ಕೇಂದ್ರ ಸರ್ಕಾರದಿಂದ ಎಸ್ಸಿ-ಎಸ್ಟಿ, ಮಹಿಳೆಯರಿಗೆ 2,946 ಕೋಟಿ ಸಾಲ: ಸಂಸದ ಚೌಟ ಪ್ರಶ್ನೆಗೆ ಕೇಂದ್ರ ಸಚಿವರಿಂದ ಮಾಹಿತಿ

ಬ್ರಿಜೇಶ್ ಚೌಟ
ಹೊಸದಿಲ್ಲಿ, ಜು.21: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ ಇಡೀ ದೇಶ ದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು 2,946 ಕೋಟಿ ರೂ. ಬ್ಯಾಂಕ್ ಸಾಲವನ್ನು ಮಂಜೂರು ಮಾಡಲಾಗಿದ್ದು, ಆ ಮೂಲಕ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಕೇಳಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಹಣಕಾಸು ಸಚಿವಾಲಯ ನೀಡಿರುವ ಉತ್ತರದ ಪ್ರಕಾರ, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಹಿಂದುಳಿದ ಸಮುದಾಯಗಳನ್ನು ಸ್ವಂತ ಉದ್ಯಮ ಸ್ಥಾಪಿಸಿ ಸ್ವಾವಲಂಬಿಯಾಗಿಸುವ ಮೂಲಕ ಯುವ ಉದ್ದಿಮೆದಾರ ರನ್ನು ತಯಾರಿಸುವಲ್ಲಿ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿ ಬ್ಯಾಂಕ್ಗಳಿಂದ ಕರ್ನಾಟಕಕ್ಕೆ ಹೆಚ್ಚಿನ ಸಾಲದ ನೆರವನ್ನು ಕೇಂದ್ರ ಸರಕಾರ ನೀಡಿದೆ. 2018ರ ಎಪ್ರಿಲ್ನಿಂದ 2025ರ ಮಾರ್ಚ್ ಅವಧಿ ಯಲ್ಲಿ ಒಟ್ಟು 13,389 ಸಾಲದ ಖಾತೆಗಳನ್ನು ಹೊಂದಿವೆ. ಈ ಯೋಜನೆಯು 2016ರಲ್ಲಿ ಪ್ರಾರಂಭವಾ ಗಿದ್ದು, ಇಲ್ಲಿವರೆಗೆ 16,846 ಸಾಲದ ಖಾತೆಗಳನ್ನು ಹೊಂದುವ ಮೂಲಕ ಒಟ್ಟು 3,750.40 ಕೋಟಿ ರೂ. ಸಾಲವನ್ನು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿ ಕರ್ನಾಟಕದ ಅರ್ಹ ಫಲಾನುಭವಿಗಳು ಪಡೆದು ಕೊಂಡಿದ್ದಾರೆ.
ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿ ಮಹಿಳೆಯರು ಒಳಗೊಂಡಂತೆ ಪರಿಶಿಷ್ಟ ಜಾತಿಯ ಫಲಾನು ಭವಿಗಳು 3,108 ಖಾತೆಗಳನ್ನು ಹೊಂದಿದ್ದು, 661.10 ಕೋಟಿ ಸಾಲ ನೀಡಲಾಗಿದೆ. ಹಾಗೆಯೇ ಪರಿಶಿಷ್ಟ ಪಂಗಡದವರು 868 ಖಾತೆಗಳನ್ನು ಹೊಂದಿದ್ದು, 166.96 ಕೋಟಿ ಬ್ಯಾಂಕ್ ಸಾಲ ಒದಗಿಸಲಾಗಿದೆ. ಇನ್ನು ಸಾಮಾನ್ಯ ಮಹಿಳಾ ವಿಭಾಗದಡಿ 12,870 ಸಾಲದ ಖಾತೆಯನ್ನು ಹೊಂದಿದ್ದು, 2,922.34 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರವು ಈ ಯೋಜನೆಯಡಿ ಕರ್ನಾಟಕದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ದಿಮೆ ದಾರ ಆಕಾಂಕ್ಷಿಗಳನ್ನು ಆರ್ಥಿಕ ಸೇರ್ಪಡೆಗೊಳಿಸುವಲ್ಲಿ ಭದ್ರ ಅಡಿಪಾಯವನ್ನು ಹಾಕುತ್ತಿದೆ ಎನ್ನುವುದಕ್ಕೆ ಕಳೆದ ಕಳೆದ ಐದಾರು ವರ್ಷಗಳಲ್ಲಿ ನೀಡಿರುವ ಬ್ಯಾಂಕ್ ಸಾಲದ ಪ್ರಮಾಣವೇ ಸಾಕ್ಷಿ ಎಂದು ಸಂಸದ ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ.







