Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಕರಾವಳಿಯನ್ನು ‘ಕಡಲ ಪವನ ಶಕ್ತಿ...

ಮಂಗಳೂರು ಕರಾವಳಿಯನ್ನು ‘ಕಡಲ ಪವನ ಶಕ್ತಿ ಉತ್ಪಾದನಾ ವಲಯವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಸಂಸದ ಬ್ರಿಜೇಶ್ ಚೌಟ ಮನವಿ

ವಾರ್ತಾಭಾರತಿವಾರ್ತಾಭಾರತಿ2 Feb 2026 9:07 PM IST
share
ಮಂಗಳೂರು ಕರಾವಳಿಯನ್ನು ‘ಕಡಲ ಪವನ ಶಕ್ತಿ ಉತ್ಪಾದನಾ ವಲಯವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಸಂಸದ ಬ್ರಿಜೇಶ್ ಚೌಟ ಮನವಿ

ಮಂಗಳೂರು, ಫೆ.2: ಭಾರತದ ಗ್ರೀನ್ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯ ತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಂಸದ ಚೌಟ ಅವರು, ಕಡಲನಗರಿ ಮಂಗಳೂರಿನ ಸಮುದ್ರ ತೀರದಲ್ಲಿ ಪವನ ಶಕ್ತಿ ಉತ್ಪಾದನೆಗೆ ವಿಪುಲ ಅವಕಾಶವಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ ವರದಿಯನ್ನು ಉಲ್ಲೇಖಿಸಿ, ಭಾರತದ ಭರವಸೆಯ ಕಡಲ ಪವನ ಇಂಧನ ‘ವಲಯ-2ರಲ್ಲಿ ಮಂಗಳೂರು ಕರಾವಳಿ’ ಗುರುತಿಸಿಕೊಂಡಿದ್ದು, ಮಂಗಳೂರು ಕರಾವಳಿಯು ಸುಮಾರು 6,490 ಚ.ಕಿಮೀ. ಪ್ರದೇಶವು ಪವನ ಇಂಧನ ಉತ್ಪಾದನೆಗೆ ಹೆಚ್ಚು ಪೂರಕವಾಗಿದೆ. ಇಲ್ಲಿ ಭೂಕಂಪನ, ಚಂಡಮಾರುತ ಮುಂತಾದ ನೈಸರ್ಗಿಕ ವಿಕೋಪಗಳ ಅಪಾಯ ಕಡಿಮೆ ಇರುವುದರಿಂದ ದೀರ್ಘಕಾಲದ ಪವನ ಇಂಧನ ಯೋಜನೆಗಳ ಸ್ಥಾಪನೆಗೆ ಅತ್ಯಂತ ಸೂಕ್ತ ಹಾಗೂ ಸುರಕ್ಷಿತ ಪ್ರದೇಶವಾಗಿದೆ. ಹೀಗಾಗಿ, ಮಂಗಳೂರು ಕಡಲ ತೀರವನ್ನು ಪವನ ಶಕ್ತಿ ಉತ್ಪಾದನೆ ತಾಣವಾಗಿ ಅಭಿವೃದ್ಧಿಪಡಿಸಬೇಕೆಂದು ಚೌಟ ಆಗ್ರಹಿಸಿದರು.

ನವ ಮಂಗಳೂರು ಬಂದರಿನ ಕಾರ್ಯತಂತ್ರದ ಪ್ರಯೋಜನವನ್ನು ಒತ್ತಿ ಹೇಳಿದ ಚೌಟ ಅವರು, ಅತ್ಯುತ್ತಮ ಮೂಲಸೌಕರ್ಯ, ಬಹು ಬರ್ತ್‌ಗಳು, ಹೆಚ್ಚಿನ ಸರಕು ನಿರ್ವಹಣಾ ಸಾಮರ್ಥ್ಯ ಸೇರಿದಂತೆ ಅತ್ಯಾಧುನಿಕ ಸೌಲಭ್ಯ ಗಳು ಈ ಬಂದರಿನಲ್ಲಿದೆ. ವಿಂಡ್ ಟರ್ಬೈನ್‌ಗಳಂತಹ ಬೃಹತ್ ಯಂತ್ರೋಪಕರಣಗಳ ಸಾಗಣೆ ಮತ್ತು ಜೋಡಣೆಗೆ ಇಲ್ಲಿ ಪೂರಕ ವ್ಯವಸ್ಥೆಯಿದೆ. ಇದು ಕಡಲ ಪವನ ಇಂಧನ ಯೋಜನೆಗಳ ನಿರ್ವಹಣೆಗೆ ಒಂದು ಪ್ರಮುಖ ಲಾಜಿಸ್ಟಿಕ್ ನೆಲೆಯನ್ನಾಗಿ ಪರಿವರ್ತಿಸಬಹುದು ಎಂದು ಅಭಿಪ್ರಾಯಪಟ್ಟರು.

ಎಂಆರ್ ಪಿಎಲ್, ಒಎಂಪಿಎಲ್ , ಯುಪಿಸಿಎಲ್ ಮತ್ತು ಮಂಗಳೂರು ಎಸ್‌ಇಝಡ್ ನಂತಹ ಬೃಹತ್ ಕೈಗಾರಿಕೆಗಳ ಕೇಂದ್ರವಾಗಿರುವುದರಿಂದ, ಇಲ್ಲಿ ತಯಾರಾಗುವ ಗ್ರೀನ್ ಎನರ್ಜಿಗೂ ಸ್ಥಳೀಯವಾಗಿಯೇ ದೊಡ್ಡ ಮಟ್ಟದ ಮಾರುಕಟ್ಟೆ ಲಭ್ಯವಿದೆ. ಹೀಗಾಗಿ ಕಡಲ ಪವನ ಶಕ್ತಿಯ ಉತ್ಪಾದನೆಯಾಗುವ ವಿದ್ಯುತ್‌ನ್ನು ನೇರವಾಗಿ ಮಾರಾಟ ಮಾಡಲು ಸುಲಭವಾಗುತ್ತದೆ. ಇವುಗಳೊಂದಿಗೆ ನೇರ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಿ ಕೊಳ್ಳುವ ಮೂಲಕ ಯೋಜನೆಯ ಆರ್ಥಿಕ ಸುಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು ಮತ್ತು ತ್ವರಿತ ಅನುಷ್ಠಾನಕ್ಕೂ ಇದು ಸಹಕಾರಿ ಎಂದು ಚೌಟ ಪ್ರತಿಪಾದಿಸಿದ್ದಾರೆ.

ಕರ್ನಾಟಕಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, 2025ರ ಆರಂಭದಲ್ಲಿ ರಾಜ್ಯದ ಗರಿಷ್ಠ ವಿದ್ಯುತ್ ಬೇಡಿಕೆಯು 18,000 ಮೆಗಾವ್ಯಾಟ್ ದಾಟಿದ್ದು, ಇಂಥಹ ಸಂದರ್ಭದಲ್ಲಿ ಪರ್ಯಾಯ ಇಂಧನ ಉತ್ಪಾದಿಸುವ ಪವನ ಶಕ್ತಿಯನ್ನು ಉತ್ತೇಜಿ ಸುವ ಅಗತ್ಯವಿದೆ. ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗವು ತುಲನಾತ್ಮಕವಾಗಿ ಕಡಿಮೆ ಇದ್ದರೂ, ಅರಬ್ಬಿ ಸಮುದ್ರದಲ್ಲಿ ಕಡಲಾಚೆಯ ಗಾಳಿ ಇಂಧನ ಅಭಿವೃದ್ಧಿಪಡಿಸುವುದು ದಕ್ಷಿಣ ಭಾರತದ ಇಂಧನ ಭದ್ರತೆಗೆ ಅತ್ಯಗತ್ಯ ವಾಗಿದೆ. ಜೊತೆಗೆ ಬಂಗಾಳ ಕೊಲ್ಲಿಯು ಸದಾ ಚಂಡಮಾರುತದ ಭೀತಿ ಎದುರಿಸುತ್ತಿರುವುದರಿಂದ, ಅರಬ್ಬಿ ಸಮುದ್ರದ ಈ ವಲಯವು ಪವನ ಶಕ್ತಿಯ ಬಲವರ್ಧನೆಗೆ ಹೆಚ್ಚು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

2030ರ ವೇಳೆಗೆ 500 ಜಿಡಬ್ಲ್ಯು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಭಾರತದ ಗುರಿಯನ್ನು ತಲುಪಲು ಮಂಗಳೂರು ಪವನ ಶಕ್ತಿ ಉತ್ಪಾದನಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ತಕ್ಷಣವೇ ಸಂಪನ್ಮೂಲಗಳ ಮೌಲ್ಯಮಾಪನ, ಯೋಜನೆಗಳ ಪ್ರಾಯೋಗಿಕ ಅನುಷ್ಠಾನ ಮತ್ತು ಕೈಗಾರಿಕಾ ಸಮಾಲೋಚನೆ ಗಳನ್ನು ನಡೆಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನವೀಕರಿಸಬಹುದಾದ ಇಂಧನ ಸಚಿವಾಲಯವನ್ನು ಸಂಸದ ಚೌಟ ಅವರು ಸದನದಲ್ಲಿ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X