Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುರಭವನದಲ್ಲಿ ಪುಸ್ತಕಗಳ ಸಂಭ್ರಮ| ಪುಸ್ತಕ...

ಪುರಭವನದಲ್ಲಿ ಪುಸ್ತಕಗಳ ಸಂಭ್ರಮ| ಪುಸ್ತಕ ಪ್ರೇಮಿಗಳ ದಿನಾಚರಣೆಯಲ್ಲಿ 10 ಕೃತಿಗಳ ಅನಾವರಣ

ವಾರ್ತಾಭಾರತಿವಾರ್ತಾಭಾರತಿ14 Feb 2025 5:38 PM IST
share
ಪುರಭವನದಲ್ಲಿ ಪುಸ್ತಕಗಳ ಸಂಭ್ರಮ| ಪುಸ್ತಕ ಪ್ರೇಮಿಗಳ ದಿನಾಚರಣೆಯಲ್ಲಿ 10 ಕೃತಿಗಳ ಅನಾವರಣ

ಮಂಗಳೂರು, ಫೆ. 14: ನಗರದ ಕುದ್ಮುಲ್ ರಂಗರಾವ್ ಪುರಭವನವು ಶುಕ್ರವಾರ ಪುಸ್ತಕ ಪ್ರೇಮಿಗಳ ದಿನಾಚರಣೆಯ ಅಂಗವಾಗಿ ಹೊಸ ಕೃತಿಗಳು ಹಾಗೂ ಸಾಹಿತ್ಯ ಪ್ರೇಮಿಗಳಿಂದ ತುಂಬಿಕೊಂಡರೆ, ಭರವಸೆಯ ಲೇಖಕರ 10 ಕೃತಿಗಳ ಅನಾವರಣಕ್ಕೂ ವೇದಿಕೆಯಾಯಿತು.

ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನವು ಪುಸ್ತಕ ಪ್ರೇಮಿಗಳ ದಿನ ಆಚರಣೆಯ ಮೂಲಕ ಸಮಾಜಕ್ಕೆ ವಿನೂತನ ಸಂದೇಶ ನೀಡುವ ಪ್ರಯತ್ನ ಮಾಡಿದ್ದು, ಸಾಹಿತ್ಯ ಹಾಗೂ ಪುಸ್ತಕ ಪ್ರೇಮಿಗಳನ್ನು ಒಗ್ಗೂಡಿಸುವ ಕಾರ್ಯವನ್ನು ಕೂಡಾ ಈ ಮೂಲಕ ಮಾಡಿದೆ. ಬೆಳಗ್ಗಿನಿಂದ ಸಂಜೆವರೆಗೆ ನಡೆದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ‘ಜ್ಞಾನದ ಸಂಸ್ಕೃತಿ ಬೆಳೆಯುವಂತಾಗಬೇಕು. ಅದಕ್ಕೆ ಪುಸ್ತಕ ಓದುವ ಮನೋಭೂಮಿಕೆ ನಮ್ಮಲ್ಲಿ ಬೆಳೆಯಬೇಕು. ದೇಶ ಸುತ್ತು ಕೋಶ ಓದು ಎಂಬ ಮಾತಿನಂತೆ ಲೋಕದ ಸಂಗತಿಯನ್ನು ಪುಸ್ತಕದ ಮೂಲಕ ಅರಿತುಕೊಳ್ಳಬೇಕು’ ಎಂದು ಹೇಳಿದರು.

ಸ್ವ ಅನುಭವ ವ್ಯಕ್ತಿಗೆ ದಾರಿ ತೋರಿದರೆ ಪರಾನುಭವ ಇದ್ದರೆ ಬದುಕು ಇನ್ನಷ್ಟು ವಿಸ್ತಾರದ ಸ್ವರೂಪ ಪಡೆಯಲು ಸಾಧ್ಯ. ಬರವಣಿಗೆ/ಪುಸ್ತಕದ ಮೂಲಕ ಪರಾನುಭವ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಕನ್ನಡ ಪುಸ್ತಕ ಓದುವವರ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬ ದೂರು ಕೇಳಿಬರುತ್ತಿರುವುದು ಹೌದು. ಆದರೆ, ಸಹಸ್ರಾರು ಪುಸ್ತಕಗಳು ನಿತ್ಯ ಪ್ರಕಟವಾಗುತ್ತಿರು ವುದನ್ನು ಕಾಣುವಾಗ ಪುಸ್ತಕ ಲೋಕದಲ್ಲಿ ಆಶಾದಾಯಕ ವಾತಾವರಣ ಕಾಣಲು ಸಾಧ್ಯ ಎಂದವರು ಹೇಳಿದರು.

ಚಹಾ ಅಂಗಡಿಯಲ್ಲೇ 10 ಸಾವಿರ ಪುಸ್ತಕಗಳ ಲೈಬ್ರೆರಿ ಮಾಡಿರುವ ಅಪರೂಪದ ಪುಸ್ತಕ ಪ್ರೇಮಿ ಉದ್ಯಾವರ ಮಾಡದ ಸುರೇಂದ್ರ ಕೋಟ್ಯಾನ್‌ರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಹಿರಿಯ ಸಾಹಿತಿ, ಜಾನಪದ ವಿದ್ವಾಂಸರಾದ ಡಾ.ಗಣೇಶ್ ಅಮೀನ್ ಸಂಕಮಾರ್, ಅಗರಿ ಎಂಟರ್‌ಪ್ರೈಸಸ್ ಮಾಲಕರಾದ ಅಗರಿ ರಾಘವೇಂದ್ರ ರಾವ್, ಚಿತ್ರ ಕಲಾವಿದ ಜಾನ್‌ಚಂದ್ರನ್ ಮುಖ್ಯ ಅತಿಥಿಗಳಾಗಿದ್ದರು.

ಶಶಿರಾಜ್ ರಾವ್ ಕಾವೂರು ಸ್ವಾಗತಿಸಿದರು. ಗೋಪಾಲಕೃಷ್ಣ ಶೆಟ್ಟಿ ವಂದಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಬ್ರಿಜೇಶ್ ಚೌಟ ಅವರು ‘ಮಂಗಳೂರು ವಿವಿಧ ವಿಚಾರದಲ್ಲಿ ಜಗತ್ತಿಗೆ ಮಾಡೆಲ್ ಆಗಿದೆ. ಇದೀಗ ಪ್ರೇಮಿಗಳ ದಿನವನ್ನು ಪುಸ್ತಕ ಪ್ರೇಮಿಗಳ ದಿನವನ್ನಾಗಿ ಬದಲಾಯಿಸುವ ಮೂಲಕ ಜಗತ್ತಿಗೆ ಒಂದು ಮಾಡೆಲ್ ಪರಿಚಯಿಸಿದಂತಾಗಿದೆ’ ಎಂದರು.

ನಾನು ಸೈನ್ಯಕ್ಕೆ ಸೇರುವ ಸಂದರ್ಭ ಪುಸ್ತಕ ಓದುವ ಮೂಲಕ ಅದರ ಅವಲೋಕನ ನಡೆಸಬೇಕಿತ್ತು. ಆ ಕಾರಣದಿಂದ ಪುಸ್ತಕ ಓದುವುದನ್ನು ಒತ್ತಾಯದ ಮೂಲಕ ಕರಗತಗೊಳಿಸಿದ ಪರಿಣಾಮ ಈಗ ಪುಸ್ತಕ ಓದುವ ಪ್ರೀತಿ ನನ್ನಲ್ಲಿ ಬೆಳೆದಿದೆ. ಕಲೆ, ಸಂಸ್ಕೃತಿ, ಸಾಹಿತ್ಯದ ಆಸಕ್ತಿ ಇಲ್ಲವಾದರೆ ಅದು ಸ್ವಸ್ಥ ಸಮಾಜವಾಗಲು ಸಾಧ್ಯವಿಲ್ಲ. ಪುಸ್ತಕ ಓದುವ ಮೂಲಕ ಹೊಸ ಜಗತ್ತನ್ನು ತಿಳಿದುಕೊಳ್ಳುವ ದೊಡ್ಡ ಶಕ್ತಿ ದೊರೆಯುತ್ತದೆ. ಯಾವುದೋ ಒಂದು ಪ್ರದೇಶ, ಅಲ್ಲಿನ ಸ್ಥಿತಿಗತಿಯನ್ನು ಅಲ್ಲಿಗೆ ಹೋಗಿಯೇ ತಿಳಿದುಕೊಳ್ಳಬೇಕಿಲ್ಲ. ಪುಸ್ತಕ ಓದುವ ಮೂಲಕವೇ ಆ ವಾತಾವರಣವನ್ನು ಪಡೆದುಕೊಳ್ಳಲು ಸಾಧ್ಯ ಎಂದರು.

ಡಾ.ವಿಶ್ವನಾಥ ಬದಿಕಾನ ಅವರ ‘ಕರ್ನಾಟಕ ಜಾನಪದ ಅಧ್ಯಯನದ ಮೊದಲ ಹೆಜ್ಜೆ’ ಜನಪದ ಅಧ್ಯಯನ ಗ್ರಂಥ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರ ‘ಸೃಷ್ಟಿ ಸಿರಿಯಲಿ ಪುಷ್ಪವೃಷ್ಟಿ’- ಕನ್ನಡ ಕವನ ಸಂಕಲನ, ಅಕ್ಷತರಾಜ್ ಪೆರ್ಲ ಅವರ ‘ನೆಲ ಉರುಳು’ ಕನ್ನಡ ನಾಟಕ, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ‘ನೆಪವು ಸಿಕ್ಕಿದೆ ಬದುಕಿಗೆ’ ಕನ್ನಡ ಕವನ ಸಂಕಲನ, ಕರುಣಾಕರ ಬಳ್ಕೂರು ಅವರ ‘ಬೆಳಕು’ ಕನ್ನಡ ಕವನ ಸಂಕಲನ, ಡಾ.ಎಸ್.ಎಂ. ಶಿವಪ್ರಕಾಶ್ ಅವರ ‘ಟೆಕ್ನಾಲಜಿ ವರ್ಸಸ್ ಇಕಾಲಜಿ’ ಕನ್ನಡ ಇಂಗ್ಲಿಷ್ ಕವನ, ರಘು ಇಡ್ಕಿದು ಅವರ ‘ಪೊನ್ನಂದಣ’ ಕನ್ನಡ ಕೃತಿ ವಿಮರ್ಶೆ, ಡಾ.ಕಾತ್ಯಾಯನಿ ಕುಂಜಿಬೆಟ್ಟು ಅವರ ‘ಕಾತೀಶ್ವರ ವಚನಗಳು’ ಕನ್ನಡ ವಚನ, ಪ್ರೊ.ಅಕ್ಷಯ ಶೆಟ್ಟಿ ಅವರ ‘ಅವಳೆಂದರೆ ಬರೀ ಹೆಣ್ಣೆ’ ಕನ್ನಡ ಕಥಾ ಸಂಕಲನ ಹಾಗೂ ಪ್ರಕಾಶ್ ವಿ.ಎನ್ ಅವರ ‘ನಮ್ಮವನು ಶ್ರೀ ರಾಮಚಂದ್ರ’ ಕನ್ನಡ ನಾಟಕ ಸೇರಿ 10 ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X