Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಟೆಕಾರ್ ಪ.ಪಂ. ಸಾಮಾನ್ಯ ಸಭೆ: ದಾರಿದೀಪ...

ಕೋಟೆಕಾರ್ ಪ.ಪಂ. ಸಾಮಾನ್ಯ ಸಭೆ: ದಾರಿದೀಪ ಖರೀದಿಗೆ 15 ಲಕ್ಷ ರೂ. ಅನುದಾನ ಮೀಸಲಿಟ್ಟ ಟೆಂಡರ್‌ಗೆ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ25 Sept 2025 5:45 PM IST
share
ಕೋಟೆಕಾರ್ ಪ.ಪಂ. ಸಾಮಾನ್ಯ ಸಭೆ: ದಾರಿದೀಪ ಖರೀದಿಗೆ 15 ಲಕ್ಷ ರೂ. ಅನುದಾನ ಮೀಸಲಿಟ್ಟ ಟೆಂಡರ್‌ಗೆ ಆಕ್ಷೇಪ

ಉಳ್ಳಾಲ: ಹೊಸ ದಾರಿದೀಪ ಖರೀದಿಗೆ 15 ಲಕ್ಷ ಅನುದಾನ ಮೀಸಲಿಟ್ಟು ಟೆಂಡರ್ ಗೆ ಆಹ್ವಾನ ನೀಡಿದ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೌನ್ಸಿಲರ್ ಧೀರಜ್ ಮಾತನಾಡಿ, ಹೊಸ ದಾರಿದೀಪ ಖರೀದಿಗೆ 15 ಲಕ್ಷ ಅನುದಾನ ಮೀಸಲಿಟ್ಟು ಟೆಂಡರ್ ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರಲ್ಲದೇ ಅಷ್ಟು ಮೊತ್ತದ ಬಜೆಟ್ ದಾರಿದೀಪ ಖರೀದಿಗೆ ಬೇಕೇ ಎಂದು ಪ್ರಶ್ನಿಸಿದರು.

ಸುಜಿತ್ ಮಾಡೂರು ಮಾತನಾಡಿ, ಟ್ಯೂಬ್ ಲೈಟ್ ಮಾತ್ರ ಖರೀದಿ ಮಾಡಿದರೆ ಸಾಕಾಗುತ್ತದೆ.ಅದಕ್ಕೆ ಬೇಕಾದ ಪರಿಕರಗಳು ನಮಲ್ಲಿ ಇರುವಾಗ ಅಷ್ಟು ಮೊತ್ತದ ಅಗತ್ಯ ಇಲ್ಲ ಎಂದರು.

ಅಹ್ಮದ್ ಬಾವ ಮಾತನಾಡಿ ಕಡಿಮೆ ಮೊತ್ತದಲ್ಲಿ ಆಗುವುದಾದರೆ 15 ಲಕ್ಷ ಅನುದಾನದ ಟೆಂಡರ್ ಬೇಕಾಗಿಲ್ಲ ಎಂದರು. ಅಧ್ಯಕ್ಷೆ ದಿವ್ಯ ಸತೀಶ್ ಮಾತನಾಡಿ, ಹೊಸ ದಾರಿದೀಪ ಖರೀದಿಗೆ ಟೆಂಡರ್ ಕರೆದಿದ್ದು ಮಾತ್ರ. ಯಾರಿಗೂ ನೀಡಿಲ್ಲ. ಈ ಟೆಂಡರ್ ಬೇಡ ಎಂದಾದಲ್ಲಿ ರದ್ದು ಪಡಿಸಲಾಗುವುದು ಎಂದರು.

ಕೋಟೆಕಾರ್ ಪಟ್ಟಣ ಪಂಚಾಯತ್ ನ 17 ವಾರ್ಡ್ ಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮೀಸಲಿಡಬೇಕು. ಅಮೃತ್ 2.0 ಕುಡಿಯುವ ನೀರು ಯೋಜನೆ ಯಿಂದ ಪಂಚಾಯತ್ ಗೆ ಕುಡಿಯುವ ನೀರಿನ ವಾರ್ಷಿಕ ನಿರ್ವಹಣಾ ಕಾಮಗಾರಿ ಯಲ್ಲಿ ಹಣ ಉಳಿಯುತ್ತದೆ. ಅದನ್ನು ವಾರ್ಡ್ ಗಳ ಅಭಿವೃದ್ಧಿ ಗೆ ನೀಡಿ ಎಂದು ಧೀರಜ್ ತಿಳಿಸಿದರು.

11ನೇ ವಾರ್ಡ್ ತುಂಬಾ ಹಿಂದುಳಿದ ಪ್ರದೇಶ. ಈ ವಾರ್ಡ್ ನಲ್ಲಿ ಅಭಿವೃದ್ಧಿ ಕೆಲಸ ಆಗಬೇಕು. ಈ ವಾರ್ಡ್ ಗೆ ಜಾಸ್ತಿ ಅನುದಾನ ನೀಡಬೇಕು ಎಂದು ಹರೀಶ್ ಹೇಳಿದರು.

ಪ್ರತಿ ವಾರ್ಡ್ ಗಳ ಅಭಿವೃದ್ಧಿ ಕೆಲಸಗಳ ಬಗ್ಗೆ ಸದಸ್ಯರು ಪಟ್ಟಿ ಮಾಡಿ ಒಂದು ವಾರದೊಳಗೆ ನೀಡಿದರೆ ಒಳ್ಳೆಯದು. ಇದರಿಂದ ಅಭಿವೃದ್ಧಿ ಕಾಮಗಾರಿ ಗೆ ಎಷ್ಟು ಹಣ ಬೇಕು ಎಂದು ಗೊತ್ತಾಗುತ್ತದೆ ಎಂದು ಅಹ್ಮದ್ ಅಜ್ಜಿನಡ್ಕ ತಿಳಿಸಿದರು.

ಅನುದಾನದಲ್ಲಿ ವೆತ್ಯಾಸ ಮಾಡಿ ನೀಡಲಾಗುವುದಿಲ್ಲ. ಎಲ್ಲರಿಗೂ ಸಮಾನ ರೀತಿಯಲ್ಲಿ ಅನುದಾನ ಹಂಚಲಾಗು ವುದು ಎಂದು ಅಧ್ಯಕ್ಷೆ ದಿವ್ಯ ಸತೀಶ್ ಸಭೆಗೆ ತಿಳಿಸಿದರು. ಸಂಕೋಲಿಗೆ ಬಳಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಇಲ್ಲ. ಅವರ ಜೀವನ ಕತ್ತಲಲ್ಲಿ ಇದೆ. ಇದಕ್ಕೆ ಒಂದು ಪರಿಹಾರ ಆಗಬೇಕು ಎಂದು ಸುಜಿತ್ ಅವರು ಮೆಸ್ಕಾಂ ಅಧಿಕಾರಿ ಯ ಗಮನ ಸೆಳೆದರು.

ಮೆಸ್ಕಾಂ ಅಧಿಕಾರಿ ಮಾರಪ್ಪ ಮಾತನಾಡಿ ಮೆಸ್ಕಾಂ ವತಿಯಿಂದ ನೇರವಾಗಿ ವಿದ್ಯುತ್ ಸಂಪರ್ಕ ಮನೆಗೆ ನೀಡಲಾಗುವುದಿಲ್ಲ. ಇದಕ್ಕೆ ಪಂಚಾಯತ್ ನ ಎನ್ ಒಸಿ, ಡೋರ್ ನಂಬರ್ ಬೇಕು. ಇದನ್ನು ಕೋಟೆಕಾರ್ ಪ.ಪಂ. ಮಾಡಿಸಬೇಕು ಎಂದರು.

ಕೋಟೆಕಾರ್ ಗ್ರಾಮ ವ್ಯಾಪ್ತಿಯಲ್ಲಿ ಪೆಟ್ರೋಲ್, ಹೈಸ್ಪೀಡ್ ಡೀಸೆಲ್ ರಿಟೇಲ್ ಔಟ್ ಲೆಟ್ ಸ್ಥಾಪಿಸಲು ನಿರಾಕ್ಷೇಪಣಾ ಪತ್ರ ನೀಡುವ ಬಗ್ಗೆ ಹಾಗೂ ಕಚೇರಿಗೆ ಲ್ಯಾಪ್ ಟಾಪ್, ಸ್ಕ್ಯಾನರ್ ಖರೀದಿ ವಿಚಾರದಲ್ಲಿ ಮುಖ್ಯಾಧಿಕಾರಿ ಮಾಲಿನಿ ಪ್ರಸ್ತಾಪಿಸಿದಾಗ ಸಭೆಯಲ್ಲಿ ಸಹಮತ ವ್ಯಕ್ತವಾಯಿತು.

ಹೊಂಡಮಯ ರಸ್ತೆಯಲ್ಲಿ ಹೊಂಡಗಳನ್ನು ಮುಚ್ಚುವ ಕಾರ್ಯ ಮಾಡಿದರೂ ಕಾಮಗಾರಿ ಕಳಪೆ ಆಗಿದೆ. ಇದನ್ನು ಮರು ದುರಸ್ತಿ ಮಾಡಿಸಬೇಕು ಎಂದು ಸದಸ್ಯರು ಸಭೆಯಲ್ಲಿ ಆಗ್ರಹಿಸಿದರು.

ಮುಖ್ಯಾಧಿಕಾರಿ ಮಾಲಿನಿ ಅವರು ಈಗ ‌ತಾತ್ಕಾಲಿಕ ಮಟ್ಟಕ್ಕೆ ಮಳೆಯ ನಡುವೆ ಹೊಂಡಮಯ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ಮಾಡಲಾಗಿದೆ. ಇದನ್ನು ಮರು ದುರಸ್ತಿ ಮುಂದಿನ ಹಂತದಲ್ಲಿ ನಡೆಯಲಿದೆ ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X