Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಕಾರು ಢಿಕ್ಕಿ; ಅಟೋ ಚಾಲಕ...

ಉಪ್ಪಿನಂಗಡಿ: ಕಾರು ಢಿಕ್ಕಿ; ಅಟೋ ಚಾಲಕ ಸಹಿತ ಐವರು ಮಕ್ಕಳಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ9 March 2026 9:21 PM IST
share
ಉಪ್ಪಿನಂಗಡಿ: ಕಾರು ಢಿಕ್ಕಿ; ಅಟೋ ಚಾಲಕ ಸಹಿತ ಐವರು ಮಕ್ಕಳಿಗೆ ಗಾಯ

ಉಪ್ಪಿನಂಗಡಿ: ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು ಅಟೋ ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಅಟೋ ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಅಟೋ ಚಾಲಕರಾದ ಅವರ ತಂದೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಮಾ.9ರಂದು ಸಂಜೆ ನಡೆದಿದೆ.

ಅಟೋ ರಿಕ್ಷಾ ಚಾಲಕ ಕಲಂದರ್ ಶಾಫಿ, ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5), ಸಝ್ಮಾ (4) ಗಾಯಗೊಂಡವರು. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ ಹಾಗೂ ಮಹಮ್ಮದ್ ಜಾಝೀರ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ: ಅಟೋ ಚಾಲಕರಾಗಿರುವ ಕಲಂದರ್ ಶಾಫಿಯವರು ಉಪ್ಪಿನಂಗಡಿಯ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ತನ್ನ ಮಕ್ಕಳನ್ನು ಇಂದು ಸಂಜೆ ಅಟೋ ರಿಕ್ಷಾದಲ್ಲಿ ಶಾಲೆಯಿಂದ 34 ನೆಕ್ಕಿಲಾಡಿಯ ತನ್ನ ಮನೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮಂಗಳೂರಿನಿಂದ ಉಪ್ಪಿನಂಗಡಿ ಕಡೆ ಬರುತ್ತಿದ್ದ ಕಾರೊಂದು ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಪ್ರವೇಶಿಸುವಲ್ಲಿ ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡಿದಿದೆ. ಡಿಕ್ಕಿಯ ರಭಸಕ್ಕೆ ಅಟೋ ರಿಕ್ಷಾ ಮಗುಚಿ ಬಿದ್ದಿದ್ದು ಅದರಲ್ಲಿದ್ದ ಒಂದೇ ಮನೆಯ ಆರು ಮಂದಿಯೂ ಗಾಯಗೊಂಡಿದ್ದಾರೆ. ಕಾರು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X