Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತಿಭಾ ಪಲಾಯನ ಕಳವಳಕಾರಿ: ಜಿ.ಪಂ. ಉಪ...

ಪ್ರತಿಭಾ ಪಲಾಯನ ಕಳವಳಕಾರಿ: ಜಿ.ಪಂ. ಉಪ ಕಾರ್ಯದರ್ಶಿ

ವಾರ್ತಾಭಾರತಿವಾರ್ತಾಭಾರತಿ9 March 2026 8:14 PM IST
share
ಪ್ರತಿಭಾ ಪಲಾಯನ ಕಳವಳಕಾರಿ: ಜಿ.ಪಂ. ಉಪ ಕಾರ್ಯದರ್ಶಿ
ದ.ಕ. ಜಿಲ್ಲಾ ಕೌಶಲ ಅಭಿವೃದ್ಧಿ ಯೋಜನೆ ತಯಾರಿ ಸಭೆ

ಮಂಗಳೂರು, ಮಾ.9: ದ.ಕ. ಜಿಲ್ಲೆಯು ಶೈಕ್ಷಣಿಕವಾಗಿ ಉನ್ನತ ಸ್ಥಾನದಲ್ಲಿದ್ದರೂ ಇಲ್ಲಿನ ಪ್ರತಿಭಾವಂತರು ವೃತ್ತಿ ಬದುಕಿಗೆ ಹೊರರಾಜ್ಯ ಮತ್ತು ವಿದೇಶಗಳನ್ನು ಅವಲಂಭಿಸುತ್ತಿದ್ದಾರೆ. ಇದರಿಂದ ಸ್ಥಳೀಯ ಕೌಶಲ ಉದ್ಯೋಗಗಳಿಗೆ ಅರ್ಹರು ಲಭ್ಯವಾಗದಿರುವುದು ಕಳವಳಕಾರಿಯಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಹೇಳಿದ್ದಾರೆ.

ಜಿಲ್ಲಾ ಕೌಶ ಅಭಿವೃದ್ಧಿ ಯೋಜನೆಯನ್ನು ತಯಾರಿಸುವ ನಿಟ್ಟಿನಲ್ಲಿ ದ.ಕ.ಜಿ.ಪಂ.ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಪ್ರಕಟಗೊಂಡ ಯುಪಿಎಸ್‌ಸಿ ಫಲಿತಾಂಶ ಪಟ್ಟಿಯಲ್ಲಿ ಎಸ್‌ಎಸ್‌ಎಲ್‌ಸಿ/ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿರುವ ದ.ಕ.ಜಿಲ್ಲೆಯಿಂದ ಒಬ್ಬರೂ ಆಯ್ಕೆಯಾಗಿಲ್ಲ. ಆದರೆ ಎಸ್‌ಎಸ್‌ಎಲ್‌ಸಿ/ಪಿಯುಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿರುವ ಯಾದಗಿರಿ ಜಿಲ್ಲೆಯಿಂದ 4 ಮಂದಿ ಈ ಪಟ್ಟಿಯಲ್ಲಿ ಕಾಣಿಸಿ ದ್ದಾರೆ. ಈ ನಿಟ್ಟಿನಲ್ಲಿ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಜಯಲಕ್ಷ್ಮಿ ಹೇಳಿದರು.

ಜಿಲ್ಲಾ ಕೌಶಲ ಅಭಿವೃದ್ಧಿ ಯೋಜನೆ ಕುರಿತು ಮಾಹಿತಿ ನೀಡಿದ ನೋಡಲ್ ಅಧಿಕಾರಿ, ಕೆ.ಪಿ.ಟಿ. ಹಿರಿಯ ಉಪನ್ಯಾಸಕ ಹರೀಶ್ ಸಿ.ಪಿ. ಮುಂದಿನ 5 ವರ್ಷದಲ್ಲಿ ಜಿಲ್ಲೆಯಲ್ಲಿರುವ ಕೈಗಾರಿಕೆ, ಉದ್ಯಮಗಳಲ್ಲಿ ಲಭ್ಯವಿರುವ ಉದ್ಯೋಗಗಳು, ಅಲ್ಲಿಗೆ ಅಗತ್ಯವಿರುವ ಕೌಶಲಗಳಿಗೆ ತಕ್ಕಂತೆ ಜಿಲ್ಲೆಯಲ್ಲಿರುವ ಶಿಕ್ಷಣ ಸಂಸ್ಥೆಗಳಿಂದ ಮಾನವ ಸಂಪನ್ಮೂಲಗಳು ಲಭ್ಯವಾಗುವಂತೆ ಯೋಜನೆ ರೂಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಜಿಲ್ಲೆಯಲ್ಲಿ ಲಭ್ಯವಾಗುವ ಉದ್ಯೋಗಗಳಿಗೆ ಕೌಶಲಯುತ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಜಿಲ್ಲೆಯಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳು, ಪಾಲಿಟೆಕ್ನಿಕ್, ಐಟಿಐ, ಕೆಜಿಟಿಟಿಐ ಮತ್ತಿತರ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಸೃಷ್ಟಿಸಲು ಒತ್ತು ನೀಡಲಾಗುವುದು. ಇದಕ್ಕಾಗಿ ಕೈಗಾರಿಕೆ, ಉದ್ಯಮಗಳಿಂದಲೂ ಸೂಕ್ತ ಮಾಹಿತಿ ಪಡೆದು ಅದಕ್ಕೆ ತಕ್ಕಂತೆ ಮಾನವ ಸಂಪನ್ಮೂಲಗಳನ್ನು ಒದಗಿಸುವುದು ಇದರ ಉದ್ದೇಶ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರತಿಭಾವಂತರು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದು, ಈ ಬಗ್ಗೆ ಅಧ್ಯಯನ ಮಾಡಲಾಗುವುದು. ಜಿಲ್ಲೆಯ ಐಟಿಐಗಳಲ್ಲಿ 22 ವಿವಿಧ ವೃತ್ತಿಗಳು, ಪಾಲಿಟೆಕ್ನಿಕ್‌ಗಳಲ್ಲಿ 10 ವಿಭಾಗಗಳು, ಜಿಟಿಟಿಸಿಯಲ್ಲಿ 2 ವಿಭಾಗ ಗಳನ್ನು ಕಲಿಸಲಾಗುತ್ತಿದೆ. ಇದು ಜಿಲ್ಲೆಯಲ್ಲಿ ಸಾಕಷ್ಟು ಕೌಶಲಯುತ ಮಾನವ ಸಂಪನ್ಮೂಲಗಳನ್ನು ಒದಗಿಸಲು ಪೂರಕವಾಗಿದೆ. ಆದರೂ ಜಿಲ್ಲೆಯಲ್ಲಿ ಕೌಶಲ ಉದ್ಯೋಗಗಳಿಗೆ ಸಾಕಷ್ಟು ಬೇಡಿಕೆ ಇದ್ದರೂ ಅರ್ಹರು ಲಭ್ಯವಾಗದಿ ರುವ ಬಗ್ಗೆ ಕೈಗಾರಿಕಾ ಕ್ಷೇತ್ರದಿಂದ ಮಾಹಿತಿ ಬಂದಿದೆ ಎಂದು ಹೇಳಿದರು.

ಕೆನರಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಎಂ.ಡಿ. ಪೂಜಾರಿ ಮಾತನಾಡಿ ಐಟಿಐ, ಡಿಪ್ಲೊಮಾ ಮತ್ತಿತರ ತಾಂತ್ರಿಕ ಶಿಕ್ಷಣ ಕಲಿತು ಹೊರಬರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗ ದೊರಕುವಂತಾಗಲು ಆಯಾ ಶಿಕ್ಷಣ ಸಂಸ್ಥೆಗಳು ನಿರಂತರ ಗಮನಹರಿಸಬೇಕು. ಅವರಿಗೆ ಸಮರ್ಪಕ ತರಬೇತಿ ದೊರಕಿದರೆ, ಉದ್ಯೋಗ ಮಾರುಕಟ್ಟೆಯಲ್ಲಿ ಸಮರ್ಥ ರಾಗಲಿದ್ದಾರೆ. ಇತೀಚೆಗೆ ಐಟಿಐ, ಡಿಪ್ಲೊಮಾ ಸೇರಿದಂತೆ ತಾಂತ್ರಿಕ ಶಿಕ್ಷಣ ಕಲಿತ ವಿದ್ಯಾರ್ಥಿಗಳು ಡೆಲಿವರಿ ಉದ್ಯೋಗ ಸೇರಿದಂತೆ ಬೇರೆ ಕ್ಷೇತ್ರದತ್ತ ಮುಖ ಮಾಡುತ್ತಿರುವುದು ಕಳವಳಕಾರಿಯಾಗಿದೆ. ಇದನ್ನು ತಪ್ಪಿಸಿ ಕಲಿತ ಶಿಕ್ಷಣದಲ್ಲಿಯೇ ಉದ್ಯೋಗ ದೊರಕಿಸಲು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಯು ಒತ್ತು ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಎನ್‌ಐಟಿಕೆ ಉಪನ್ಯಾಸಕ ಪ್ರೊ. ಉದಯ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X