ಜ. 24ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಜಿಲ್ಲಾ ಪ್ರವಾಸ

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜ.24ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಬುಧವಾರ ಸಂಜೆ 5 ಗಂಟೆಗೆ ಮಂಗಳೂರು ಅಂತರ್‌ರಾಷ್ಟ್ರೀ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5:30ಕ್ಕೆ ಸುನ್ನೀ ಯುವಜನ ಸಂಘದ 30ನೇ ವರ್ಷಾಚರಣೆಯ ಸಮಾರೋಪ ಸಮ್ಮೇಳನ, ರಾತ್ರಿ 9ಕ್ಕೆ ನಗರದ ಡಿ.ಸಿ.ಸಿ. ಕಚೇರಿಯಲ್ಲಿ ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದ ಕುರಿತ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಗುರುವಾರ ಬೆ.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಉಪ ಮುಖ್ಯಮಂತ್ರಿ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





