Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊರಗ ಸಮುದಾಯದ ಅನಾರೋಗ್ಯದ ಬಗ್ಗೆ ಸಮಗ್ರ...

ಕೊರಗ ಸಮುದಾಯದ ಅನಾರೋಗ್ಯದ ಬಗ್ಗೆ ಸಮಗ್ರ ಅಧ್ಯಯನದ ಅಗತ್ಯವಿದೆ: ಪಲ್ಲವಿ ಜಿ.

ವಾರ್ತಾಭಾರತಿವಾರ್ತಾಭಾರತಿ8 Jan 2026 1:37 PM IST
share
ಕೊರಗ ಸಮುದಾಯದ ಅನಾರೋಗ್ಯದ ಬಗ್ಗೆ ಸಮಗ್ರ ಅಧ್ಯಯನದ ಅಗತ್ಯವಿದೆ: ಪಲ್ಲವಿ ಜಿ.

ಮಂಗಳೂರು, ಜ.8: ಕೊರಗ ಸಮುದಾಯದ ಅನಾರೋಗ್ಯ ಮತ್ತು ಜನಸಂಖ್ಯೆ ಇಳಿಕೆಯು ಬಹುದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ತಿಳಿಯಲು ಸಮಗ್ರ ವೈದ್ಯಕೀಯ ಅಧ್ಯಯನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಹಿತ ಸಂಬಂಧಪಟ್ಟ ಇಲಾಖೆಯ ಸಚಿವರ, ಹಿರಿಯ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಲಭಿಸಿ 78 ವರ್ಷಗಳು ಕಳೆದರೂ ದಲಿತ ಸಮುದಾಯದ ಸ್ಥಿತಿ ಶೋಚನೀಯವಾಗಿದೆ. ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದಾರೆ. ಶಿಕ್ಷಣ ಸಿಗದ ಕಾರಣ ಪೂರಕ ಮಾಹಿತಿ, ಅರಿವಿನ ಕೊರತೆಯಿದೆ. ಕಳೆದ ಮೂರು ದಿನಗಳಿಂದ ತಾನು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸಿದ್ದೇವೆ. ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದೇನೆ. ಈ ಸಮಸ್ಯೆಗಳಿಗೆ ಪರಿಹಾರ ಸಿಗದಿರಲು ಮತ್ತು ಸರಕಾರದ ಯೋಜನೆಗಳನ್ನು ಸಕಾಲಕ್ಕೆ ಮಾಹಿತಿ ನೀಡದಿರಲು ಅಧಿಕಾರಿಗಳ ವೈಫಲ್ಯವೇ ಕಾರಣ ಎಂದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಒಂಭತ್ತು ಗ್ರಾಮಗಳಲ್ಲಿ ವಾಸಿಸುವ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಇನ್ನೂ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಾದ ರಸ್ತೆ, ವಿದ್ಯುತ್ ಸಂಪರ್ಕವಾಗದಿರುವ ಬಗ್ಗೆ ವಿಷಾದವಿದೆ. ಅಲ್ಲಿನ ಜನರು ಇನ್ನೂ ಕತ್ತಲೆಯಲ್ಲಿ ವಾಸಿಸುತ್ತಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಚಿವರು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದೇನೆ ಎಂದು ಪಲ್ಲವಿ ತಿಳಿಸಿದರು.

ಆಧಾರ್ ಕಾರ್ಡ್, ರೇಶನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಿಗದಿರುವುದು, ಹಕ್ಕುಪತ್ರ ಇಲ್ಲದಿರುವುದು ಗಂಭೀರ ಪ್ರಮಾದವಾಗಿದೆ. ನಿಗಮದ ಅನುದಾನದಿಂದ ಮೂಲಭೂತ ಸೌಕರ್ಯ ಕಲ್ಪಿಸಲು ಮತ್ತು ಶಿಕ್ಷಣ ಹಾಗೂ ಆರೋಗ್ಯದ ಕಡೆ ಹೆಚ್ಚಿನ ಕ್ರಮ ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಪಲ್ಲವಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಲಿತ ಸಮುದಾಯದಿಂದ ಬಂದ ತನಗೆ ಈ ಜನರು ಅನುಭವಿಸುವ ಸಂಕಷ್ಟಗಳ ಅರಿವು ಇದೆ. ತಾನು ಈ ನಿಗಮದ ಪ್ರಥಮ ಅಧ್ಯಕ್ಷೆಯಾಗಿ ನೇಮಕಗೊಂಡಿರುವೆ. ತನ್ನ ಅಧಿಕಾರವಧಿ ಮುಗಿದ ಬಳಿಕವೂ ಸಮುದಾಯ ನೆನಪಿಸುವಂತಹ ಹೆಜ್ಜೆ ಗುರುತು ಹಾಕಬೇಕೆಂದಿದ್ದೇನೆ.ಅದಕ್ಕಾಗಿ ಕಾಲಮಿತಿಯೊಳಗೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಮೂರು ತಿಂಗಳಿಗೊಮ್ಮೆ ಅನುಪಾಲನಾ ವರದಿ ನೀಡಲು ಸೂಚಿಸಿದ್ದೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಲತಾ ಮತ್ತು ನಿಗಮದ ಅಧಿಕಾರಿ ಆನಂದ ಕುಮಾರ್ ಏಕಲವ್ಯ ಮತ್ತಿತರರು ಉಪಸ್ಥಿತರಿದ್ದರು.

Tags

Pallavi G
share
ವಾರ್ತಾಭಾರತಿ
ವಾರ್ತಾಭಾರತಿ
Next Story
X