ಬಂಟ್ವಾಳ| ಗೃಹ ಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘದ ಉದ್ಘಾಟನಾ ಸಮಾರಂಭ

ಬಂಟ್ವಾಳ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಸುಧಾರಣೆ ಕಂಡಿದ್ದು ಇಡೀ ರಾಷ್ಟ್ರದಲ್ಲೇ ಮಾದರಿಯಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಅಧ್ಯಕ್ಷ ಎಚ್.ಎನ್ ರೇವಣ್ಣ ಹೇಳಿದರು.
ಬಿ.ಸಿ.ರೋಡಿನ ಅಂಬೆಡ್ಕರ್ ಭವನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ನಡೆದ ಗೃಹ ಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಷ್ಟ್ರದಲ್ಲೇ ಉತ್ತಮ ಜನಪರ ಕಾರ್ಯಕ್ರಮ ಕೊಟ್ಟ ರಾಜ್ಯವಿದ್ದರೆ ಅದು ದೇವರಾಜ್ ಅರಸು ಅವರಿಂದ ಹಿಡಿದು ಇಲ್ಲಿಯತನಕ ಆಡಳಿತ ನಡೆಸಿದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಂದರು.
ಕಾಂಗ್ರೆಸ್ ಯಾವತ್ತೂ ಜನರ ಬದುಕಿನ ಮೇಲೆ ರಾಜಕೀಯ ಮಾಡಿದೆ ಹೊರತು ಭಾವನೆಗಳ ಮೇಲೆ ಮಾಡಿಲ್ಲ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದ ಬಿಜೆಪಿಗರು ರಾಷ್ಟ್ರದಲ್ಲಿ ಇದನ್ನೇ ಕಾಪಿ ಮಾಡುತ್ತಿದ್ದಾರೆ, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಇದ್ದ ಪ್ರತಿಯೊಬ್ಬ ಮುಖ್ಯ ಮಂತ್ರಿಗಳು ನೀಡಿದ ಎಲ್ಲಾ ಯೋಜನೆಗಳು ಈಗಲೂ ಮುಂದುವರಿದಿದೆ ಎಂದ ಅವರು ಜನರಿಂದ ಕಿತ್ತುಕೊಳ್ಳುವ ಯೋಜನೆಗಳು ಏನಿದ್ದರೂ ಅದು ಬಿಜೆಪಿಯವರದ್ದು ಎಂದು ಆರೋಪಿಸಿದರು.
ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ ಸ್ವಸಹಾಯ ಸಂಘವನ್ನು ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.
ಜಿ.ಪಂ.ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ, ಕಡಬ ತಾಲೂಕು ಅಧ್ಯಕ್ಷ ಸುಧೀರ್ ಶೆಟ್ಟಿ ಭಾಗವಹಿಸಿದ್ದರು.
ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸುಧೀಂದ್ರ ಶೆಟ್ಟಿ, ಸಿರಾಜ್ ಮದಕ, ಸತೀಶ್, ವಿನಯಕುಮಾರ್ ಸಿಂಧ್ಯಾ, ಕಾಂಚಲಾಕ್ಷಿ, ಐಡಾ ಸುರೇಶ್, ಹರ್ಷನ್ ಬಿ., ಪವಿತ್ರ ಪೂಂಜಾ, ಚಂದ್ರಶೇಖರ ಆಚಾರ್ಯ, ಅಬ್ದುಲ್ ಮಜೀದ್ ಕನ್ಯಾನ, ಎನ್.ಅಬ್ದುಲ್ ಕರೀಂ ಬೊಳ್ಳಾಯಿ, ಕೃಷ್ಣಪ್ಪ ಪೂಜಾರಿ ನರಿಕೊಂಬು ಮೊದಲಾದವರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ ಪ್ರಸ್ತಾವನೆ ಗೈದರು. ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿ, ವಂದಿಸಿದರು ವಂದಿಸಿದರು. ಸುನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.







