ ಎಚ್.ಎನ್. ಉಪಸ್ಥಿತರಿದ್ದರು.

ಅಕಾಡೆಮಿ ಸದಸ್ಯ ಸಂಚಾಲಕ ನಾಗೇಶ್ ಉದ್ಯಾವರ ಕಾರ್ಯನಿರೂಪಿಸಿದರು. ಎಎಸ್‌ಎಫ್ ಸಿಬ್ಬಂದಿ ರವಿಪ್ರಕಾಶ್ ಸ್ವಾಗತಿಸಿ, ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X