ಮಂಗಳೂರು| ಅಶ್ರಫ್‌ನ ಗುಂಪು ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 21ಕ್ಕೇರಿಕೆ
ತಲೆಮರೆಸಿಕೊಂಡಿದ್ದ ಆರೋಪಿ ಅನಿಲ್ ಬಂಧನ

ಮಂಗಳೂರು: ಕುಡುಪುವಿನಲ್ಲಿ ಮೊನ್ನೆ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಅನಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಗೋಕಾಕದಲ್ಲಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಕೃತ್ಯ ನಡೆದ ಬಳಿಕ ತಲೆಮರೆಸಿಕೊಂಡವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಘಟನೆ ನಡೆದ ದಿನ ಸ್ಥಳದಲ್ಲಿದ್ದ ಸುಮಾರು 15 ಮಂದಿಗೆ ನೋಟಿಸ್ ನೀಡಿ ವಿಚಾರಣೆಗೆ ಬರಲು ತಿಳಿಸಲಾಗಿದ್ದು, ಕೆಲವರ ವಿಚಾರಣೆ ನಡೆಯುತ್ತಿದೆ. ಕುಡುಪು ವ್ಯಾಪ್ತಿಯಲ್ಲಿರುವ ಸಿಸಿ ಕ್ಯಾಮರಾ ಪರಿಶೀಲಿಸಲಾಗುತ್ತಿದ್ದು, ಪ್ರತ್ಯಕ್ಷದರ್ಶಿಗಳ ಸಹಕಾರವನ್ನೂ ಪಡೆಯಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Next Story





