Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶೀಘ್ರವೇ ಭಾರತ 3ನೆ ಅತಿದೊಡ್ಡ ಆರ್ಥಿಕ...

ಶೀಘ್ರವೇ ಭಾರತ 3ನೆ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ವಾರ್ತಾಭಾರತಿವಾರ್ತಾಭಾರತಿ11 Jan 2025 5:57 PM IST
share
ಶೀಘ್ರವೇ ಭಾರತ 3ನೆ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ಮಂಗಳೂರು, ಜ.11: ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆದ ಸಂದರ್ಭದಲ್ಲಿ ನಮ್ಮ ದೇಶದ ಆರ್ಥಿಕತೆ ದುರ್ಬಲವಾಗಿದ್ದು, ಅದನ್ನು ಬಲು ಎಚ್ಚರಿಕೆಯಿಂದ ನಿಭಾಯಿಸಬೇಕಾದ ಪರಿಸ್ಥಿತಿ ಇತ್ತು. ಇದೀಗ ನಾವು 10ನೇ ಸ್ಥಾನದಿಂದ ಐದಕ್ಕೇರಿದ್ದು, ಶೀಘ್ರವೇ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದ್ದೇವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಭಾರತ್ ಫೌಂಡೇಶನ್ ವತಿಯಿಂದ ನಗರದ ಡಾ.ಟಿ.ಎಂ.ಎ.ಪೈ ಇಂಟರ್‌ನ್ಯಾಷನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಆಯೋಜಿಸಲಾಗಿರುವ ಲಿಟ್ ಫೆಸ್ಟ್‌ನ (ಸಾಹಿತ್ಯ ಉತ್ಸವ) 7ನೇ ಆವೃತ್ತಿಯ ಪ್ರಥಮ ದಿನ ಶನಿವಾರ ಎನರ್ಜಿ ಫಾರ್ ಸರ್ವೈವಲ್, ಸೆಕ್ಯುರಿಟಿ ಆ್ಯಂಡ್ ಕ್ಲೈಮೆಟ್ ವಿಷಯ ಕುರಿತು ನಡೆದ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತದ ಇಂದನ ಬಳಕೆಯ ಮಾದರಿಗಳು ಅಭೂತಪೂರ್ವವಾಗಿವೆ. ದೇಶದಲ್ಲಿ ಸುಮಾರು 67 ಮಿಲಿಯನ್ ಜನರು ನಿಯಮಿತವಾಗಿ ಪೆಟ್ರೋಲ್, ಡೀಸೆಲ್ ಮತ್ತು ಬ್ಯಾಟರಿ ಸಾಧನಗಳನ್ನು ಬಳಸುತ್ತಾರೆ. ದೇಶದ ಕಚ್ಚಾ ತೈಲ ಬಳಕೆಯು 5 ಮಿಲಿಯನ್‌ನಿಂದ 5.4 ಶತಕೋಟಿ ಬ್ಯಾರೆಲ್‌ಗಳಿಗೆ ಏರಿಕೆಯಾಗಿದೆ. ಇದು ಶೀಘ್ರದಲ್ಲೇ ದಿನಕ್ಕೆ 6-7 ಮಿಲಿಯನ್ ಬ್ಯಾರೆಲ್‌ಗಳನ್ನು ತಲುಪಬಹುದು. ಅಂತಾರಾಷ್ಟ್ರೀಯ ಇಂಧನ ಏಜೆನ್ಸಿಯ ಪ್ರಕಾರ ಜಾಗತಿಕ ಶಕ್ತಿಯ 25 ಶೇ. ರಷ್ಟು ಭಾರತ ಹೊಂದಿರುತ್ತದೆ ಎಂದರು.

ನಂದಕಿಶೋರ್ ಮುಖ್ಯ ಅತಿಥಿಯಾಗಿ ವಿಚಾರಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಲಿಟ್‌ಫೆಸ್ಟ್‌ನಲ್ಲಿ ಶನಿವಾರ ‘ಕನ್ನಡ ಸಾಹಿತ್ಯ ವಿಮರ್ಶೆ-ಒಂದು ಅಕಾಡೆಮಿಕ್ ಚರ್ಚೆ’ (ಜಿ.ಎಸ್.ಅಮೂರ ಶತಮಾನದ ನೆನಪು) ವಿಷಯದಲ್ಲಿ ಮಾತನಾಡಿದ ಡಾ.ಎನ್.ಎಸ್.ಗುಂಡೂರ, ಕಲಾಹೀನನಿಗೆ ಸಾಹಿತ್ಯ ಸುಗಂಧ ಬೆಸೆಯುವ ಕಾರ್ಯ ವಿಮರ್ಶೆಯಿಂದ ನಡೆಯಬೇಕಾಗಿದೆ ಎಂದರು.

ವಿಮರ್ಶೆಗೆ 100 ವರ್ಷಗಳ ಇತಿಹಾಸವಿದ್ದು, ಸಾಹಿತ್ಯವನ್ನು ಅಧ್ಯಯನ ಮಾಡುವ ಪ್ರಕಾರವೇ ವಿಮರ್ಶೆ. ಎಲ್ಲಾ ಸಾಹಿತ್ಯಕ್ಕೂ ಒಂದೇ ತೆರನಾದ ವಿಮರ್ಶೆ ಎಂಬ ಭಾವವಿದ್ದು, ಇದರಲ್ಲಿ ಬದಲಾವಣೆಯ ಅಗತ್ಯವಿದೆ ಎಂದರು.

ಡಾ.ಜಿ.ಬಿ.ಹರೀಶ ಮಾತನಾಡಿ, ಮೂಲ ಲೇಖಕನ ಆಶಯವನ್ನು ಧಾತುವಾಗಿರಿಸಿ ಮೂಲ ಕೃತಿಯ ರಸವನ್ನು ಹಿಂಡಿ ವಾಚಕರ ಮುಂದಿಡುವುದು ವಿಮರ್ಶೆ. ನಮ್ಮ ಕೃತಿ ವಿಮರ್ಶೆ ಆಗಿಲ್ಲ ಅಥವಾ ಆ ಕೃತಿಯ ವಿಮರ್ಶೆ ಅಧಿಕವಾಯಿತು ಎಂಬಿತ್ಯಾದಿ ಚರ್ಚೆ ಇರುವುದು ಸಹಜ. ಆದರೆ, ಒಂದು ಕೃತಿಯು ನಮ್ಮನ್ನು ಕೆಣಕುವ ಸಂದರ್ಭ ಬಂದಾಗ ಅಥವಾ ಅರ್ಥ ಆಗದಂತಹ ಸಂದರ್ಭ ಬಂದಾಗ ವಿಮರ್ಶೆ ಸಹಜವಾಗಿ ಹುಟ್ಟುತ್ತದೆ ಎಂದವರು ಹೇಳಿದರು.

ಡಾ.ಶ್ಯಾಮಸುಂದರ ಬಿದರ ಕುಂದಿ ಪ್ರತಿಕ್ರಿಯಿಸಿ, ಸೃಷ್ಟಿ ಮಾಡಿರುವುದರ ಬೆಳಕನ್ನು ಹೆಚ್ಚು ಮಾಡುವುದು ವಿಮರ್ಶೆ. ಕನ್ನಡದಲ್ಲಿ ವಿಮರ್ಶೆ ಅತ್ಯಂತ ಶಿಸ್ತಿನಿಂದ ಬೆಳೆದು ಬಂದಿದೆ ಎಂದರು. ಡಾ.ಕಾಖಂಡಕಿ ಹೆಚ್.ವಿ. ಸಂವಾದ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X