ಮೇ 20-21: ಮಂಗಳೂರು ವಿವಿ ಕಾಲೇಜು 120ನೇ ವಾರ್ಷಿಕೋತ್ಸವ

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ 120ನೇ ವಾರ್ಷಿಕೋತ್ಸವ ಮೇ 20 ಮತ್ತು 21 ರಂದು ಬೆಳಗ್ಗೆ 10ಕ್ಕೆ ಕಾಲೇಜಿನ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ.
ಮೇ 20ರಂದು ಪ್ರತಿಭಾ ದಿನಾಚರಣೆ ನಡೆಯಲಿದೆ. ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಕೆ. ಶೆಟ್ಟಿ, ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸ ಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.
ಮೇ 21ರಂದ ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ. ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಉಪಸ್ಥಿತಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





