ಯುವತಿ ನಾಪತ್ತೆ

ಮಂಗಳೂರು, ಅ.28: ಸುರತ್ಕಲ್ ಕೃಷ್ಣಾಪುರ ನಿವಾಸಿ ಅನನ್ಯ(20) ಎಂಬವರು ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ತಿಕ್ ಎಂಬವರನ್ನು ಕಾಣೆಯಾಗಿರುವ ಅನನ್ಯ ಪ್ರೀತಿಸುತ್ತಿದ್ದು, ಮನೆಯವರು ಆಕ್ಷೇಪ ವ್ಯಕ್ತ ಪಡಿಸಿದ್ದರಿಂದ ಅವರು ಮನೆಯಲ್ಲೇ ಇದ್ದರು.
ಅಕ್ಟೋಬರ್ 25ರಂದು ತಂದೆ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೋಗಿದ್ದು, ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಮಗಳು ಇಲ್ಲದೇ ಇದ್ದು ಆಸುಪಾಸಿನಲ್ಲಿ ವಿಚಾರಿಸಿಕೊಂಡಾಗ ಅನನ್ಯಳು ಬೆಳಗ್ಗೆ ಮನೆಯಿಂದ ಹೋಗಿರುವುದಾಗಿ ತಿಳಿದು ಬಂದಿರುತ್ತದೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





