Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ...

ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ 3ನೇ ಹುಣ್ಣಿಮೆ ಮಖೆಕೂಟ ಸಂಪನ್ನ

ವಾರ್ತಾಭಾರತಿವಾರ್ತಾಭಾರತಿ14 March 2025 9:49 PM IST
share
ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ 3ನೇ ಹುಣ್ಣಿಮೆ ಮಖೆಕೂಟ ಸಂಪನ್ನ

ಉಪ್ಪಿನಂಗಡಿ: ಇಲ್ಲಿನ ಪುರಾಣ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ಅಮ್ಮನವರ ದೇವಳದಲ್ಲಿ ಮೂರನೇ ಮಖೆಜಾತ್ರೆಯಾದ ಹುಣ್ಣಿಮೆ ಮಖೆ ಜಾತ್ರೆಯು ಮೇ.ಮೂ. ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಪವಿತ್ರಪಾಣಿ ಶ್ರೀ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ಜರಗಿತು.

ಹುಣ್ಣಿಮೆ ಮಖೆ ಜಾತ್ರೆಯ ಪ್ರಯುಕ್ತ ಗುರುವಾರ ರಾತ್ರಿ ಬಲಿ ಹೊರಟು ಉತ್ಸವವಾಗಿ ರಥಬೀದಿಯಲ್ಲಿ ಭವ್ಯ ರಥೋತ್ಸವವು ನಡೆಯಿತು. ಈ ಬಾರಿ ವಿಶೇಷವಾಗಿ ನಡೆದ ಬ್ರಹ್ಮ ರಥಪೂಜೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದರು. ವಿಶ್ವಹಿಂದೂ ಪರಿಷತ್ ಉಪ್ಪಿನಂಗಡಿ ಪ್ರಖಂಡದ ಅಧ್ಯಕ್ಷ ಸುದರ್ಶನ್‍ ರವರ ನೇತೃತ್ವದಲ್ಲಿ ಆಕರ್ಷಕ ಸಿಡಿಮದ್ದು ಪ್ರದರ್ಶನ ಈ ಸಂದರ್ಭ ನಡೆಯಿತು. ಶುಕ್ರವಾರ ಪ್ರಾತಃ ಕಾಲದಿಂದಲೇ ನೇತ್ರಾವತಿ ಕುಮಾರಧಾರ ನದಿ ಸಂಗಮ ಸ್ಥಳದಲ್ಲಿ ಮಖೆ ತೀರ್ಥ ಸ್ನಾನದಲ್ಲಿ ಭಕ್ತರು ಭಾಗಿಯಾದರು. ಬಳಿಕ ದೇವಳದಲ್ಲಿ ಬಲಿ ಹೊರಟು ಉತ್ಸವ ದರ್ಶನ ಬಲಿ ಬಟ್ಟಲು ಕಾಣಿಕೆ ಮಹಾಕಾಳಿ ಅಮ್ಮನವರ ನೇಮಕ್ಕೆ ಪಡಿ ಅಕ್ಕಿ ಕೊಡುವ ಮೂಲಕ ಮಹಾಪೂಜೆ ಅನ್ನಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾೈಕ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ, ಪ್ರಧಾನ ಅರ್ಚಕರಾದ ಹರೀಶ್ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅರ್ತಿಲ ಕೃಷ್ಣರಾವ್ ಜಿ., ಬಿ. ಗೋಪಾಲಕೃಷ್ಣ ರೈ, ಸೋಮನಾಥ, ಜಿ. ಕೃಷ್ಣರಾವ್ ಆರ್ತಿಲ, ದೇವಿದಾಸ್ ರೈ ಬಿ., ಶ್ರೀಮತಿ ಅನಿತಾ ಕೇಶವ ಗೌಡ, ಎಂ. ವೆಂಕಪ್ಪ ಪೂಜಾರಿ, ನಿಕಟ ಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಪ್ರಮುಖರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಸಚಿನ್, ನಿತೇಶ್ ಗಾಣಿಗ, ತಿಮ್ಮಪ್ಪ ಗೌಡ, ಕೈಲಾರ್ ರಾಜಗೋಪಾಲ ಭಟ್, ಪ್ರತಾಪ್ ಪೆರಿಯಡ್ಕ, ಕರಾಯ ರಾಘವೇಂದ್ರ ನಾಯಕ್, ರಾಮಚಂದ್ರ ಮಣಿಯಾಣಿ, ವಿದ್ಯಾಧರ ಜೈನ್, ಸದಾನಂದ ನೆಕ್ಕಿಲಾಡಿ, ಪ್ರಶಾಂತ್ ಎನ್., ಸುಧಾಕರ ಶೆಟ್ಟಿ, ಸುರೇಶ್ ಅತ್ರಮಜಲು, ಧನಂಜಯ , ಜಯವಿಕ್ರಂ ಕಲ್ಲಾಪು, ಶ್ರೀನಿಧಿ ಉಪಾಧ್ಯಾಯ, ಯು.ರಾಮ, ಎನ್.ಪ್ರಭಾತ್ ಪೈ, ಸುಜೀರ್ ಗಣಪತಿ ನಾಯಕ್, ವೈ., ಸುನೀಲ್ ಕುಮಾರ್ ದಡ್ಡು, ಅನಂತ ಶೆಣೈ , ಕರಾಯ ಗಿರೀಶ್ ನಾಯಕ್, ಕೇಪುಳು ರಾಜೇಶ್ ನಾಯಕ್, ಹರಿರಾಮಚಂದ್ರ, ಸುನಿಲ್ ಅನಾವು, ರಾಜೇಶ. ಪೈ, ಎನ್. ಗೋಪಾಲ ಹೆಗ್ಡೆ, ನಾರಾಯಣ ಹೇರಳೆ, ದಿನೇಶ್ ಬೊಳ್ಳಾರ್, ನರಸಿಂಹ ಪಡಿಯಾರ್, ರವೀಂದ್ರ ಪೈ ವ್ಯವಸ್ಥಾಪಕ ವೆಂಕಟೇಶ ರಾವ್, ಗುಮಾಸ್ತ ಬಡಿಲ ಕೃಷ್ಣ ಪ್ರಸಾದ್, ದಿವಾಕರ ಗೌಡ, ಪದ್ಮನಾಭ ಕುಲಾಲ್, ಕೆ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X