ಜ. 30ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳೂರಿಗೆ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜ.30ರಂದು ಸಂಜೆ 4:30ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ.
ಸಮಾರಂಭಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರು ಆಗಮಿಸಲಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ,ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮತ್ತು ಜಿಲ್ಲೆಯ ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ಎಂ ಎಲ್‌ಸಿ, ಪ್ರತಾಪ ಸಿಂಹ ನಾಯಕ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





