ಎಸ್‌ಡಿಪಿಐ: ಬಿಎಲ್‌ಎಗಳ ಸಮಾವೇಶ

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕ್ಕ್ಕರಣೆಯ (ಎಸ್‌ಐಆರ್) ಭಾಗವಾಗಿ ಬೂತ್ ಲೆವೆಲ್ ಬಿಎಲ್‌ಎ ಏಜೆಂಟ್‌ಗಳ ಸಮಾವೇಶ ಕಾರ್ಯಕ್ರಮವು ಎಸ್‌ಡಿಪಿಐ ಜಿಲ್ಲಾ ಕಚೇರಿಯಲ್ಲಿ ಶನಿವಾರ ನಡೆಯಿತು.
ಎಸ್‌ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಧ್ಯಕ್ಷ ಇಕ್ಬಾಲ್ ಕಣ್ಣೂರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಎಸ್‌ಡಿಪಿಐ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಬಶೀರ್ ಬಜಾಲ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸವಿಸ್ತಾರ ಮಾಹಿತಿ ನೀಡಿ, ಬೂತ್ ಲೆವೆಲ್ ಏಜೆಂಟ್‌ಗಳ ಜವಾಬ್ದಾರಿ, ಮನೆಮನೆಗೆ ಭೇಟಿ, ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತಿತರ ಪ್ರಕ್ರಿಯೆಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಕೋಶಾಧಿಕಾರಿ ಯಾಸಿನ್ ಅರ್ಕುಳ ಸಮಾರೋಪ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಕ್ಬರ್ ಅಲಿ ಮಿಲಾಯತ್ ಸ್ವಾಗತಿಸಿ, ವಂದಿಸಿದರು.







