ಪೇರಡ್ಕ -ಗೂನಡ್ಕ ದರ್ಗಾ ಶರೀಫ್ ಉರೂಸ್ : ಸರ್ವಧರ್ಮ ಸಮ್ಮೇಳನ

ಸುಳ್ಯ, ಜ.13: ಸುಮಾರು 400 ವರ್ಷಗಳ ಇತಿಹಾಸವಿರುವ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಿತು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಉಡುಪಿ, ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರನ್ನು ಉರೂಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು
ಈ ಸಂದರ್ಭ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಫ, ಕಲ್ಲುಗುಂಡಿ ವರ್ತಕರ ಸಂಘದ ಅಧ್ಯಕ್ಷ ಯು.ಬಿ. ಚಕ್ರಪಾಣಿ, ಬೆಂಗಳೂರು ಫಾರ್ಮೆಡ್ ಗ್ರೂಪ್ ಉಪಾಧ್ಯಕ್ಷ ಡಾ.ಉಮರ್ ಬೀಜದಕಟ್ಟೆ ಉಪಸ್ಥಿತರಿದ್ದರು.
ಉರೂಸ್ ಸಮಿತಿಯ ಅಧ್ಯಕ್ಷ ಜಿ.ಕೆ. ಹಮೀದ್ ಸ್ವಾಗತಿಸಿ, ವಂದಿಸಿದರು.
Next Story





