ಲಿಯೋ ಸಿಂಕ್ 2024: ನೃತ್ಯ ಸ್ಪರ್ಧೆ, ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು, ನ.30: ಯುವ ಶಕ್ತಿ ಸದುದ್ದೇಶದಿಂದ ಒಂದಾಗಿ ಕೆಲಸ ಮಾಡಿದಾಗ ಯಾವುದೇ ಕಾರ್ಯವು ಅಸಾಧ್ಯವಲ್ಲ ಎಂದು ಲಯನ್ಸ್ ಸಂಸ್ಥೆಯ ಪೂರ್ವ ಅಂತಾರಾಷ್ಟ್ರೀಯ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ ಹೇಳಿದರು.
ನಗರದ ಪುರಭವನದಲ್ಲಿ ಇತ್ತೀಚೆಗೆ ನಡೆದ ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯ ಜಿಲ್ಲೆ 317ಡಿಯ ಲಿಯೋ ಜಿಲ್ಲೆಯ ವತಿಯಿಂದ ಆಯೋಜಿಸಲ್ಪಟ್ಟ ನೃತ್ಯ ಸ್ಪರ್ಧೆ ಲಿಯೋ ಸಿಂಕ್2024ರ ಸಮಾರೋಪದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದ ವಿವಿಧ ಭಾಗಗಳು ಹಾಗೂ ಕಾಸರಗೋಡಿನಿಂದ ಆಗಮಿಸಿದ ಆಯ್ದ 11 ತಂಡಗಳು ನೃತ್ಯ ಸ್ಪರ್ಧೆಯಲ್ಲಿ ಭಾಗವಹಿದ್ದವು. 35 ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರದಂತೆ ವಿದ್ಯಾರ್ಥಿ ವೇತನ ನೀಡಲಾಯಿತು.
ವೇದಿಕೆಯಲ್ಲಿ ಪ್ರಥಮ ಉಪ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ, ಸಂಪುಟ ಕಾರ್ಯದರ್ಶಿ ಗೀತಾ ರಾವ್, ಮಲ್ಟಿಪಲ್ ಲಿಯೋ ಅಧ್ಯಕ್ಷೆ ಸಿಯಾ ಸುಶೀಲ್, ಸುಮಿತ್ರಾ ಶೆಟ್ಟಿ, ಮೋಹನ್ ಕೊಪ್ಪಲ್, ವಿನೂತನ್ ಕಲಿವೀರ್, ರಿಶಾಲ್ ಡಿಸೋಜ, ಲೆಸ್ಟರ್ ವಿನಾಲ್ ಲಸ್ರಾಡೋ, ಶಮಂತ್ ಅಂಚನ್ ಉಪಸ್ಥಿತರಿದ್ದರು.
ನಿಕಟಪೂರ್ವ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜ ಹಾಗೂ ಲಿಯೋ ಸಂಯೋಜಕ ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಲಿಯೋ ಅಧ್ಯಕ್ಷೆ ಲಿಯೋ ಲ. ಸಮೀಕ್ಷಾ ರಿಯಾ ಸ್ವಾಗತಿಸಿದರು. ಪ್ರಸನ್ನ ಪೈ ಪ್ರಾರ್ಥನೆ ಸಲ್ಲಿಸಿದರು. ಅಪೇಕ್ಷಾ ನೇಹಾ ವಂದಿಸಿದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.