ದ.ಕ.ಜಿಲ್ಲೆ| ಪಿಯುಸಿ ಪರೀಕ್ಷೆ: 221 ವಿದ್ಯಾರ್ಥಿಗಳು ಗೈರು

ಮಂಗಳೂರು, ಮಾ.7: ದ.ಕ.ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ 221 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಇತಿಹಾಸ ಪರೀಕ್ಷೆಗೆ 9,656 ವಿದ್ಯಾರ್ಥಿಗಳು ಹಾಜರಾಗಿದ್ದರೆ, 174 ವಿದ್ಯಾರ್ಥಿಗಳು ಗೈರು ಹಾಜರಾಗಿ ದ್ದರು. ಭೌತಶಾಸ್ತ್ರ ಪರೀಕ್ಷೆಗೆ 17,540 ವಿದ್ಯಾರ್ಥಿಗಳು ಹಾಜರಾಗಿದ್ದರೆ, 47 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story