Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಬಳ ಆಯೋಜನೆಗೆ 2 ಕೋಟಿ ಅನುದಾನಕ್ಕೆ...

ಕಂಬಳ ಆಯೋಜನೆಗೆ 2 ಕೋಟಿ ಅನುದಾನಕ್ಕೆ ರಾಜ್ಯ ಕಂಬಳ ಅಸೋಸಿಯೇಶನ್ ಮನವಿ

ವಾರ್ತಾಭಾರತಿವಾರ್ತಾಭಾರತಿ11 Oct 2025 2:29 PM IST
share
ಕಂಬಳ ಆಯೋಜನೆಗೆ 2 ಕೋಟಿ ಅನುದಾನಕ್ಕೆ ರಾಜ್ಯ ಕಂಬಳ ಅಸೋಸಿಯೇಶನ್ ಮನವಿ

ಮಂಗಳೂರು, ಅ.11: ಜನಪ್ರಿಯ ಜಾನಪದ ಕ್ರೀಡೆ ಕಂಬಳ ನಡೆಸಲು ಬಜೆಟ್‌ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿರಿಸುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ಮುಖ್ಯಮಂತ್ರಿಗೆ ಮನವಿ ಮಾಡಿದೆ.

ಮಂಗಳೂರಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಡಾ.ಐಕಳಬಾವ ದೇವೀಪ್ರಸಾದ್ ಶೆಟ್ಟಿ, ಬಜೆಟ್‌ನಲ್ಲಿ ಈ ಮೊತ್ತ ಮೀಸಲಿರಿಸಿ ಕಂಬಳ ಆಯೋಜಕರಿಗೆ ಒದಗಿಸಿದರೆ ಕಂಬಳಕ್ಕೆ ಪೂರಕ ಯೋಜನೆ ರೂಪಿಸಲು ಅನುಕೂಲವಾಗಲಿದೆ ಎಂದರು.

ಈ ಹಿಂದೆ ಒಂದು ಕಂಬಳ ನಡೆಸಲು 5 ಲಕ್ಷ ರು. ನೀಡಲಾಗಿತ್ತು. ಈ ಬಾರಿ 2 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. 2 ಕೋಟಿ ರು. ಮೀಸಲಿರಿಸಿದರೆ ಒಂದು ಕಂಬಳಕ್ಕೆ ತಲಾ 8 ಲಕ್ಷ ರೂ.ನಂತೆ ಒಟ್ಟು 25 ಕಂಬಳಗಳಿಗೆ ಅನುದಾನ ನೀಡಲು ಸಾಧ್ಯವಾಗಲಿದೆ. ಈ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರಕ್ಕೆ, ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ರಾಜ್ಯ ಸರಕಾರ ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಶನ್‌ಗೆ ಅಧಿಕೃತ ಮಾನ್ಯತೆ ನೀಡಲಾಗಿದೆ. ರಾಜ್ಯ ಕಂಬಳ ಅಸೋಸಿಯೇಶನ್‌ಗೆ ಜಿಲ್ಲಾಧಿಕಾರಿಯಿಂದ ಅನುಮೋದನೆಗೊಂಡ ಪದಾಧಿಕಾರಿಗಳ ಪಟ್ಟಿಗೆ ಮಾನ್ಯತೆ ದೊರಕಿದೆ. ಮುಂದಿನ ಮೂರು ವರ್ಷದ ಅವಧಿಗೆ ಅಧಿಕಾರಾವಧಿ ಇರಲಿದೆ ಎಂದವರು ಹೇಳಿದರು.

ಕಂಬಳಕ್ಕೆ ಐಪಿಎಲ್ ಮಾದರಿ ಪ್ರಾಯೋಜಕತ್ವ ಯೋಜನೆ

ಕಂಬಳ ಸಮಿತಿಯು ಮುಂದಿನ ವಾರ ಮಂಗಳೂರಲ್ಲಿ ಸಭೆ ಸೇರಲಿದೆ. ಮುಂದಿನ ದಿನಗಳಲ್ಲಿ ಕಂಬಳ ನಡೆಸುವ ಕುರಿತಂತೆ ರೂಪುರೇಷೆಗಳನ್ನು ಕೈಗೊಳ್ಳಲಾಗುತ್ತದೆ. ಇದರಲ್ಲಿ ಕಂಬಳವನ್ನು ಐಪಿಎಲ್ ಮಾದರಿ ಪ್ರಾಯೋಜಕತ್ವದಲ್ಲಿ ನಡೆಸುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ.

ರಾಜ್ಯ ಕಂಬಳ ಆಯೋಜಕರಿಗೆ ಸಹಕಾರ, ಪ್ರತಿ ಕಂಬಳಗಳು ಕ್ರೀಡಾ ಪ್ರಾಧಿಕಾರದ ಲಾಂಛನದ ಅಡಿಯಲ್ಲಿ ನಡೆಯುವುದು, ಕಂಬಳವನ್ನು ನಿಗದಿತ ವೇಳೆಯಲ್ಲಿ ನಡೆಸುವುದು. ಕಂಬಳ ಓಟಗಾರರಿಗೆ, ತೀರ್ಪುಗಾರರಿಗೆ, ಕಾರ್ಮಿಕರಿಗೆ ಸರ್ಕಾರದಿಂದ ಭತ್ಯೆ ಮತ್ತು ಆರೋಗ್ಯ ವಿಮೆ ಒದಗಿಸುವುದು, ಕಂಬಳದ ಅಧಿಕೃತ ಧ್ವಜ ಮತ್ತು ಲಾಂಛನ ರಚನೆ. ಕಂಬಳ ಆಯೋಜಕರು

ನಡೆಸುವ ಕಂಬಳಕ್ಕೆ ಅಸೋಸಿಯೇಷನ್‌ಮೂಲಕವೇ ಅನುಮತಿ ಪಡೆಯುವುದು. ಇದರ ಮೂಲಕವೇ ಸರ್ಕಾರದ ಅನುದಾನ ಹಂಚಿಕೆ ಮಾಡುವುದು. ಕಂಬಳದ ಬೈಲಾ, ನೀತಿ, ನಿಯಮಗಳನ್ನು ಕಾಲಕಾಲಕ್ಕೆ ತಕ್ಕಂತೆ ರೂಪಿಸುವ ಜವಾಬ್ದಾರಿ ರಾಜ್ಯ ಕಂಬಳ ಅಸೋಸಿಯೇಷನ್‌ನದ್ದು. ಈಗಾಗಲೇ ಬೈಲಾ ರಚನೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ವಾರ್ಷಿಕ ಮಹಾಸಭೆ, ಆಡಿಟ್ ಕ್ಯಾಲೆಂಡರ್ ಆಫ್ ಈವೆಂಟ್ ಮತ್ತು ಅಸೋಸಿಯೇಷನ್ ಕಾರ್ಯ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸುವ ಯೋಜನೆಯನ್ನು ಹೊಂದಲಾಗಿದೆ ಎಂದವರು ಹೇಳಿದರು.

ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಮುಚ್ಚೂರು ಇದ್ದರು.

ಮುಂದಿನ ಬಾರಿ ಮೈಸೂರಲ್ಲಿ ಕಂಬಳ

ಈ ಬಾರಿ ಕಂಬಳದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಮೂಡುಬಿದಿರೆ ಮತ್ತು ಮೀಯಾರು ಸರ್ಕಾರದ ಕಂಬಳ, ಇದನ್ನು ಹೊರತುಪಡಿಸಿದರೆ ಪಿಲಿಕುಳ ಕಂಬಳ ವಿಚಾರ ಕೋರ್ಟ್‌ನಲ್ಲಿದೆ.

ಬೆಂಗಳೂರಿನಲ್ಲಿ ಎರಡು ವರ್ಷ ಹಿಂದೆ ಕಂಬಳ ನಡೆದದ್ದು ಬಿಟ್ಟರೆ, ಈ ವರ್ಷ ನಡೆದಿಲ್ಲ. ಶಿವಮೊಗ್ಗ, ಮುಂಬೈ ಮತ್ತಿತರ ಕಡೆಗಳಲ್ಲಿ ಕಂಬಳ ನಡೆಸುವಂತೆ ಬೇಡಿಕೆ ಬಂದಿದೆ. ಮುಂದಿನ ವರ್ಷ ಮೈಸೂರಿನಲ್ಲಿ ಕಂಬಳ ನಡೆಯುವ ಸಾಧ್ಯತೆ ಇದೆ. ಈ ಬಾರಿ ಹರೇಕಳ ಮತ್ತು ಬಡಗಬೆಟ್ಟುವಿನಲ್ಲೂ ಕಂಬಳ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ.ಐಕಳಬಾವ ದೇವೀಪ್ರಸಾದ್ ಶೆಟ್ಟಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X