Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ರಿಗೆ...

ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ರಿಗೆ 'ರಂಗಚಾವಡಿ-2023' ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ4 Dec 2023 3:00 PM IST
share
ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ-2023 ಪ್ರಶಸ್ತಿ ಪ್ರದಾನ

ಸುರತ್ಕಲ್, ಡಿ.4: 'ರಂಗಚಾವಡಿ' ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.

ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ದಂಪತಿಯನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ 'ರಂಗಚಾವಡಿ-2023' ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭ ಉದ್ಘಾಟಿಸಿ ನೆರವೇರಿಸಿ ಮಾತಾಡಿದ ಮುಂಬೈಯ ಹೇರಂಭ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, 'ರಂಗಚಾವಡಿ ಸಂಘಟನೆ ಹಿರಿಯ ಕಲಾವಿದರನ್ನು ಗುರುತಿಸಿ ಸನ್ಮಾನಿಸುವುದು ಶ್ಲಾಘನೀಯ ವಿಚಾರ. ಇಂದು ಸನ್ಮಾನಿಸಲ್ಪಟ್ಟಿರುವ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ ಸಾಧನೆ ಹಾಗೂ ಮಹಾ ವ್ಯಕ್ತಿತ್ವ ಮೆಚ್ಚುವಂತದ್ದು. ರಂಗಚಾವಡಿ ಮಂಗಳೂರು ಸಂಸ್ಥೆ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತಿದೆ. ಅತ್ಯಂತ ಯೋಗ್ಯ ವ್ಯಕ್ತಿಯನ್ನು ಸನ್ಮಾನಿಸಿರುವುದು ಖುಷಿ ತಂದಿದೆ. ದೇವರು ಕೊಡಿಯಾಲ್ ಬೈಲ್ ರ ಕಲೆಯನ್ನು ಇನ್ನಷ್ಟು ಆಶೀರ್ವದಿಸಲಿ' ಎಂದರು.

ಸನ್ಮಾನ ಸ್ವೀಕರಿಸಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, "ಇದು ಅರ್ಜಿ ಹಾಕದೇ ಸಿಗುತ್ತಿರುವ ಪ್ರಶಸ್ತಿ. ಯಾವುದೇ ಲಾಬಿಯಿಲ್ಲದೆ ಕಲಾವಿದರ ಶ್ರಮವನ್ನು ಗುರುತಿಸಿ ರಂಗ ಚಾವಡಿ ಸಂಘಟನೆ ಪ್ರಶಸ್ತಿ ನೀಡುತ್ತಿರುವ ಕಾರಣ ಇದಕ್ಕೆ ಮೌಲ್ಯ ಜಾಸ್ತಿ. ಹೀಗಾಗಿ ಬೇರೆ ಪ್ರಶಸ್ತಿಗಿಂತ ಇದನ್ನು ಪಡೆಯುವಾಗ ಆಗುತ್ತಿರುವ ಖುಷಿಯೇ ಬೇರೆ. ರಂಗಭೂಮಿಯಲ್ಲಿ ವಿಭಿನ್ನ, ವಿನೂತನ ಪ್ರಯೋಗ ಮಾಡುತ್ತಿರುವ ನನಗೆ ನಿಮ್ಮೆಲ್ಲರ ಪ್ರೀತಿ ತುಂಬಿದ ಸಹಕಾರ ಇದೇ ರೀತಿ ಇರಲಿ" ಎಂದರು.

ಕೊಡಿಯಾಲ್ ಬೈಲ್ ಸಾಧನೆ ಅಭೂತಪೂರ್ವ: ಐಕಳ

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, "ತುಳುನಾಡಿನಲ್ಲಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾಡಿರುವ ಸಾಧನೆ ಅಭೂತಪೂರ್ವವಾದುದು. ಶಿವದೂತೆ ಗುಳಿಗೆ ನಾಟಕ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅವರಿಗೆ 2023 ರ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಯ ಗೌರವ ಹೆಚ್ಚಾಗಿದೆ. ಸಮಾಜದಲ್ಲಿ ಎಲ್ಲರೂ ಶ್ರೀಮಂತರಿರುವುದಿಲ್ಲ. ಬಡವರನ್ನು ಪ್ರೀತಿಯಿಂದ ಕಾಣಬೇಕು. ಹಣವನ್ನು ಕೂಡಿಡುವ ಬದಲು ಯೋಗ್ಯರಿಗೆ ದಾನ ಮಾಡಬೇಕು. ಆಗ ನಮ್ಮ ಬದುಕು ಸಾರ್ಥಕವಾಗುತ್ತದೆ" ಎಂದರು.

ಶ್ರೀ ಡೆವಲಪರ್ಸ್ ಕಟೀಲು ಇದರ ಆಡಳಿತ ನಿರ್ದೇಶಕ ಗಿರೀಶ್ ಎಂ. ಶೆಟ್ಟಿ ಕಟೀಲು ಮಾತನಾಡಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ನಾಟಕ ತಂಡದಿಂದ ಅನೇಕ ಯಶಸ್ವಿ ನಾಟಕಗಳ ಪ್ರದರ್ಶನ ಆಗಿದೆ. ಶಿವದೂತೆ ಗುಳಿಗೆ ಚಾರಿತ್ರಿಕ ದಾಖಲೆ ನಿರ್ಮಿಸಿದೆ. ಇದೀಗ ಮೈತಿದಿ ಹೊಸತನದಿಂದ ಕೂಡಿದ್ದು ಪ್ರೇಕ್ಷಕರ ಮನಗೆದ್ದಿದೆ ಎಂದರು.

ವೇದಿಕೆಯಲ್ಲಿ ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ, ಮನಪಾ ಸದಸ್ಯ ವರುಣ್ ಚೌಟ, ಬಂಟರ ಮಾತೃಸಂಘ ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್. ಪೂಂಜಾ, ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ,ಯಥಾರ್ಥ್ ಸೋಶಿಯಲ್ ಮಂಗಳೂರು ಇದರ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಉಪಸ್ಥಿತರಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಅಭಿನಂದನಾ ಭಾಷಣ ಮಾಡಿದರು.

ನಿತೇಶ್ ಶೆಟ್ಟಿ ಎಕ್ಕಾರ್, ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ 'ಮೈತಿದಿ' ನಾಟಕ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X