ಸಯ್ಯಿದ್ ಮದನಿ ಮಹಿಳಾ ಕಾಲೇಜು ಕಟ್ಟಡದ ಗೇಟ್ ಉದ್ಘಾಟನೆ, ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಉಳ್ಳಾಲ: ಅಭಿವೃದ್ಧಿ ನಮ್ಮ ಗುರಿ ಆಗಿದ್ದು , ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣ ಪಡೆದು ಅಭಿವೃದ್ಧಿ ಕಡೆ ಹೆಜ್ಜೆ ಇಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.
ಅವರು ಉಳ್ಳಾಲ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಹಝ್ರತ್ ಸಯ್ಯಿದ್ ಮದನಿ ಮಹಿಳಾ ಕಾಲೇಜು ಕಟ್ಟಡದ ಗೇಟ್ ಉದ್ಘಾಟನೆ ಹಾಗೂ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಶಿಕ್ಷಣ ಮುಂದುವರಿಸಿ ಒಂದು ಹಂತಕ್ಕೆ ತಲುಪಲು ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು ಎಂದರು.
ಸಯ್ಯಿದ್ ಮಸೂದ್ ತಂಙಳ್ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸಗೈದು ದುಆ ನೆರವೇರಿಸಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮ ದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್,ದರ್ಗಾ ಮಾಜಿ ಅಧ್ಯಕ್ಷ ಹಂಝ, ಹಾಲಿ ಸದಸ್ಯ ಝೈನುದ್ದೀನ್ ಮೇಲಂಗಡಿ, ವಕ್ಫ್ ಅಧಿಕಾರಿ ಅಬೂಬಕ್ಕರ್ , ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಕಾರ್ಯದರ್ಶಿ ಮುಸ್ತಫಾ, ಮಾಜಿ ಅಧ್ಯಕ್ಷ ಕಣಚೂರು ಮೋನು, ಚೆರೆ ಮೋನು, ಅಬ್ದುಲ್ ಖಾದರ್, ಅಬ್ಬಾಸ್ ಕೋಡಿ,ಝಿಯಾದ್ ತಂಙಳ್ ಮೊಯ್ದಿನ್ ಕಲ್ಲಾಪು, ಖಲೀಲ್, ಹಝ್ರತ್ ಸಯ್ಯಿದ್ ಮದನಿ ಮಹಿಳಾ ಕಾಲೇಜು ಪ್ರಾಂಶುಪಾಲ ರಸೂಲ್ ಖಾನ್, ಅಲ್ತಾಫ್ ,ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಮತ್ತಿತರರು ಉಪಸ್ಥಿತರಿದ್ದರು.
ಕೆಎಮ್ ಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.







