ಮಂಗಳೂರು: ಕರ್ನಾಟಕ ಸ್ಟೇಟ್ ಪೊಲೀಸ್ ರನ್-2025

ಮಂಗಳೂರು, ಮಾ.9 : ಕರ್ನಾಟಕ ಸ್ಟೇಟ್ ಪೊಲೀಸ್ ರನ್-2025 ಇದರ ಅಂಗವಾಗಿ ಮಂಗಳೂರು ನಗರ ಪೊಲೀಸ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ ಸಹಕಾರದಲ್ಲಿ ರವಿವಾರ ನಗರದ ಮಂಗಳಾ ಕ್ರೀಡಾಂಗಣದಲ್ಲಿ ‘ಡ್ರಗ್ಸ್ ಮುಕ್ತ ಕರ್ನಾಟಕ’ಎಂಬ ಘೋಷವಾಕ್ಯದೊಂದಿಗೆ ಪೊಲೀಸ್ ರನ್ ಕಾರ್ಯಕ್ರಮ ನಡೆಯಿತು.
ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್, ದ.ಕ.ಜಿಪಂ ಸಿಇಒ ಡಾ. ಆನಂದ್ ಕೆ., ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್. ಮತ್ತಿತರರು ಉಪಸ್ಥಿರಿದ್ದರು.
ಸಾರ್ವಜನಿಕರು, ಪೊಲೀಸರು, ಸಂಘ ಸಂಸ್ಥೆಗಳ ಪ್ರಮುಖರ ಸಹಿತ ಸೇರಿ ಸಾವಿರಕ್ಕೂ ಅಧಿಕ ಮಂದಿ ಓಟದಲ್ಲಿ ಪಾಲ್ಗೊಂಡರು.
Next Story







