ಉಳ್ಳಾಲ: ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್- 2025 ಗೆ ಚಾಲನೆ

ಉಳ್ಳಾಲ: ಶಕ್ತಿ ಭಾರತ್ ವ್ಯಾಯಾಮ ಶಾಲೆ ಅಭಿವೃದ್ಧಿ ಯತ್ತ ಹೆಜ್ಜೆ ಇಡಬೇಕು. ಅಭಿವೃದ್ಧಿ ನಮ್ಮ ಗುರಿಯಾಗಬೇಕು. ಇದಕ್ಕೆ ಎಲ್ಲರ ಪ್ರೇರಣೆ ಅಗತ್ಯ ಎಂದು ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯ ನಾರಾಯಣ ಹೊಳ್ಳ ಹೇಳಿದ್ದಾರೆ
ಅವರು ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ ಉಳ್ಳಾಲ ಬೈಲ್ ಇದರ ಆಶ್ರಯದಲ್ಲಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು, ದ.ಕ. ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು ಇದರ ಸಹಯೋಗದೊಂದಿಗೆ ಅಂಬಿಕಾ ರೋಡ್ ಬಳಿ ಇರುವ ಗಟ್ಟಿ ಸಮಾಜ ಭವನದಲ್ಲಿ ಮೂರು ದಿನಗಳ ಕಾಲ ನಡೆಯುವ ಕರ್ನಾಟಕ ರಾಜ್ಯ ಮಟ್ಟದ ಸಬ್ ಜೂನಿಯರ್, ಜ್ಯೂನಿಯರ್, ಸೀನಿಯರ್, ಮಾಸ್ಟರ್ಸ್ , ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ -2025ಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಮಾತನಾಡಿ ಶುಭ ಹಾರೈಸಿದರು.
ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಗೌರವಾಧ್ಯಕ್ಷ ಚಂದ್ರಹಾಸ್ ಉಳ್ಳಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಚೀರುಂಬಾ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಶಕ್ತಿ ಭಾರತ್ ವ್ಯಾಯಾಮ ಶಾಲೆ ಅಧ್ಯಕ್ಷ ಹರೀಶ್ ಉಳ್ಳಾಲ ಬೈಲ್, ಪವರ್ ಲಿಫ್ಟಿಂಗ್ ಇಂಡಿಯಾ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ, ರವೀಂದ್ರ ರೈ ಕಲ್ಲಿಮಾರ್, ಸುರೇಶ್ ಚೌಟ, ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಉಪಾಧ್ಯಕ್ಷ ಪುರಂದರ ದಾಸ್ ಕೂಳೂರು, ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಅಧ್ಯಕ್ಷ ಎ.ಉಮೇಶ್ ಗಟ್ಟಿ, ನಗರಸಭೆ ಅಧ್ಯಕ್ಷ ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು ಸ್ವಾಗತಿಸಿದರು.
ಜಗದೀಶ್ ಸುಲಯ ವಂದಿಸಿದರು.







