ಮೇ 16: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು, ಮೇ 14: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೇ 16ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 6:55ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು 7:25ಕ್ಕೆ ಸರ್ಕ್ಯೂಟ್ ಹೌಸ್, 10ಕ್ಕೆ ಕದ್ರಿ ಉದ್ಯಾನವನದಲ್ಲಿ ಮಾವು ಮೇಳ ಉದ್ಘಾಟಿಸುವರು. ಮಧ್ಯಾಹ್ನ 2:45ಕ್ಕೆ ಮುಖ್ಯಮಂತ್ರಿಯೊಂದಿಗೆ ನಗರದ ಉರ್ವಾದಲ್ಲಿರುವ ಕಬ್ಬಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ, 3:30ಕ್ಕೆ ಪಡೀಲ್‌ನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರುವ ಪ್ರಜಾಸೌಧ ಕಟ್ಟಡ, ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡ, ಗುರುಪುರ ನಾಡಕಚೇರಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಗಳ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವರು.
ಸಂಜೆ 4:10ಕ್ಕೆ ಪಡೀಲ್‌ನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಮುಖ್ಯಮಂತ್ರಿಯೊಂದಿಗೆ ಸರಕಾರದ ವಿವಿಧ ಸೌಲಭ್ಯಗಳ ವಿತರಣಾ ಸಭಾ ಕಾರ್ಯಕ್ರಮ, 5:50ಕ್ಕೆ ಮುಖ್ಯಮಂತ್ರಿಗಳೊಂದಿಗೆ ಪ್ರಜಾಸೌಧ ಕಚೇರಿ ಕಟ್ಟಡದ ವಿದ್ಯುತ್ ದೀಪಲಂಕಾರವಾದ ಚಾಲನಾ ಕಾರ್ಯಕ್ರಮ ಹಾಗೂ ಸಂಜೆ 6:45ಕ್ಕೆ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.