ಸಂದರ್ಶನ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2025-26ನೇ) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ಕೆಎಎಸ್ ಸಂದರ್ಶನ ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅಭ್ಯರ್ಥಿಗಳು KPSC 2023-24ನೇ ಸಾಲಿನ ಕೆಎಎಸ್ ಅಧಿಸೂಚನೆಯ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲಸಂಖ್ಯಾತರ ನಿರ್ದೇಶನಾಲಯದ ಜಾಲತಾಣ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಲು ಮಾ.13 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (0824-2433078), ಬಂಟ್ವಾಳ (0825-5232470), ಬೆಳ್ತಂಗಡಿ (0826-295335), ಪುತ್ತೂರು (0825-1237078), ಸುಳ್ಯ (0825-7230666) ಅಥವಾ ಇಲಾಖೆಯ ವೆಬ್ಸೈಟ್ https://dom.karnataka.gov.in ಹಾಗೂ ಸಹಾಯವಾಣಿ: 8277799990ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





