Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತದಲ್ಲಿ 284 ಬಿಲಿಯನೇರ್‌ಗಳ ಸೃಷ್ಟಿ...

ಭಾರತದಲ್ಲಿ 284 ಬಿಲಿಯನೇರ್‌ಗಳ ಸೃಷ್ಟಿ ಮೋದಿ ಆಡಳಿತದ ಕೊಡುಗೆ: ಡಾ.ಕೆ ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ5 Oct 2025 8:10 PM IST
share
ಭಾರತದಲ್ಲಿ 284 ಬಿಲಿಯನೇರ್‌ಗಳ ಸೃಷ್ಟಿ ಮೋದಿ ಆಡಳಿತದ ಕೊಡುಗೆ: ಡಾ.ಕೆ ಪ್ರಕಾಶ್

ಮಂಗಳೂರು: ಭಾರತದಲ್ಲಿ ಕಾರ್ಮಿಕರು ಕೂಲಿಕಾರರು ಸೇರಿದಂತೆ ದುಡಿಯುವ ಜನರು ಹಸಿವಿನಿಂದ ಬಳುತ್ತಿದ್ದಾರೆ. ಹೊಸ ಹೊಸ ಕಾಯಿದೆಗಳು ದುಡಿಯುವ ಜನರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಇದರ ಪರಿಣಾಮ ಭಾರತ ದೇಶದಲ್ಲಿ 284 ಬಿಲಿಯನೇರ್ ಗಳು ಸೃಷ್ಠಿಯಾಗಿದ್ದಾರೆ ಎಂದು ಸಿಐಟಿಯು ಕರ್ನಾಟಕ ರಾಜ್ಯ ಉಪಾಧ್ಯಕ್ಷ ಡಾ.ಕೆ ಪ್ರಕಾಶ್ ಹೇಳಿದ್ದಾರೆ.

ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ಕನಿಷ್ಠ ಕೂಲಿ,ಪಿಂಚಣಿ ಸಾಮಾಜಿಕ ಭದ್ರತೆಗಾಗಿ,ಜಿಲ್ಲೆಯ ಸೌಹಾರ್ದತಾ ಪರಂಪರೆಯ ಉಳಿವಿಗಾಗಿ ಎಂಬ ಘೋಷವಾಕ್ಯದೊಂದಿಗೆ ಬೋಳಾರದ ಎಸ್‌ಕೆ ಟೈಲ್ ವರ್ಕರ್ಸ್ ಯೂನಿಯನ್‌ನ ಸಭಾಂಗಣದಲ್ಲಿ ರವಿವಾರ ಆರಂಭಗೊಂಡ ಎರಡು ದಿನಗಳ ಸಿಐಟಿಯು 18ನೇ ದ.ಕ.ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ನವ ಉದಾರೀಕರಣದ ನೀತಿಗಳು ಅನುಷ್ಠಾನಗೊಂಡು ಮೂರು ದಶಕಗಳ ಈ ಅವಧಿಯಲ್ಲಿ ಭಾರತ ಅರ್ಥಿಕ ಸಮಾನತೆಯ ಉತ್ತುಂಗಕ್ಕೆ ತಲುಪಿದೆ.ನವ ಉದಾರೀಕರಣ ನೀತಿಗಳ ಪೂರ್ವದಲ್ಲಿ ಭಾರತದಲ್ಲಿ ಬಿಲಿಯನೇರ್‌ ಗಳು ಇರಲಿಲ್ಲ. ಈ ರೀತಿಯ ಬಡತನವೂ ಇರಲಿಲ್ಲ ಎಂದರು.

284 ಬಿಲಿಯನೇರ್‌ಗಳ ಕೈಯಲ್ಲಿ ಭಾರತ ದೇಶದ ಎರಡು ವರ್ಷಗಳ ಬಜೆಟ್ ಮೌಲ್ಯದಷ್ಟು ಸಂಪತ್ತು ಶೇಖರಣೆ ಗೊಂಡಿದೆ. ಇದರ ಪರಿಣಾಮವಾಗಿ ಹಸಿವು ಬಡತನ ನಿರುದ್ಯೋಗ ಅನಾರೋಗ್ಯ ಮಿತಿಮೀರುತ್ತಿದೆ.ಇದು ಅಂದಿನ ಕಾಂಗ್ರೆಸ್ ಆಡಳಿತದಲ್ಲಿ ಪ್ರಾರಂಭಗೊಂಡು ಪ್ರಸ್ತುತ ನರೇಂದ್ರ ಮೋದಿ ಕಾಲದಲ್ಲಿ ಉತ್ತುಂಗವನ್ನು ತಲುಪಿದೆ. ಇಂದು ಭಾರತದ ಆಡಳಿತವು ಈ ಬಿಲಿಯನೇರ್ ಗಳ ಮೂಗಿನ ನೇರಕ್ಕೆ ನಡೆಯುತ್ತಿದೆ. ನೀತಿಗಳೆಲ್ಲವೂ ಅವರ ಪರವಾಗಿ ರೂಪುಗೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ದುಡಿಯುವ ವರ್ಗದ ಪರವಾಗಿ ಯಾವುದೇ ನೀತಿಗಳನ್ನು ಜಾರಿಗೊಳಿಸುತ್ತಿಲ್ಲ.ಇಂತಹ ಸರಕಾರಗಳ ಆಕ್ರಮಣಕಾರಿ ನೀತಿಗಳನ್ನು ಕಾರ್ಮಿಕ ವರ್ಗ ಸಮರಶೀಲ ಹೋರಾಟಗಳ ಮೂಲಕವೇ ಹಿಮ್ಮೆಟ್ಟಿಸಲು ಸಾಧ್ಯ ಅವರು ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಿಐಟಿಯು ದ.ಕ.ಜಿಲ್ಲಾಧ್ಯಕ್ಷ ಜೆ ಬಾಲಕೃಷ್ಣ ಶೆಟ್ಟಿ ಅವರು ದ.ಕ.ಜಿಲ್ಲೆಯ ಕಾರ್ಮಿಕ ಚಳುವಳಿಯ ಧೀರೋದತ್ತವಾದ ಹೋರಾಟಗಳನ್ನು ಮೆಲುಕು ಹಾಕುತ್ತಾ, ಮುಂಬರುವ ದಿನಗಳಲ್ಲಿ ಬಲಿಷ್ಠವಾದ ಕಾರ್ಮಿಕ ಚಳುವಳಿಯನ್ನು ಕಟ್ಟುವ ಮೂಲಕ ಜಿಲ್ಲೆಯ ಸೌಹಾರ್ದತಾ ಪರಂಪರೆಯನ್ನು ಉಳಿಸಲು ಕಾರ್ಮಿಕ ವರ್ಗ ಕಟಿಬದ್ದರಾಗಿ ಶ್ರಮಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ವಸಂತ ಅಚಾರಿ, ಸುಕುಮಾರ್ ತೊಕ್ಕೊಟು, ಬಿ ಎಂ.ಭಟ್,ರಮಣಿ ಮೂಡಬಿದ್ರೆ, ಪದ್ಮಾವತಿ ಶೆಟ್ಟಿ, ವಸಂತಿ ಕುಪ್ಪೆಪದವು, ಸುಂದರ ಕುಂಪಲ, ಗಿರಿಜಾ, ಮತ್ತಿತರರು ಉಪಸ್ಥಿತರಿದ್ದರು.

ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ನಿರ್ಣಯವನ್ನು ಇದೇ ಸಂದರ್ಭದಲ್ಲಿ ಯೋಗೀಶ್ ಜಪ್ಪಿನಮೊಗರು ಮಂಡಿಸಿ ದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತು ಗಳನ್ನಾಡಿದರು. ಜಿಲ್ಲಾ ಉಪಾಧ್ಯಕ್ಷ ರವಿಚಂದ್ರ ಕೊಂಚಾಡಿ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X