ದ.ಕ. ಜಿಲ್ಲೆ| ದ್ವಿತೀಯ ಪಿಯುಸಿ ಪರೀಕ್ಷೆ: 165 ವಿದ್ಯಾರ್ಥಿಗಳು ಗೈರು

ಮಂಗಳೂರು, ಮಾ.1: ದ.ಕ. ಜಿಲ್ಲೆಯ 55 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವಾದ ಶನಿವಾರ ಕನ್ನಡ ಪರೀಕ್ಷೆಗೆ 21,313 ಹೆಸರು ನೋಂದಾಯಿಸಿಕೊಂಡಿದ್ದರು.
ಈ ಪೈಕಿ 21,149 ವಿದ್ಯಾರ್ಥಿಗಳು ಹಾಜರಾಗಿದ್ದರೆ, 164 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಅರೆಬಿಕ್ ಪರೀಕ್ಷೆಗೆ 227 ವಿದ್ಯಾರ್ಥಿಗಳು ಹಾಜರಾಗಿದ್ದರೆ, ಒಬ್ಬ ವಿದ್ಯಾರ್ಥಿ ಗೈರು ಹಾಜರಾಗಿದ್ದರು. ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಶ್ರೀಧರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





