Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಲಿಕುಳ ಅಭಿವೃದ್ಧಿಗೆ 165 ಕೋಟಿ ರೂ....

ಪಿಲಿಕುಳ ಅಭಿವೃದ್ಧಿಗೆ 165 ಕೋಟಿ ರೂ. ಪ್ರಸ್ತಾವನೆ: ಬಿ. ಶಿವಣ್ಣ

ವಾರ್ತಾಭಾರತಿವಾರ್ತಾಭಾರತಿ19 Feb 2025 5:52 PM IST
share
ಪಿಲಿಕುಳ ಅಭಿವೃದ್ಧಿಗೆ 165 ಕೋಟಿ ರೂ. ಪ್ರಸ್ತಾವನೆ: ಬಿ. ಶಿವಣ್ಣ

ಮಂಗಳೂರು, ಫೆ. 19: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿ 10 ಇಲಾಖೆಗಳಿಂದ ಒಟ್ಟು 165 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನಾ ರಚನಾ ಸಮಿತಿಯ ಅಧ್ಯಕ್ಷ ಬಿ. ಶಿವಣ್ಣ ತಿಳಿಸಿದ್ದಾರೆ.

ಸಮಿತಿಯು ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿದ ಬಳಿಕ ಬುಧವಾರ ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರಿಗೆ ಅವರು ಈ ಮಾಹಿತಿ ನೀಡಿದರು.

ಪಿಲಿಕುಳ ನಿಸರ್ಗಧಾಮವನ್ನು ರಾಜ್ಯದ ಆಕರ್ಷಣೀಯ ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ಅರಣ್ಯ, ಪ್ರವಾಸೋದ್ಯಮ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ವಿಜ್ಞಾನ ಮತ್ತು ತಂತ್ರಜ್ಞಾನ, ಕಂದಾಯ, ತೋಟಗಾರಿಕೆ, ಕನ್ನಡ ಮತ್ತು ಸಂಸ್ಕೃತಿ, ಮೀನುಗಾರಿಕೆ, ಜವಳಿ ಸೇರಿ 10 ಇಲಾಖೆಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಸ್ತಾವಿಸಲಾ ಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇಲಾಖಾವಾರು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ, ಅಲ್ಲಿನ ವರದಿ ಆಧಾರದಲ್ಲಿ ವಿವಿಧ ಇಲಾಖೆಗಳ ಸಚಿವರ ಜತೆ ಸಾಧಕ ಬಾಧಕಗಳನ್ನು ಚರ್ಚಿಸಿ ಬಳಿಕ ಮುಖ್ಯಮಂತ್ರಿ ಮಟ್ಟದಲ್ಲಿ ಸಭೆ ನಡೆಸಿ ಅಗತ್ಯ ಅನುದಾನ ಒದಗಿಸಲು ಕ್ರಮ ವಹಿಸಲಾಗುವುದು. ಪಿಲಿಕುಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗಿದೆ ಎಂದು ಅವರು ಹೇಳಿದರು.

ಸಮಿತಿಯ ಸದಸ್ಯರಾದ ಎಂ.ಆರ್. ಸೀತಾರಾಂ ಮಾತನಾಡಿ, ಪಿಲಿಕುಳದ ದೀರ್ಘಾವಧಿಯ ಅಭಿವೃದ್ಧಿಗಾಗಿ ಅನುದಾನ ಒದಗಿಸುವ ಜತೆಗೆ ಪಿಲಿಕುಳದ ಉಸ್ತುವಾರಿಗೆ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡುವ ನಿಟ್ಟಿನಲ್ಲಿಯೂ ಸಭೆಯಲ್ಲಿ ಚರ್ಚೆಯಾಗಿದೆ. ಪಿಲಕುಳ ದ.ಕ. ಜಿಲ್ಲೆಯ ಮುಖಪುಟ ಇದ್ದಂತೆ. ಇದನ್ನು ಇನ್ನಷ್ಟು ಆಕರ್ಷಣೀಯ ವಾಗಿಸುವ ಜತೆಗೆ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದವರು ಹೇಳಿದರು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿಯಾಗಿ ರಚಿಸುವ ಅಥವಾ ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಬೇಡಿಕೆಯೂ ಸಭೆಯಲ್ಲಿ ವ್ಯಕ್ತವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ವರದಿ ಆಧಾರದಲ್ಲಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಅವರು ಹಳಿದರು.

ಪಿಲಿಕುಳ ಪ್ರಾಧಿಕಾರಕ್ಕೆ ಖಾಯಂ ಆಯುಕ್ತರ ನೇಮಕದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಪ್ರಸ್ತಾವಿಸಲಾಗಿರುವ ಸಮಗ್ರ ಅಭಿವೃದ್ಧಿಯ ಬಳಿಕ ಈ ಬಗ್ಗೆ ಕ್ರಮ ವಹಿಸಲಾಗುತ್ತದೆ ಎಂದರು.

ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ತಾರಾಲಯಕ್ಕೆ ಲೇಸರ್ ಪ್ರೊಜೆಕ್ಟರ್ ಅಳವಡಿಕೆ, ಪ್ರೊ. ಯು.ಆರ್. ರಾವ್ ಗ್ಯಾಲರಿ ಸ್ಥಾಪನೆ, ತಾರಾಲಯ ಪಾರ್ಕ್‌ನಲ್ಲಿ ಮಾದರಿಗಳ ಅಳವಡಿಕೆ, ವಿದ್ಡಾನ ಕೇಂದ್ರದ ಮಾದರಿಗಳ ಬದಲಾ ವಣೆ ಸೇರಿದಂತೆ ಒಟ್ಟು 4900 ಲಕ್ಷ ರೂ. ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಪ್ರಸಕ್ತ ಇರುವ ಎರಡು ಆ್ಯಂಪಿ ಥಿಯೇಟರ್‌ಗಳ ನವೀಕರಣ, ಸೋಲಾರ್ ಗ್ರಿಡ್, ಪಿಲಿಕುಳದ ಸುತ್ತ ಶಾಶ್ವತ ಕಂಪೌಂಡ್ ವಾಲ್ ನಿರ್ಮಾಣ, ವಿದ್ಯುತ್ ಟ್ರಾನ್ಸ್‌ಫಾರ್ಮರ್, ದಾರಿದೀಪ ನವೀಕರಣ, ಲೇಕ್ ಗಾರ್ಡನ್‌ನಲ್ಲಿ ತೂಗು ಸೇತುವೆ ನಿರ್ಮಾಣ, ಪ್ರವಾಸಿಗರಿಗೆ ಹೈಟೆಕ್ ಯಾತ್ರಿ ನಿವಾಸ, ಡಾರ್ಮಿಟರಿ ನಿರ್ಮಾಣ, ಮಕ್ಕಳ ಪಾರ್ಕ್ ಅಭಿವೃದ್ಧಿ ಹಾಗೂ ಟಾಯ್ ಟ್ರೇನ್ ನಿರ್ಮಾಣ ಸೇರಿ ಒಟ್ಟು 4600 ಲಕ್ಷ ರೂ. ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲಾಗಿದೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಿಂದ ಪಶ್ಚಿಮ ಘಟ್ಟದ ಸಂಶೋಧನಾ ಕೇಂದ್ರ, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಯೋಜನೆಯ ವಿಸ್ತರಣೆ, ಹರ್ಬೇರಿಯಂ ಮಾದರಿಗಳ ಡಿಜಿಟಲೀಕರಣ, ಸಸ್ಯಕಾಶಿ ಉನ್ನತೀಕರಣ, ವನ್ಯ ಪ್ರಾಣಿ ಸಂರಕ್ಷಣಾ ಕೇಂದ್ರ ಸೇರಿ 4355 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸಮಿತಿ ಸದಸ್ಯರಾದ ಡಿ.ಜಿ. ಶಾಂತನಗೌಡರ, ಸಮೃದ್ಧಿ ಮಂಜುನಾಥ್, ಪ್ರಕಾಶ್ ಕೋಳಿವಾಡ್, ರಾಜಾ ವೇಣುಗೋಪಾಲ ನಾಯಕ್, ವಿಠಲ್ ಸೋಮಣ್ಣ ಅಲ್ಗೇಕರ್, ಎನ್. ರವಿಕುಮಾರ್, ಗಣಪತಿ ಉಳ್ವೇಕರ್, ವಸಂತ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಶ್ರೀವತ್ಸ ಉಪಸ್ಥಿತರಿದ್ದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಹೀಂ, ಶಿಕ್ಷಣ ಇಲಾಖೆ ಆಯುಕ್ತ ಡಾ. ತ್ರಿಕೋಲ್‌ಚಂದ್ರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X