ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಶ್ರೀ ಮುಳಿಯ ಶಂಕರ ಭಟ್ಟ ಅವರು, ಗಮಕಿ ಯಾಮಿನಿ ಭಟ್ ಉಡುಪಿ ಅವರ ದತ್ತಿನಿಧಿಯ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಶ್ರೀ ಪದ್ಯಾಣ ಗಣಪತಿ ಭಟ್ ಅವರು, ಕಾರ್ಕಳದ ಶಿಲ್ಪಿ ದಿ . ಕೆ.ಶಾಮರಾಯ ಆಚಾರ್ಯ ಅವರ ದತ್ತಿನಿಧಿಯ ಶಿಲ್ಪಕಲಾ ಪ್ರಶಸ್ತಿಗೆ ಶ್ರೀ ಪಿ. ದಾಮೋದರ ಆಚಾರ್ಯ ಕಾರ್ಕಳ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಸಂಘದ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಕೊಡಮಾ ಡುತ್ತಿರುವ ವಾರ್ಷಿಕ ಗೌರವ ಪ್ರಶಸ್ತಿಗೆ ಶ್ರೀಮತಿ ಶಕುಂತಳಾ ಭಟ್ ಹಳೆಯಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಇದೇ ಮಾ. 15ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದ್ದು, ಜೊತೆಗೆ ಪ್ರೊ! ಡಿ.ಎ. ಶಂಕರ್, ಮೈಸೂರು ಅವರಿಗೆ ೨೦೨೫ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ ನೀಡಲಾಗುವುದು. ಈ ಮೇಲಿನ ನಾಲ್ಕು ದತ್ತಿನಿಧಿಯ ಪ್ರಶಸ್ತಿಗಳು ರೂಪಾÊ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನ ವನ್ನು ಒಳಗೊಂಡಿದೆ. ವಾರ್ಷಿಕ ಗೌರವ ಪ್ರಶಸ್ತಿಯು ಐದು ಸಾವಿರ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವ ಈ ಸಮಾರಂಭದ ಉದ್ಘಾಟನೆಯನ್ನು ಹಿರಿಯ ಕವಿ ಬೆಂಗಳೂರಿನ ಪ್ರೊ.ಟಿ.ಯಲ್ಲಪ್ಪ ಅವರು ಮಾಡುವರು.
ಇದೇ ಸಂದರ್ಭದಲ್ಲಿ ‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯ ಒಂಬತ್ತು ಹೊಸ ಹೊತ್ತಗೆಗಳನ್ನು ಹಂಪಿ ವಿ.ವಿ.ಯ ನಿವೃತ್ತ ಪ್ರಾಧ್ಯಾಪಕ ಡಾ.ಎ.ಸುಬ್ಬಣ್ಣ ರೈ ಅವರು ಬಿಡುಗಡೆ ಮಾಡುತ್ತಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.







