Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 2006...

ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 2006 ಕೋ.ರೂ. ಅನುದಾನ ತಂದಿದ್ದೇನೆ: ಪುತ್ತೂರು ಶಾಸಕ ಅಶೋಕ್ ರೈ

ವಾರ್ತಾಭಾರತಿವಾರ್ತಾಭಾರತಿ5 July 2025 10:50 PM IST
share
ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 2006 ಕೋ.ರೂ. ಅನುದಾನ ತಂದಿದ್ದೇನೆ: ಪುತ್ತೂರು ಶಾಸಕ ಅಶೋಕ್ ರೈ

ಉಪ್ಪಿನಂಗಡಿ: ಶಾಸಕನಾಗಿ ಎರಡು ವರ್ಷದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಎರಡು ಸಾವಿರದ ಆರು ಕೋ.ರೂ. ಅನುದಾನವನ್ನು ತಂದಿದ್ದೇನೆ. ಇತಿಹಾಸದಲ್ಲಿ ಆಗದ ಅಭಿವೃದ್ಧಿ ಕಾಮಗಾರಿಗಳು ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ನಡೆಯಲಿವೆ. ಆದರೆ ಬಿಜೆಪಿಯವರು ಸುಳ್ಳು ಮತ್ತು ಧರ್ಮದ ರಾಜಕಾರಣ ಮಾಡುವ ಮೂಲಕ ಜನರ ಮನಸ್ಸನ್ನು ಪರಿವರ್ತಿ ಸುವ ಕೆಲಸ ಮಾಡುತ್ತಿದ್ದು, ರಾಜಕೀಯ ರಹಿತವಾಗಿ ಕ್ಷೇತ್ರದ ಅಭಿವೃದ್ಧಿಯ ಮೂಲಕವೇ ಇದಕ್ಕೆ ತಕ್ಕ ಉತ್ತರ ನೀಡುವ ಕೆಲಸ ಕಾಂಗ್ರೆಸ್‍ನಿಂದಾಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ವಲಯ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಜು.5ರಂದು ಉಪ್ಪಿನಂಗಡಿಯಲ್ಲಿ ನಡೆದ `ಬಿಜೆಪಿಯ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ'ವೆಂಬ ಜನಜಾಗೃತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಳ್ಳುಗಳನ್ನೇ ಹೇಳುತ್ತಾ ಹೋದರೆ ಜನರ ಮನಸ್ಸು ಕೂಡಾ ಪರಿವರ್ತನೆ ಆಗುವುದು ಸಹಜ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ಕೊಡುಗೆಯೇನು ಎಂಬುದನ್ನು ಜನತೆಗೆ ಮನವರಿಕೆ ಮಾಡುವ ಕಾರ್ಯ ಮಾಡಬೇಕು. ಹಿಂದುತ್ವ ಹಿಂದುತ್ವ ಎಂದು ಬೊಬ್ಬಿಡುವ ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಸರಕಾರಿ ಜಾಗದಲ್ಲಿರುವ ಎಷ್ಟು ದೇವಸ್ಥಾನಗಳ, ಭಜನಾ ಮಂದಿರಗಳ, ದೈವಸ್ಥಾನಗಳ ಜಾಗವನ್ನು ಆಯಾಯ ಧಾರ್ಮಿಕ ಮಂದಿರಗಳ ಹೆಸರಿಗೆ ಮಾಡಿಕೊಟ್ಟಿದ್ದಾರೆ? ಇವರ ಬಾಯಲ್ಲಿ ರಾಜಕೀಯವೆಂದರೆ ಕೇವಲ ಓಟ್‍ಗಾಗಿ ಮಾತ್ರನಾ? ನಾನು ಶಾಸಕನಾಗಿ ಈ ಕೆಲಸಕ್ಕೆ ಕೈ ಹಾಕಿದ್ದು, ಮುಂಬರುವ ದಿನಗಳಲ್ಲಿ ಸರಕಾರಿ ಜಾಗದಲ್ಲಿರುವ ಹಿಂದೂ, ಮುಸಲ್ಮಾನ, ಕ್ರೈಸ್ತ ಸೇರಿದಂತೆ ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳ ಜಾಗಗಳನ್ನು ಆಯಾಯ ಧಾರ್ಮಿಕ ಕೇಂದ್ರಗಳ ಹೆಸರಿಗೆ ಮಾಡಿಕೊಡುತ್ತೇನೆ. ನಾನು ಯಾವತ್ತೂ ರಾಜಕೀಯ ರಹಿತವಾಗಿ ಅಭಿವೃದ್ಧಿಯ ರಾಜಕೀಯ ಮಾಡುತ್ತೇನೆಯೇ ಹೊರತು, ಬಿಜೆಪಿಯವರಂತೆ ಸುಳ್ಳಿನ, ಧರ್ಮದ ರಾಜಕೀಯ ಮಾಡಲ್ಲ. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಅಭಿವೃದ್ಧಿಗೆ 352 ಕೋ.ರೂ. ಅನುದಾನವನ್ನು ತಂದಿದ್ದೇನೆ. ಇಲ್ಲಿನ ಮಸೀದಿಯ ಬಳಿಯೂ ತಡೆಗೋಡೆ ಕಟ್ಟಲು ಅನುದಾನವನ್ನು ನೀಡಿದ್ದೇನೆ. ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ತಂದಿದ್ದೇನೆ. ಬೀರಮಲೆ ಗುಡ್ಡ ಅಭಿವೃದ್ಧಿ ಮಾಡಿದ್ದೇನೆ. ನಿವೇಶನವಿಲ್ಲದವರಿಗೆ ನಿವೇಶನಕ್ಕೆಂದು 12 ಗ್ರಾಮಗಳಲ್ಲಿ 300 ಎಕರೆಯಷ್ಟು ಜಾಗವನ್ನು ಮೀಸಲಿರಿಸಿದ್ದೇನೆ. ಇದರಲ್ಲಿ 2 ಸಾವಿರ ನಿವೇಶನ ರಹಿತರಿಗೆ ನಿವೇಶನ ನೀಡುವ ಕೆಲಸ ಆಗಲಿದೆ. ಪುತ್ತೂರಿನಲ್ಲಿ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ ನಿರ್ಮಾಣಕ್ಕೆಂದು 75 ಕೋ.ರೂ. ಅನುದಾನ ತಂದಿದ್ದೇನೆ. ಲಂಚ ಕೊಡದ ಕಾರಣ ಬಾಕಿ ಉಳಿದ ಜನರ 94 ಸಿ, ಅಕ್ರಮ ಸಕ್ರಮವನ್ನು ರಾಜಕೀಯ ರಹಿತವಾಗಿ ಯಾವುದೇ ಭ್ರಷ್ಟಾಚಾರವಿಲ್ಲದೆ ಮಾಡಿಕೊಟ್ಟಿ ದ್ದೇನೆ. ಹೀಗೆ ಕ್ಷೇತ್ರದ ಜನತೆಯನ್ನು ಧರ್ಮ, ಪಕ್ಷದ ಆಧಾರದಲ್ಲಿ ವಿಂಗಡಿಸದೇ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಿದ್ದೇನೆ. ಅದು ಬಿಟ್ಟು ಬಿಜೆಪಿಯವರಂತೆ ಕೀಳು ಮಟ್ಟದ ರಾಜಕೀಯ ಮಾಡಿಲ್ಲ, ಮಾಡೋದು ಇಲ್ಲ ಎಂದರು.

ಕೆಪಿಸಿಸಿ ವಕ್ತಾರ ಎಂ.ಜಿ. ಹೆಗ್ಡೆ ಮಾತನಾಡಿ, ಅಪಪ್ರಚಾರ, ದ್ವೇಷ ಭಾಷಣವೇ ಬಿಜೆಪಿಯವರ ಪ್ರಧಾನ ಅಸ್ತ್ರವಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಎಲ್ಲೂ ಇಲ್ಲದ ಸಮಸ್ಯೆ ಶಿಕ್ಷಿತರ ಜಿಲ್ಲೆ ಎನಿಸಿಕೊಂಡಿರುವ ಕರಾವಳಿ ಜಿಲ್ಲೆಗಳಿಗೆ ಅಂಟಿಕೊಂಡಿದೆ. ಕೋಮು ದ್ವೇಷ ಹೀಗೆಯೇ ಮುಂದುವರಿದರೆ ಇಲ್ಲಿನ ಆರ್ಥಿಕ ತೆಯೇ ನೆಲಕಚ್ಚಿ ಹೋಗಲಿದ್ದು, ಮುಂದಿನ 10 ವರ್ಷದಲ್ಲಿ ಕರಾವಳಿಯು ಅನಾಥವಾಗಲಿದೆ. ಎಲ್ಲರನ್ನೂ ಸಮಾನವಾಗಿ ಕಾಣುವುದೇ ಹಿಂದೂ ಧರ್ಮದ ದಾರಿ. ಆದರೆ ಬಿಜೆಪಿಯವರ ಹಿಂದುತ್ವವೆಂದರೆ ಅದು ಕೇವಲ ಬ್ಯಾಲೆಟ್ ಪೇಪರ್‍ನ ಹಿಂದುತ್ವವಾಗಿದೆ. ಜಿಲ್ಲೆಯಲ್ಲಿ ಈಗಿನ ಪೊಲೀಸರ ಕ್ರಮ ಉತ್ತಮವಾಗಿದ್ದು, ಹೀಗಿದ್ದಾಗ ಮಾತ್ರ ಕರಾವಳಿಯಲ್ಲಿ ಶಾಂತಿ ನೆಲೆಸಲು ಸಾಧ್ಯ. ಅಪಪ್ರಚಾರ, ದ್ವೇಷ ಭಾಷಣ ಜಿಲ್ಲೆಗೆ ಮಾರಕವಾಗಿದ್ದು, ಅದು ಮುಕ್ತವಾದಾಗ ಮಾತ್ರ ಜಿಲ್ಲೆ ಅಭಿವೃದ್ಧಿ ಕಾಣಲು ಸಾಧ್ಯ. ಆದರೆ ಅಪಪ್ರಚಾರ, ದ್ವೇಷ ಭಾಷಣದ ಮೂಲಕ ಬಿಜೆಪಿಯವರು ಜನರನ್ನು ದಾರಿ ತಪ್ಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಮಾತನಾಡಿ, ಬಿಜೆಪಿಯ ಹುಟ್ಟುಗುಣ ಸುಳ್ಳೇ ಆಗಿದ್ದು, ಸತ್ಯ ಹೇಳುವ ಗುಣ ಅವರಲ್ಲಿಲ್ಲ. ಅವರಲ್ಲಿ ಸತ್ಯ ಮಾತನಾಡಲೂ ಏನೂ ಇಲ್ಲ. ಹಾಗಾಗಿ ಗ್ರಾ.ಪಂ.ನಿಂದ ಎಂ.ಪಿ. ತನಕ ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ಸುಳ್ಳಿನ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುವ ಮೂಲಕ ಅಧಿಕಾರ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ಇಂದು ದೇಶದ ಅಭಿವೃದ್ಧಿ ಜವಾಹರಲಾಲ್ ನೆಹರೂ ಅವರ ಪಂಚತಂತ್ರ ಯೋಜನೆಯ ಕನಸೇ ಕಾರಣ. ಈ ದೇಶದ ಬಡವರಿಗಾಗಿ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದ ಕಾಲದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೆ, ಈಗ ಪ್ರಧಾನಿಯಾಗಿರುವ ಮೋದಿಯವರು ಉದ್ಯಮಿಗಳ ಅನುಕೂಲಕ್ಕಾಗಿ ಬ್ಯಾಂಕ್‍ಗಳನ್ನು ವಿಲೀನಗೊಳಿಸುವ ಕೆಲಸ ಮಾಡಿದರು. ಇದರಿಂದಾಗಿ ಅವಿಭಜಿತ ದ.ಕ. ಕನ್ನಡ ಜಿಲ್ಲೆಯಲ್ಲಿ ಹುಟ್ಟಿ ರಾಷ್ಟ್ರ ಮಾನ್ಯತೆ ಪಡೆದಿರುವ ಬ್ಯಾಂಕ್‍ಗಳನ್ನು ನಾವು ಕಳೆದುಕೊಳ್ಳಬೇಕಾಯಿತು. ತುರ್ತು ಪರಿಸ್ಥಿತಿಗಿಂತ ಹೆಚ್ಚಾಗಿ ಜನರಿಗೆ ತೊಂದರೆಯಾಗಿದ್ದು ಕೇಂದ್ರ ಸರಕಾದ ಮಾಡಿದ ನೋಟ್ ಬ್ಯಾನ್. ಕಾಂಗ್ರೆಸ್ ಸರಕಾರ ಜಾರಿಗೆ ಕಾರ್ಯಕ್ರಮಗಳ ಹೆಸರು ಬದಲಾವಣೆ ಮಾಡುವುದು ಬಿಟ್ಟರೆ ಬಿಜೆಪಿಯಿಂದ ಬೇರೆ ಅಭಿವೃದ್ಧಿ ಆಗಿಲ್ಲ. ಇಚ್ಛಾಶಕ್ತಿಯಿದ್ದರೆ ಯಾವ ರೀತಿ ತನ್ನ ಕ್ಷೇತ್ರಕ್ಕೆ ಅನುದಾನ ತರಬಹುದು ಎಂಬುದನ್ನು ಬಿಜೆಪಿ ಶಾಸಕರು ಅಶೋಕ್ ಕುಮಾರ್ ರೈಯವರನ್ನು ನೋಡಿ ಕಲಿತುಕೊಳ್ಳಲಿ ಎಂದರು.

ವೇದಿಕೆಯಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ, ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ವಿಟ್ಲ- ಉಪ್ಪಿನಂಗಡಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೌಸೀಫ್ ಯು.ಟಿ., ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಲಲಿತಾ, ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಉಪ್ಪಿನಂಗಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಆದಂ ಕೊಪ್ಪಳ, 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್, ಹಿರೇಬಂಡಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಪಟಾರ್ತಿ, ಕೋಡಿಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಪಮ್ಮನಮಜಲು, ಭೂ ನ್ಯಾಯ ಮಂಡಳಿಯ ಸದಸ್ಯ ಅಬ್ದುರ್ರಹ್ಮಾನ್ ಯುನಿಕ್, ಕಾಂಗ್ರೆಸ್ ಮುಖಂಡರಾದ ಶಬೀರ್ ಕೆಂಪಿ, ವಿಕ್ರಂ ರೈ ಅಂತರ, ಶಿವಪ್ರಸಾದ್ ರೈ ಕೋಡಿಂಬಾಡಿ, ಇಬ್ರಾಹೀಂ ಕುಕ್ಕುಜೆ, ವೆಂಕಪ್ಪ ಪೂಜಾರಿ ಮರುವೇಲು, ಜಯವಿಕ್ರಮ್ ತಣ್ಣೀರುಪಂಥ, ಈಸುಬು ಪೆದಮಲೆ, ಇಬ್ರಾಹೀಂ ಆಚಿ, ಲತೀಫ್ ರಾಮನಗರ, ಅಬ್ದುಲ್ ಖಾದರ್ ಆದರ್ಶನಗರ, ಸೇಸಪ್ಪ ನೆಕ್ಕಿಲು, ಜಾನ್ ಕೆನ್ಯೂಟ್, ಅಬ್ದುರ್ರಹ್ಮಾನ್ ಕೆ. ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯದರ್ಶಿ ನಝೀರ್ ಮಠ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X