ಮೀಫ್ ವತಿಯಿಂದ ಮಂಗಳೂರು ತಾಲೂಕು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಮಂಗಳೂರು, ಜ.1: ದ.ಕ. ಮತ್ತು ಉಡುಪಿ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ (ಮೀಫ್) ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಗುರುವಾರ ಮಂಗಳೂರಿನ ಹ್ಯಾಟ್ ಹಿಲ್ನ ಬ್ಯಾರೀಸ್ ಪಬ್ಲಿಕ್ ಸ್ಕೂಲ್ನಲ್ಲಿ ಆರಂಭಗೊಂಡಿತು.
ಕಾರ್ಯಾಗಾರವನ್ನು ಉದ್ಘಾಟಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹ ಮಾತನಾಡಿ, ‘ಎಸೆಸೆಲ್ಸಿ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯೊಂದಿಗೆ ಮೀಫ್ ಜಿಲ್ಲಾದ್ಯಂತ ನೀಡುತ್ತಿರುವ ನಿರಂತರ ಸಹಕಾರವನ್ನು ಸ್ಮರಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸೌದಿ ಅರಬಿಯದ ಎಕ್ಸ್ ಪರ್ಟೈಸ್ ಕಂಪೆನಿಯ ಸಿಎಸ್ಒ ಮುಹಮ್ಮದ್ ಅಶ್ರಫ್ ಕರ್ನಿರೇ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ಮೀಫ್ ನ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು.
ಮೀಫ್ ಸಲಹೆಗಾರ ಫಾರೂಕ್ ಏರ್ ಲೈನ್ಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಪ್ರೌಢ ಶಾಲೆಯ ಶುಭಾ ಭಟ್ ಮತ್ತು ಬಡಗ ಎಕ್ಕಾರು ಪ್ರೌಢ ಶಾಲೆಯ ರಮ್ಯಾ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಂಗಳೂರು ನಗರ ವ್ಯಾಪ್ತಿಯ ಹನ್ನೆರಡು ವಿದ್ಯಾ ಸಂಸ್ಥೆಗಳ 138 ಆಯ್ದ ವಿದ್ಯಾರ್ಥಿಗಳು ಪಾಲ್ಗೊಂಡರು.
ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಖತೀಜತುಲ್ ಕುಬ್ರಾ ಸ್ವಾಗತಿಸಿದರು. ಮೀಫ್ ಕಾರ್ಯದರ್ಶಿ ಅನ್ವರ್ ಹುಸೈನ್ ಗೂಡಿನಬಳಿ ವಂದಿಸಿದರು.







