ಫೆ. 13ರಂದು ಬೌದ್ಧಿಕ ಆಸ್ತಿಯ ಹಕ್ಕುಗಳ ಬಗ್ಗೆ ಕಾರ್ಯಾಗಾರ
ಮಂಗಳೂರು, ಫೆ.10: ರಾಷ್ಟ್ರೀಯ ಪ್ರೋಡಕ್ಟಿವಿಟಿ ಕೌನ್ಸಿಲ್ , ಮಂಗಳೂರು ಪ್ರೋಡಕ್ಟಿವಿಟಿ ಕೌನ್ಸಿಲ್ ಮತ್ತು ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ವತಿಯಿಂದ ಬೌದ್ಧಿಕ ಆಸ್ತಿಯ ಹಕ್ಕುಗಳ ಬಗ್ಗೆ ಫೆ.13 ರಂದು ಬೆಳಗ್ಗೆ 9:30 ಎ.ಜೆ. ಇನ್‌ಸ್ಟ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನ ನಿರ್ದೇಶಕ ಡಾ.ಟಿ. ಜಯಪ್ರಕಾಶ್ ರಾವ್ ತಿಳಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತೂರು ವಿವೇಕಾನಂದ ಕಾನೂನು ಕಾಲೇಜು ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ. ಕೆ. ರವೀಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಸಹ್ಯಾದ್ರಿ ಕಾಲೇಜಿನ ಅಸೋಸಿಯೆಟ್ ಪ್ರೊಫೆಸರ್ ಡಾ. ಅಜಿತ ಬಿ.ಎಸ್. ಮತ್ತು ಎಸ್‌ಡಿಎಮ್ ಕಾನೂನು ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಚಂದ್ರಲೇಖ .ವಿ. ಬೌದ್ಧಿಕ ಆಸ್ತಿಯ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ ಎಂದರು.
ಅಪರಾಹ್ನ 1:30ರಿಂದ ವಿವಿಧ ಮ್ಯಾನೇಜ್‌ಮೆಂಟ್ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಬೌದ್ಧಿಕ ಆಸ್ತಿಯ ಹಕ್ಕುಗಳ ಕುರಿ ತಾಗಿ ಚರ್ಚಾ ಸ್ಪರ್ಧೆ, ಪರಿಕಲ್ಪನಾ ಲೇಖನ ಬರವಣಿಗೆ ಸ್ಪರ್ಧೆ ಮತ್ತು ಪೋಸ್ಟರ್ ಪ್ರಸ್ತುತಿಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳ ಲಾಗಿದೆ. ಆಸಕ್ತ ಸಾರ್ವಜನಿಕರು ಮತ್ತು ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ಈ ಕಾರ್ಯಗಾರ ಮತ್ತು ಸ್ಪರ್ಧಾ ಕಾರ್ಯಕ್ರಮ ದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.
ಪ್ರೋಡಕ್ಟಿವಿಟಿ ಕೌನ್ಸಿಲ್‌ನ ಅಧ್ಯಕ್ಷ ಯು.ರಾಮ ರಾವ್ , ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಮಹೇಶ್ ಪಿ.ಜಿ .ಡೀನ್ ಡಾ.ಸ್ವಪ್ನಾ ಶೆಟ್ಟಿ, ಪ್ರಾಧ್ಯಾಪಕರಾದ ಪ್ರೊ.ಚೇತನ್ ಕುಮಾರ್, ಪ್ರೊ.ಮಹೇಶ್ ಪಿ.ಜಿ. ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.